Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...

​ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗೆ ಸಮನ್ಸ್: ಉಸ್ತುವಾರಿ ಕಾರ್ಯದರ್ಶಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 July 2018 11:56 PM IST
share
​ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗೆ ಸಮನ್ಸ್: ಉಸ್ತುವಾರಿ ಕಾರ್ಯದರ್ಶಿ ಸೂಚನೆ

ಉಡುಪಿ, ಜು.20: ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದೇ ಇರುವುದರಿಂದ ಪ್ರಾಧಿಕಾರದ ಉನ್ನತ ಅಧಿಕಾರಿಗೆ ಸಮನ್ಸ್ ಕಳುಹಿಸಿ ವಿಚಾರಣೆ ನಡೆಸುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತಿದ್ದರು.

ವಿಷಯ ಪ್ರಸ್ತಾಪಿಸಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದೇ, ಪದೇ ಪದೇ ನಿಗದಿತ ಗಡುವನ್ನು ವಿಸ್ತರಿಸುತ್ತಿದೆ. ಇದರಿಂದ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆಯಲ್ಲದೇ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗುತ್ತಿವೆ. ಈ ಬಗ್ಗೆ ಪ್ರಾಧಿಕಾರದ ಸ್ಥಳೀಯ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಉಸ್ತುವಾರಿ ಕಾರ್ಯದರ್ಶಿಗಳ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ದಕ್ಷಿಣ ವಲಯ ಮುಖ್ಯ ವ್ಯವಸ್ಥಾಪಕರಿಗೆ ಸಮನ್ಸ್ ಮಾಡಿ ಕರೆಸಿ, ಕಾಮಗಾರಿ ವಿಳಂಬದ ಬಗ್ಗೆ ವಿಚಾರಿಸುವಂತೆ ಅವರು ನಿರ್ದೇಶಿಸಿದರು.

ಇಲಾಖಾವಾರು ಪ್ರಗತಿ ಪರಿಶೀಲಿಸಿದ ಮಹೇಶ್ವರ ರಾವ್, ಜಿಲ್ಲೆಯಲ್ಲಿರುವ ಎಲ್ಲಾ ಮರದ ಕಾಲುಸಂಕಗಳನ್ನು ಕಾಂಕ್ರೀಟ್ ಸಂಕಗಳನ್ನಾಗಿ ಪರಿವರ್ತಿಸಬೇಕು. ಈ ಬಗ್ಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಗಮನಹರಿಸಬೇಕು ಎಂದರು.

ಬೆಳೆಸಾಲ ಪಡೆಯುವ ಎಲ್ಲಾ ರೈತರು ಬೆಳೆ ವಿಮೆಯನ್ನು ಕಡ್ಡಾಯವಾಗಿ ಮಾಡಬೇಕು. ಇದರಿಂದ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಲು ಅನುಕೂಲ ವಾಗುತ್ತದೆ. ಈ ಬಗ್ಗೆ ಸಹಕಾರ ಇಲಾಖೆ ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ ಮಾಡಲು ಸರಕಾರದ ನಿರ್ದೇಶನ ಇರುವುದರಿಂದ ಜಿಲ್ಲಾ ಸಹಕಾರಿ ಬ್ಯಾಂಕ್ (ಡಿಸಿಸಿ)ಗಳು ಬೆಳೆ ವಿಮೆ ಮಾಡುವುದು ಬೇಡ ಎಂದು ನಿರ್ಣಯ ಕೈಗೊಳ್ಳಲು ಬುವುದಿಲ್ಲ ಎಂದು ಅವರು ತಿಳಿಸಿದರು.

ಈಗಾಗಲೇ ಬೆಳೆ ವಿಮೆ ಪಡೆದು ವಿಮಾ ಮೊತ್ತ ಸಿಗಲು ಬಾಕಿ ಇರುವ ರೈತರಿಗೆ ಶೀಘ್ರದಲ್ಲೇ ಬೆಳೆ ವಿಮೆ ಮೊತ್ತ ನೀಡಲಾಗುವುದು. ಸಾಲ ಮನ್ನಾ ಫಲಾನುಭವಿಗಳ ಖಾತೆಗೆ ಆಧಾರ್ ಲಿಂಕ್ ಪೂರ್ಣಗೊಳಿಸುವಂತೆ ಮಹೇಶ್ವರ ರಾವ್ ಸೂಚಿಸಿದರು.

ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಘನತ್ಯಾಜ್ಯವನ್ನು ಮೂಲದಲ್ಲೇ ಬೇರ್ಪಡಿಸಿ ವಿಲೇವಾರಿ ಮಾಡುವ ಯೋಜನೆ ಸಮರ್ಪಕವಾಗಿ ಜಾರಿಗೆ ತರಬೇಕು. ಜೈವಿಕ ತ್ಯಾಜ್ಯವನ್ನು ಬಳಸಿಕೊಂಡು ಅನಿಲ ಉತ್ಪಾದನೆ ಮಾಡಲು ನಗರ ಸಂಸ್ಥೆಗಳು ಅಗತ್ಯ ಕ್ರು ಕೈಗೊಳ್ಳಲು ಅವರು ತಿಳಿಸಿದರು.

ಕಡಲಕೊರೆತಕ್ಕೆ ತಡೆಗೋಡೆ ಕಾಮಗಾರಿಗೆ ಸಲ್ಲಿಕೆಯಾಗಿರುವ ಪ್ರಸ್ತಾವನೆಗಳಿಗೆ ತ್ವರಿತವಾಗಿ ಅನುಮೋದನೆ ಪಡೆದು ಕಾಮಗಾರಿ ಆರಂಭಿಸಲು ಉಸ್ತುವಾರಿ ಕಾರ್ಯದರ್ಶಿಗಳು ಹೇಳಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧಾ, ಕುಂದಾಪುರ ಉಪವಿಬಾಗಾಧಿಕಾರಿ ಬಾಲನ್ ಹಾಗೂ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X