Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಲ್ಲ ಆಯಾಮಗಳಲ್ಲೂ ತನಿಖೆ, ಹಲವರ...

ಎಲ್ಲ ಆಯಾಮಗಳಲ್ಲೂ ತನಿಖೆ, ಹಲವರ ವಿಚಾರಣೆ: ಎಸ್ಪಿ ನಿಂಬರ್ಗಿ

ಶಿರೂರು ಸ್ವಾಮೀಜಿ ಸಂಶಯಾಸ್ಪದ ಸಾವು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 July 2018 7:48 PM IST
share
ಎಲ್ಲ ಆಯಾಮಗಳಲ್ಲೂ ತನಿಖೆ, ಹಲವರ ವಿಚಾರಣೆ: ಎಸ್ಪಿ ನಿಂಬರ್ಗಿ

ಉಡುಪಿ, ಜು.21: ಶಿರೂರು ಮಠಾಧೀಶ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಹಲವು ಮಂದಿಯನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರ್ಗಿ ತಿಳಿಸಿದ್ದಾರೆ.

ಉಡುಪಿ ಎಸ್ಪಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನಾರೋಗ್ಯದಿಂದ ಜು.17ರಂದು ಬೆಳಗ್ಗೆ 11ಗಂಟೆಗೆ ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ಶಿರೂರು ಸ್ವಾಮೀಜಿ, ಹೆಚ್ಚಿನ ಚಿಕಿತ್ಸೆಗಾಗಿ ಜು.18ರಂದು ಬೆಳಗಿನ ಜಾವ 1:05ರ ಸುಮಾರಿಗೆ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಜು.19ರಂದು ಬೆಳಗ್ಗೆ 8:30ರ ಸುಮಾರಿಗೆ ಶಿರೂರು ಸ್ವಾಮೀಜಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಆದರೆ ಅವರು ಯಾವ ರೀತಿ ಮೃತಪಟ್ಟರು, ಯಾವ ಆಹಾರ ಸೇವಿಸಿದ್ದರು ಎಂಬುದು ಗೊತ್ತಿಲ್ಲ ಎಂದರು.

ಶಿರೂರು ಮೂಲ ಮಠದಲ್ಲಿನ ಕೆಲವೊಂದು ದಾಖಲೆಗಳು ಹಾಗೂ ಸೊತ್ತುಗಳು ನಾಪತ್ತೆಯಾಗಿರುವ ಕುರಿತ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಸ್ಪಿ, ಮಠಕ್ಕೆ ಭದ್ರತೆ ಒದಗಿಸಿದ ನಂತರ ಅಂತಹ ಯಾವುದೇ ಘಟನೆ ನಡೆಯಲು ಸಾಧ್ಯವಿಲ್ಲ. ಅಂತಹದ್ದು ಏನಾದರೂ ನಡೆದಿದ್ದರೆ ನಾವು ಮುಂದೆ ತನಿಖೆ ಮಾಡುತ್ತೇವೆ ಎಂದು ಹೇಳಿದರು.

ಶಿರೂರು ಮೂಲ ಮಠದಲ್ಲಿ ಸಿಸಿ ಕ್ಯಾಮೆರಾಗಳಿದ್ದು, ಅದರಲ್ಲಿ ಏನೆಲ್ಲ ದಾಖಲಾಗಿದೆ ಎಂಬುದನ್ನು ನಮ್ಮ ತಂಡ ಪರಿಶೀಲನೆ ನಡೆಸಲಿದೆ. ಶಿರೂರು ಸ್ವಾಮೀಜಿ ಹಾಗೂ ಇತರರ ನಡುವಿನ ಹಣಕಾಸು ವಿಚಾರಗಳ ಬಗ್ಗೆಯೂ ನಾವು ತನಿಖೆ ನಡೆಸುತ್ತಿದ್ದೇವೆ ಎಂದರು. ಭೂಗತ ಜಗತ್ತಿನ ಕೈವಾಡದ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ಎಸ್ಪಿ ನಿರಾಕರಿಸಿದರು.

ಹಲವು ತಂಡಗಳಿಂದ ತನಿಖೆ: ಈ ಘಟನೆಯು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್ ಪ್ರಕರಣದ ತನಿಖಾಧಿಕಾರಿಯಾಗಿದ್ದು, ಅವರಿಗೆ ಕಾರ್ಕಳ ಉಪವಿಭಾಗದ ಪ್ರಭಾರ ಡಿವೈಎಸ್ಪಿ ಬೆಳ್ಳಿಯಪ್ಪ ಮಾರ್ಗದರ್ಶನ ನೀಡುತ್ತಿದ್ದಾರೆ. ಅಲ್ಲದೆ ಜಿಲ್ಲೆಯ ನುರಿತ ಪೊಲೀಸ್ ಅಧಿಕಾರಿಗಳ ಹಲವು ತಂಡಗಳನ್ನು ರಚಿಸಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ತಿಳಿಸಿದರು.

ಉಡುಪಿಯಲ್ಲಿರುವ ಶಿರೂರು ಮಠ ಹಾಗೂ ಹಿರಿಯಡ್ಕ ಸಮೀಪದಲ್ಲಿರುವ ಮೂಲ ಮಠಕ್ಕೆ ವಿಶೇಷ ಭದ್ರತೆಯನ್ನು ಒದಗಿಸಲಾಗಿದೆ. ಈ ಭದ್ರತೆಯಿಂದ ಮೂಲ ಮಠದಲ್ಲಿ ದೇವರ ಪೂಜೆ, ದೈನಂದಿನ ಚಟುವಟಿಕೆಗಳಿಗೆ ಯಾವುದೇ ತೊಂದರೆ ಆಗುತ್ತಿಲ್ಲ. ಮಠದಲ್ಲಿನ ಕೆಲವೊಂದು ಸ್ಥಳಗಳಿಗೆ ಹೆಚ್ಚಿನ ತನಿಖೆಗೆ, ಬೆರಳಚ್ಚು ಸಂಗ್ರಹಕ್ಕೆ ಹಾಗೂ ನನ್ನ ಸಹಿತ ಹಿರಿಯ ಅಧಿಕಾರಿಗಳ ಭೇಟಿ ಹಿನ್ನೆಲೆ ಯಲ್ಲಿ ಅಲ್ಲಿಗೆ ಎಲ್ಲರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ತನಿಖೆ ಮುಗಿಯುವವರೆಗೆ ಈ ಸ್ಥಳಗಳು ನಮ್ಮ ಸುಪರ್ದಿಯಲ್ಲಿರುತ್ತವೆ. ಉಡುಪಿಯಲ್ಲಿರುವ ಶಿರೂರು ಮಠದಲ್ಲೂ ತನಿಖೆ ನಡೆಸಲಾಗುತ್ತದೆ ಎಂದು ಅವರು ಹೇಳಿದರು.

ಶಿರೂರು ಸ್ವಾಮೀಜಿ ಕರೆ ಮಾಡಿ ಮಾತನಾಡಿರುವ ಆಡಿಯೋ ಕುರಿತ ಪ್ರಶ್ನೆಗೆ ಉತ್ತರಿಸಿದ ಎಸ್ಪಿ ನಿಂಬರ್ಗಿ, ಆ ಆಡಿಯೋಗಳನ್ನು ಈವರೆಗೆ ತನಿಖೆಗೆ ಒಳಪಡಿಸಿಲ್ಲ. ಸಮಯ ಬಂದರೆ ನಾವು ಎಲ್ಲವನ್ನು ತನಿಖೆಗೆ ಬಳಸಿಕೊಳ್ಳುತ್ತೇವೆ. ಶಿರೂರು ಸ್ವಾಮೀಜಿ ಸಾವಿನ ಕುರಿತು ಹೊರಗಡೆ ಸಾಕಷ್ಟು ಗಾಳಿಸುದ್ದಿಗಳು ಹರಡುತ್ತಿವೆ. ಆದರೆ ನಾವು ನಮಗೆ ಬೇಕಾದ ಎಳೆಯನ್ನು ಮಾತ್ರ ಇಟ್ಟುಕೊಂಡು ತನಿಖೆ ಮಾಡುತ್ತಿದ್ದೇವೆ. ಇದೊಂದು ಸವಾಲಿನ ಪ್ರಕರಣವಾಗಿದ್ದು, ಇದನ್ನು ಶೀಘ್ರವೇ ಬೇಧಿಸುವ ವಿಶ್ವಾಸ ನಮಗಿದೆ ಎಂದರು.

ಎಫ್‌ಎಸ್‌ಎಲ್ ವರದಿಯ ನಿರೀಕ್ಷೆ
ಯಾವುದೇ ಮರಣೋತ್ತರ ಪರೀಕ್ಷೆಯ ವರದಿ ಬರಬೇಕಾದರೆ ಸುಮಾರು ಎರಡು ವಾರಗಳ ಸಮಯ ಬೇಕಾಗುತ್ತದೆ. ದನದ ವ್ಯಾಪಾರಿ ಹುಸೇನಬ್ಬ ಪ್ರಕರಣದ ವರದಿ ಬರಲು ಎರಡು ವಾರಗಳಾಗಿವೆ. ಅದೇ ರೀತಿ ಇಡೀ ದೇಹದ ಪ್ರತಿಯೊಂದು ಅಂಗಗಳನ್ನು ಪರೀಕ್ಷೆಗೆ ಒಳಪಡಿಸುವ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್)ದ ವರದಿ ಬರಲು ಸುಮಾರು ಆರು ವಾರಗಳ ಸಮಯ ಬೇಕಾಗುತ್ತದೆ. ಅಲ್ಲಿಯವರೆಗೆ ನಾವು ಯಾವ ರೀತಿಯಲ್ಲಿ ಸಾವು ಸಂಭವಿಸಿದೆ ಎಂಬದನ್ನು ಹೇಳಲು ಆಗುವುದಿಲ್ಲ ಎಂದು ಎಸ್ಪಿ ಲಕ್ಷ್ಮಣ್ ನಿಂಬರ್ಗಿ ಹೇಳಿದರು.

ಯಾರನ್ನೂ ವಶಕ್ಕೆ ತೆಗೆದುಕೊಂಡಿಲ್ಲ
ಶಿರೂರು ಸ್ವಾಮೀಜಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಯಾರನ್ನು ಕೂಡ ನಾವು ವಶಕ್ಕೆ ತೆಗೆದುಕೊಂಡಿಲ್ಲ. ಅದರ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಹೇಳುವುದಿಲ್ಲ. ಇದರಿಂದ ನಮ್ಮ ತನಿಖೆಗೆ ತೊಂದರೆಯಾಗಲಿದೆ. ಸ್ವಾಮೀಜಿಯ ಸಹೋದರ ನೀಡಿದ ದೂರಿನಂತೆ ನಾವು ತನಿಖೆ ಮಾಡುತ್ತಿದ್ದೇವೆ ಎಂದು ಎಸ್ಪಿ ಲಕ್ಷ್ಮಣ್ ನಿಂಬರ್ಗಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X