ಕೊಲೆಯತ್ನ ಪ್ರಕರಣ: ಆರೋಪಿ ಬಂಧನ

ಮಂಗಳೂರು, ಜು.21: ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಶನಿವಾರ ಬೆಳಗ್ಗೆ ಉಳ್ಳಾಲದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲದ ಮುಕ್ಕಚೇರಿ ಮಸೀದಿ ಬಳಿಯ ಮುಹಮ್ಮದ್ ಮುಸ್ತಫಾ ಯಾನೆ ಮುಸ್ತಫಾ (21) ಬಂಧಿತ ಆರೋಪಿ.
ಜೂ.29ರಂದು ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ವೆಂಕಟೇಶ ಎಂಬವರನ್ನು ಮುಸ್ತಫಾ ಕೊಲೆ ಮಾಡಲು ಯತ್ನಿಸಿ ಬಳಿಕ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಮುಸ್ತಫಾ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆಯತ್ನ ಪ್ರಕರಣಗಳು, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಪ್ರಕರಣ ಸೇರಿ ಒಟ್ಟು ನಾಲ್ಕು ಪ್ರಕರಣ ದಾಖಲಾಗಿವೆ.
ಕಾರ್ಯಾಚರಣೆಯಲ್ಲಿ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್. ಮತ್ತು ಪಿಎಸ್ಸೈ ಗುರಪ್ಪ ಕಾಂತಿ ಹಾಗೂ ವಿನಾಯಕ ತೋರಗಲ್, ರಂಜಿತ್, ಪ್ರಶಾಂತ, ಸುರೇಶ, ಅಕ್ಬರ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.







