ಗಾಂಜಾ ಮಾರಾಟ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಮಂಗಳೂರು, ಜು.22: ನಗರದ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಬೊಂದೇಲ್ನ ಪಚ್ಚನಾಡಿ ನಿವಾಸಿ ಗೌರವ್ ಕೋಟ್ಯಾನ್(25) ಎಂದು ಗುರುತಿಸಲಾಗಿದೆ.
ಸಿಸಿಬಿ ಇನ್ಸ್ಪೆಕ್ಟರ್ ಶಾಂತಾರಾಮ ನೇತೃತ್ವದ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಆರೋಪಿ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆಯತ್ನ ಪ್ರಕರಣ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
Next Story