ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನ
ಬೆಂಗಳೂರು, ಜು.23: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದಿಂದ 2018-19 ನೆ ಸಾಲಿನ ಶೈಕ್ಷಣಿಕ ವರ್ಷದ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನ್ನಡ, ಇಂಗ್ಲಿಷ್, ಇತಿಹಾಸ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಮಾಜ ಕಾರ್ಯ, ತತ್ವಶಾಸ್ತ್ರ, ಸ್ನಾತಕೋತ್ತರ ವಿಷಯಗಳಿಗೆ ಸಂಬಂಧಿಸಿದಂತೆ ಉಪನ್ಯಾಸಕರು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪಿಎಚ್‌ಡಿ, ಎಂ.ಫಿಲ್, ನೆಟ್/ಸ್ಲೆಟ್ ಅರ್ಹತೆ ಹೊಂದಿರಬೇಕು.
ವಿದ್ಯಾರ್ಹತೆ, ಅನುಭವ, ಮೀಸಲಾತಿ, ಪ್ರವರ್ಗಗಳು, ಸಂಶೋಧನೆ ಪ್ರಕಟನೆಗಳು, ಈ-ಮೇಲ್, ದೂರವಾಣಿ ಹಾಗೂ ಇತರೆ ವಿವರಗಳನ್ನು ಒಳಗೊಂಡಂತೆ ಸ್ವ ವಿವರಗಳ ಅರ್ಜಿಯನ್ನು ಜು.30 ರೊಳಗೆ ಕುಲಸಚಿವರು, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು-560 001 ಇಲ್ಲಿಗೆ ಸಲ್ಲಿಸಬೇಕು.
ಆಯ್ಕೆಯಾದ ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮಾವಳಿಯಂತೆ ಗೌರವ ಧನ ನೀಡಲಾಗುತ್ತದೆ. ಪ್ರತಿ ವಿಭಾಗದ ಕಾರ್ಯಭಾರ ಹಾಗೂ ಅಗತ್ಯಗಳಿಗೆ ಅನುಗುಣವಾಗಿ ಮತ್ತು ಸರಕಾರ ಮೀಸಲಾತಿ ನೀತಿಯನ್ನು ಪರಿಗಣಿಸಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಂದರ್ಶನದ ಸಮಯ ಹಾಗೂ ಇನ್ನಿತರೆ ಮಾಹಿತಿಗಾಗಿ ವಿವಿ ವೆಬ್‌ಸೈಟ್ www.bcu.ac.in ಅನ್ನು ಸಂಪರ್ಕಿಸ ಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.





