Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಜಿಲ್ಲಾ ಮಟ್ಟದ ಸ್ವಚ್ಛ...

ಮೈಸೂರು: ಜಿಲ್ಲಾ ಮಟ್ಟದ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018 ಸಭೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 July 2018 8:22 PM IST
share
ಮೈಸೂರು: ಜಿಲ್ಲಾ ಮಟ್ಟದ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018 ಸಭೆಗೆ ಚಾಲನೆ

ಮೈಸೂರು,ಜು.23: ಗ್ರಾಮೀಣ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ಸ್ವಚ್ಛ ಭಾರತ್ ಮಿಷನ್ (ಗ್ರಾ)ಯೋಜನೆಯಡಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018 ಜನಾಂದೋಲನ ಕಾರ್ಯಕ್ರಮಕ್ಕೆ ಜು.13ರಂದು ನವದೆಹಲಿಯಲ್ಲಿ ಚಾಲನೆ ನೀಡಿದ್ದು, ಬೃಹತ್ ಪ್ರಮಾಣದಲ್ಲಿ ನಾಗರಿಕರು ಸ್ವಚ್ಛ ಭಾರತ್ ಅಭಿಯಾನದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವುದು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶುಚಿತ್ವ ಸ್ವಚ್ಛತೆ ಹಾಗೂ ನೈರ್ಮಲ್ಯದ ಮಹತ್ವದ ಬಗ್ಗೆ ಗ್ರಾಮೀಣ ಸಮುದಾಯದಲ್ಲಿ ಅರಿವು ಮೂಡಿಸುವುದು ಸರ್ವೇಕ್ಷಣೆಯ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ತಿಳಿಸಿದರು.

ಈ ಕುರಿತು ಜಿಲ್ಲಾಪಂಚಾಯತ್ ನಲ್ಲಿ ನಡೆದ ಸಭೆಯಲ್ಲಿಂದು ಮಾಹಿತಿ ನೀಡಿದ ಅವರು ಸಾರ್ವಜನಿಕ ಸ್ಥಳಗಳ ಸಮೀಕ್ಷೆ, ಸಮುದಾಯದಲ್ಲಿನ ಸ್ವಚ್ಛತೆಯ ದೃಷ್ಟಿಕೋನ, ಅವರ ಶಿಫಾರಸ್ಸುಗಳು ಮತ್ತು ಸ್ವಚ್ಛ ಭಾರತ್ ಮಿಷನ್ ಎಂ.ಐ ಎಸ್ ನಲ್ಲಿ ಜಿಯೋ ಬ್ಲಾಗ್ ಫೋಟೋ ಆರೋಹಿಸಿರುವುದು, ಒಡಿಎಫ್ ಗ್ರಾಮಗಳ ಘೋಷಣೆ ಮತ್ತು ಪರಿಶೀಲನೆ ಪಡೆದ ಪ್ರಗತಿ ವರದಿ ಹಾಗೂ ನೈರ್ಮಲ್ಯ ಸಮಗ್ರ ಶುಚಿತ್ವದ ನಿಯತಾಂಕಗಳನ್ನು ಗಣನೆಗೆ ತೆಗೆದುಕೊಂಡು ಜಿಲ್ಲೆ ಮತ್ತು ರಾಜ್ಯಗಳಿಗೆ ಶ್ರೇಯಾಂಕಗಳನ್ನು ನೀಡಲಾಗುತ್ತದೆ ಎಂದರು. ಉತ್ತಮ ಶ್ರೇಣಿ ಪಡೆದ ರಾಜ್ಯ ಮತ್ತು ಜಿಲ್ಲೆಗಳಿಗೆ ಅಕ್ಟೋಬರ್ 2ರಂದು ನವದೆಹಲಿಯಲ್ಲಿ ನಡೆಯುವ ಗಾಂಧಿ ಜಯಂತಿಯಂದು ಕೇಂದ್ರ ಸರ್ಕಾರ ಪುರಸ್ಕಾರ ನೀಡಿ ಗೌರವಿಸಲಿದೆ ಎಂದು ಹೇಳಿದರು.

ದೇಶದಾದ್ಯಂತ 680 ಜಿಲ್ಲೆಗಳು, 6,980 ಗ್ರಾಮಗಳು, 34,000 ಸಾರ್ವಜನಿಕ ಸ್ಥಳಗಳು ಹಾಗೂ 50 ಲಕ್ಷ ನಾಗರೀಕರ ಸಂದರ್ಶನ ಮತ್ತು ಅಭಿಪ್ರಾಯಗಳನ್ನು ಪಡೆಯುವುದು ಈ ಸರ್ವೇಕ್ಷಣೆಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018ಕ್ಕೆ ಜು.13ರಂದು ಚಾಲನೆ ನೀಡಿದ್ದು, ರಾಜ್ಯ ಮಟ್ಟದಲ್ಲಿಯೂ ಕೂಡ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ -2018ಕ್ಕೆ ಚಾಲನೆ ನೀಡಬೇಕಿದೆ. ಅದೇ ರೀತಿ ಜಿಲ್ಲೆಯಲ್ಲಿಯೂ ಕೂಡ ಸರ್ವೇಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಬೇಕಾಗಿದ್ದು, ತಾಲೂಕು ಹಾಗೂ ಗ್ರಾಮಪಂಚಾಯತ್ ಗಳಲ್ಲಿ ಈ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕಿದೆ. ಈ ಕಾರ್ಯಕ್ರಮದಲ್ಲಿ ಸಮೀಕ್ಷೆ/ಮೌಲ್ಯಮಾಪನ/ಶ್ರೇಣಿಯನ್ನು ನಿರ್ಧರಿಸಲಾಗಿದ್ದು, ಸ್ವಚ್ಛ ಭಾರತ್ ಮಿಷನ್(ಗ್ರಾ)ಯೋಜನೆಯ ಪ್ರಗತಿಯ ದತ್ತಾಂಶಗಳಿಗೆ ಶೇ.35ಅಂಕಗಳನ್ನು ನಿಗದಿಪಡಿಸಲಾಗಿದೆ. ನಾಗರೀಕರು ನೀಡುವ ಮಾಹಿತಿಯ ಆಧಾರದಲ್ಲಿ ಅಂಕಿಅಂಶಗಳ ಸಂಗ್ರಹಣೆಗೆ ಶೇ.35ಅಂಕಗಳು, ಶಾಲೆ ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಂತೆ, ಬಸ್ ನಿಲ್ದಾಣ ಮತ್ತು ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳ ನೇರ ಪರಿವೀಕ್ಷಣೆಗೆ ಶೇ.30ರಷ್ಟು ಅಂಕಗಳನ್ನು ನಿಗದಿಪಡಿಸಿದೆ ಎಂದರು. 

ಸಮೀಕ್ಷೆಯಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ನೇಮಿಸಿರುವ ಖಾಸಗಿ ಸಂಸ್ಥೆಗಳು, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಪ್ರಾಯೋಜಕತ್ವದ ಸಂಸ್ಥೆಗಳು, ಮಾನದಂಡದಲ್ಲಿ ಸಾರ್ವಜನಿಕ ಸ್ಥಳಗಳ ಸಮೀಕ್ಷೆ, ಸ್ವಚ್ಛತೆಯ ಬಗ್ಗೆ ಜನರ ಗ್ರಹಿಕೆ, ಕಾರ್ಯಕ್ರಮ ಸುಧಾರಣೆಗೆ ಅವರ ಶಿಫಾರಸುಗಳು, ಸ್ವಚ್ಛ ಭಾರತ್ ಮಿಷನ್ ಯೋಜನೆಯ ದತ್ತಾಂಶಗಳು ಒಳಗೊಂಡಿದೆ ಎಂದರು. ಗ್ರಾಮ/ಗ್ರಾ.ಪಂಗಳಲ್ಲಿನ ಸಮಗ್ರ ಶುಚಿತ್ವ, ಸ್ವಚ್ಛತೆಯ ಕುರಿತು ಗುಣಾತ್ಮಕ ಮತ್ತು ಪರಿಣಾತ್ಮಕ ಮೌಲ್ಯಮಾಪನದ ಆಧಾರದ ಮೇಲೆ ಶ್ರೇಯಾಂಕಗಳನ್ನು ನೀಡಲಾಗುತ್ತದೆ. ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ನಿಯೋಜಿತ ಮೂರನೇ ಸ್ವಾಯತ್ತ ಸಂಸ್ಥೆಯಿಂದ ಆಗಸ್ಟ್ -2018ಮಾಹೆಯಲ್ಲಿ ಸಮೀಕ್ಷೆ ಆರಂಭಿಸುವುದಾಗಿ ಕೇಂದ್ರ ಸರ್ಕಾರವು ತಿಳಿಸಿದೆ. ಇದರ ಪೂರ್ವಭಾವಿಯಾಗಿ ನಾವಿಂದು ಜಿಲ್ಲೆಗಳಿಗೆ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಮಾಹಿತಿ ನೀಡಿದ್ದೇವೆ. ರಾಜ್ಯಮಟ್ಟದಲ್ಲಿಯೂ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2018ಕ್ಕೆ ಚಾಲನೆ ನೀಡಬೇಕಿದೆ ಎಂದರು. ಜಿಲ್ಲಾ ಹಂತದಲ್ಲಿಯೂ ಸಹ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ -2018ಕ್ಕೆ ಚಾಲನೆ ನೀಡಬೇಕಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾ.ಪಂ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X