Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮಲೇರಿಯಾ ಹರಡದಂತೆ ಸೊಳ್ಳೆ...

ಮಂಗಳೂರು: ಮಲೇರಿಯಾ ಹರಡದಂತೆ ಸೊಳ್ಳೆ ನಿಯಂತ್ರಣಕ್ಕೆ ಕ್ರಮ

ವಾರ್ತಾಭಾರತಿವಾರ್ತಾಭಾರತಿ23 July 2018 8:30 PM IST
share
ಮಂಗಳೂರು: ಮಲೇರಿಯಾ ಹರಡದಂತೆ ಸೊಳ್ಳೆ ನಿಯಂತ್ರಣಕ್ಕೆ ಕ್ರಮ

ಮಂಗಳೂರು, ಜು. 23: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳು ಕಂಡು ಬಂದಲ್ಲಿ ಯಾವುದೇ ನೋಟಿಸ್ ನೀಡದೆ ನೇರವಾಗಿ ಮೊದಲನೇಯ ಬಾರಿಗೆ 15,000 ರೂ. ದಂಡವನ್ನು ವಿಧಿಸಲಾಗುವುದು. ಎರಡನೇಯ ಬಾರಿಗೆ ಕಟ್ಟಡ ಪರವಾನಿಗೆ ರದ್ದು ಪಡಿಸಲು ಕ್ರಮವಹಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಮನಪಾ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೇಯರ್ ಅಧ್ಯಕ್ಷತೆಯಲ್ಲಿ ಚರ್ಚಿಸಲಾಯಿತು. ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡಗಳಲ್ಲಿ ಮಲೇರಿಯಾ ನಿಯಂತ್ರಣದ ಬಗ್ಗೆ ತಿಳುವಳಿಕೆ ನೀಡಲಾಗಿದೆ. ನಿರ್ಮಾಣ ಹಂತದ ಕಟ್ಟಡಗಳಿಗೆ ಮಹಾನಗರ ಪಾಲಿಕೆಯ ಮಲೇರಿಯಾ ನಿಯಂತ್ರಣ ಘಟಕದ ವಿವಿಧೋದ್ದೇಶ ಕಾರ್ಯಕರ್ತರು, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳ ಕಚೇರಿಯಿಂದ ಆರೋಗ್ಯ ಸಹಾಯಕರು ಮತ್ತು ಆರೋಗ್ಯ ಮೇಲ್ವಿಚಾರಕರು ಭೇಟಿ ನೀಡಿ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮಲೇರಿಯಾ, ಡೆಂಗ್, ಚಿಕೂನ್‌ಗುನ್ಯ ರೋಗಗಳನ್ನು ಹರಡುವ ಸೊಳ್ಳೆಗಳು ಶುದ್ಧ ನೀರಿನಲ್ಲಿ ತಮ್ಮ ಸಂತಾನೋತ್ಪತ್ತಿ ಮಾಡುವುದರಿಂದ, ಮನೆ/ಮಳಿಗೆ ಆವರಣ ಮತ್ತು ಒಳಾಂಗಣದಲ್ಲಿರುವ ವಿವಿಧ ನೀರು ಸಂಗ್ರಹ ಮೂಲ ಹಾಗೂ ತ್ಯಾಜ್ಯದಲ್ಲಿ ಸಂಗ್ರಹವಾಗಿರುವ ನೀರು ಸೊಳ್ಳೆ ಉತ್ಪತ್ತಿತಾಣಗಳಾಗಿವೆ. ಮನಪಾದಿಂದ ನಗರ ವ್ಯಾಪ್ತಿಯಲ್ಲಿ ಮಲೇರಿಯಾವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಮಲೇರಿಯಾ ನಿಯಂತ್ರಣ ಕಾರ್ಯದಲ್ಲಿ ಭಾಗಿಗಳಾಗಿರುವ ವಿವಿಧ ಪಾಲುದಾರರಾದ ಇಲಾಖೆಗಳು, ಸಿಬ್ಬಂದಿ, ಅಧಿಕಾರಿಗಳು, ಸಮಿತಿ, ಖಾಸಗಿ ಸಂಸ್ಥೆಗಳು, ಬಿಲ್ಡರ್‌ಗಳು ಇತ್ಯಾದಿ ಇವರುಗಳ ಸಮನ್ವಯ ಸಭೆ, ಪರಿಶೀಲನಾ ಸಭೆಗಳನ್ನು ಕಾಲ ಕಾಲಕ್ಕೆ ನಡೆಸುವಂತೆ ಚರ್ಚಿಸಲಾಯಿತು.

ಬಾವಿಗಳಲ್ಲಿ ಗಪ್ಪಿಮೀನು ಬಿಡುವ ಕಾರ್ಯಕ್ರಮ

ಮಲೇರಿಯಾ ಹರಡುವ ಅನಾಫಿಲಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ಪೈಕಿ, ಬಾವಿಗಳು ಹೊಂದಾಗಿದ್ದು, ನಗರ ವ್ಯಾಪ್ತಿಯಲ್ಲಿ ಅಂದಾಜು 11,728 ಬಾವಿಗಳಿದ್ದು, ಈಗಾಗಲೇ 7,800 ಬಾವಿಗಳಿಗೆ ಗಪ್ಪಿಮೀನುಗಳನ್ನು ಬಿಡಲಾಗಿದೆ. 3,928 ಸಂಖ್ಯೆಯ ಬಾವಿಗಳಿಗೆ ಗಪ್ಪಿಮೀನುಗಳನ್ನು ಬಿಡಲು ಕ್ರಮವಹಿಸಲಾಗಿದೆ. ಮನಪಾ ವತಿಯಿಂದ ಈವರೆಗೆ 30 ಸಾವಿರ ಗಪ್ಪಿಮೀನುಗಳನ್ನು ಸಂಗ್ರಹಿಸಿ ಶೇಖರಿಸಲಾಗಿದೆ. ಸಾರ್ವಜನಿಕರು ತಮ್ಮ ಬಾವಿಗಳನ್ನು ಪರಿಶೀಲಿಸಿ ಗಪ್ಪಿಮೀನುಗಳನ್ನು ಬಾವಿಗೆ ಬಿಡಲು ಕ್ರಮ ವಹಿಸುವುದು. ಗಪ್ಪಿಮೀನುಗಳನ್ನು ಮಹಾನಗರಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಪಡೆಯಬಹುದಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಸೊಳ್ಳೆ ಪರದೆ ವಿತರಣಾ ಕಾರ್ಯಕ್ರಮ

ಮಹಾನಗರಪಾಲಿಕೆಯ ಎಲ್ಲ ವಾರ್ಡ್‌ಗಳಲ್ಲಿ ಸಾರ್ವಜನಿಕರಿಗೆ ವಾರ್ಡ್ ಮಟ್ಟದಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತವಾಗಿ ಸೊಳ್ಳೆ ಪರದೆಯನ್ನು ವಿತರಣೆ ಮಾಡಲಾಗುತ್ತಿದೆ. ಮಹಾನಗರಪಾಲಿಕೆಗೆ ರಾಷ್ಟ್ರೀಯ ವೆಕ್ಟರ್ ಬೊರ್ನ್ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 64,500 ಸಂಖ್ಯೆಯ ಸೊಳ್ಳೆ ಪರದೆಯನ್ನು ನೀಡಲಾಗಿದೆ. ಈ ಸೊಳ್ಳೆ ಪರದೆಯನ್ನು ಮಹಾನಗರಪಾಲಿಕೆಯ ಎಲ್ಲ ವಾರ್ಡ್‌ಗಳಲ್ಲಿ ಮನಪಾ ಸದಸ್ಯರ ಮೂಲಕ ವಿತರಿಸಲು ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಮನಪಾದ ಆಯುಕ್ತರು, ಸ್ಥಾಯಿ ಸಮಿತಿಯ ಅಧ್ಯಕ್ಷರು, ಸಚೇತಕರು, ಮಲೇರಿಯ ಕ್ರಿಯ ಸಮಿತಿಯ ಎಲ್ಲ ಸದಸ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X