ಜು.24 ರಿಂದ ಸಚಿವೆ ಜಯಮಾಲಾ ಮಂಗಳೂರು ಪ್ರವಾಸ

ಬೆಂಗಳೂರು, ಜು.23: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ.ಜಯಮಾಲಾ ಜು.24ರಿಂದ 26ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಹಮ್ಮಿಕೊಂಡಿದ್ದಾರೆ.
ಜು.24 ರಿಂದ 26ರವರೆಗೆ ಮಂಗಳೂರಿನಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಸಭೆ, ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಇದರ ಜತೆಗೆ ಮಹಿಳಾ ಸಂಘಗಳ ಮುಖ್ಯಸ್ಥರೊಂದಿಗೆ ಚರ್ಚೆ, ಸಂವಾದಗಳನ್ನು ನಡೆಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





