Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಜಿಲ್ಲಾ ಮಟ್ಟದ 'ಆಟಿ-ನಾಟಿ...

ಮಡಿಕೇರಿ: ಜಿಲ್ಲಾ ಮಟ್ಟದ 'ಆಟಿ-ನಾಟಿ ಕೂಡುಕೂಟ' ಕಾರ್ಯಕ್ರಮ

ಕ್ರೀಡಾಸ್ಫೂರ್ತಿ ಮೆರೆದ ಗ್ರಾಮೀಣರು

ವಾರ್ತಾಭಾರತಿವಾರ್ತಾಭಾರತಿ23 July 2018 11:24 PM IST
share
ಮಡಿಕೇರಿ: ಜಿಲ್ಲಾ ಮಟ್ಟದ ಆಟಿ-ನಾಟಿ ಕೂಡುಕೂಟ ಕಾರ್ಯಕ್ರಮ

ಮಡಿಕೇರಿ, ಜು. 23: ಕೊಡಗಿನಲ್ಲಿ ಮಳೆಯ ತೀವ್ರತೆ ನಡುವೆ ಆಟಿ (ಕಕ್ಕಡ) ಮಾಸದ ಚಳಿಗಾಳಿಯ ನಡುವೆ, ಇಲ್ಲಿಗೆ ಸಮೀಪದ ದೇವಸ್ತೂರು ಗ್ರಾಮದಲ್ಲಿ ಚಿಣ್ಣರ ಸಹಿತ ಆಬಾಲವೃದ್ಧರಾದಿಯಾಗಿ ಚಳಿ ಗಾಳಿಯೊಂದಿಗೆ ಕೆಸರಿನೊಳು ಕಲೆತು - ಬೆರೆತು ಕ್ರೀಡಾ ಸ್ಫೂರ್ತಿ ಮೆರೆದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಕುಕ್ಕೇರ ಕುಟುಂಬಸ್ಥರ ಸಹಯೋಗದಲ್ಲಿ ದೇವಸ್ತೂರು ಗ್ರಾಮದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ 'ಆಟಿ-ನಾಟಿ ಕೂಡುಕೂಟ' ಕಾರ್ಯಕ್ರಮದಲ್ಲಿ ಮೈನವೀರೆಳಿಸುವ ಸ್ಪರ್ಧೆಗಳು ನಡೆದವು.

ಬೆಳಿಗ್ಗೆಯಿಂದ ಸಂಜೆಯ ತನಕ ಜರುಗಿದ ಫೈಪೋಟಿಗಳಲ್ಲಿ ಕೊಡಗಿನ ಜಾನಪದ ಸೊಗಡುವಿನೊಂದಿಗೆ ಭಾಷಾ ಸಂಸ್ಕೃತಿಗೆ ಭದ್ರ ಬುನಾದಿಯಾಗಿರುವ ಕೃಷಿ ಕಾರ್ಯ ಸಹಿತ ವಿನೂತನ ಕ್ರೀಡೆಗಳೊಂದಿಗೆ ಪೈಪೋಟಿಯು ನೋಡುಗರ ಕಣ್ಮನ ಸೂರೆಗೊಂಡಿತು. ಕುಕ್ಕೇರ ಕುಟುಂಬದ ಪಳಂಗಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಅದೇ ಕುಟುಂಬದ ಪಟ್ಟೆದಾರ ಕುಕ್ಕೇರ ತಮ್ಮಯ್ಯ ಚಾಲನೆ ನೀಡಿದರು.

ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಂ ಅಧ್ಯಕ್ಷತೆಯೊಂದಿಗೆ ಸ್ಪರ್ಧೆಗಳಿಗೆ ಶುಭ ಕೋರಿದರು.

ಸಮಾರೋಪ: ಸಂಜೆ ಜರುಗಿದ ಸಮಾರೋಪ ಸಮಾರಂಭದ ನಡುವೆ ಕೆಸರು ಗದ್ದೆಯಲ್ಲಿ ಹಿಂದಕ್ಕೆ ನಡೆಯುವ ಸ್ಪರ್ಧೆಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾಗೂ ಅಂಬುಗಾಯಿ ಸ್ಪರ್ಧೆಗೆ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿ ಮಾತನಾಡಿದರು.

ಪರಂಪರೆ ಉಳಿಸಲು ಕರೆ: ಶಾಸಕ ಅಪ್ಪಚ್ಚುರಂಜನ್ ಮಾತನಾಡಿ, ಹಿಂದೆ ಎಲ್ಲರೂ ನಾಟಿ ಕೃಷಿ ಮಾತಡಿ ಮುಂಗಾರುವಿನಲ್ಲಿ ಪ್ರತಿ ಕುಟುಂಬದಲ್ಲಿ ದೊಡ್ಡ ಗದ್ದೆ ಓಟದೊಂದಿಗೆ ಕ್ರೀಡಾಸ್ಫೂರ್ತಿ ಮೆರೆಯುತ್ತಿದ್ದುದಾಗಿ ನೆನಪಿಸುತ್ತಾ, ಅಂತಹ ಪರಂಪರೆಯನ್ನು ಈ ಮೂಲಕ ಉಳಿಸಿಕೊಳ್ಳುವಂತೆ ಕರೆ ನೀಡಿದರು.
ಆ ದಿಸೆಯಲ್ಲಿ ಅರೆಭಾಷೆ ಅಕಾಡೆಮಿ ಚಟುವಟಿಕೆಗಳನ್ನು ಶ್ಲಾಘಿಸಿದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ಭಾಷೆ, ಸಂಸ್ಕೃತಿ, ನಾಂಗಗಳ ಏಳಿಗೆಗಾಗಿ ಶ್ರಮಿಸುತ್ತಿರುವ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಗಳ ಬೆಳವಣಿಗೆಗೆ ಎಲ್ಲಾ ರೀತಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು. 

ವಿದ್ಯಾವಂತರಾಗಲು ಕರೆ: ಕೊಡಗಿನವರೇ ಆಗಿರುವ ಕೋಲಾರ ಜಿಲ್ಲಾ ಅಬಕಾರಿ ಉಪ ಆಯುಕ್ತೆ ನಂಗಾರು ಸುಮಿತ ಲಿಂಗರಾಜು, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಾ, ತನ್ನ ತವರು ಜಿಲ್ಲೆಯಲ್ಲಿ ಇಂತಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೆಮ್ಮೆ ಎಂದರಲ್ಲದೆ, ಜನಾಂಗದ ಮಕ್ಕಳು ಉನ್ನತ ಶಿಕ್ಷಣ ಪಡೆದು ಒಳ್ಳೆಯ ಸ್ಥಾನಮಾನಗಳಿಗೆ ಏರುವಂತೆ ತಿಳಿ ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪಿ.ಸಿ. ಜಯರಾಂ ಮಾತನಾಡಿ ಶಾಸಕರು, ಸರಕಾರದ ಸಹಕಾರದಿಂದ ಇನ್ನು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುವ ಆಶ್ವಾಸನೆಯೊಂದಿಗೆ ಐದು ವರ್ಷಗಳಲ್ಲಿ ಈ ಅಕಾಡೆಮಿ ನಡೆದು ಬಂದಿರುವ ಕುರಿತು ಮಾಹಿತಿ ನೀಡಿದರು.

ಪಟ್ಟಡ ಶಿವಕುಮಾರ್ ಹಾಗೂ ಕಡ್ಲೇರ ತುಳಸಿ ಮೋಹನ್ ನಿರೂಪಿಸಿ, ಕಾನೆಹಿತ್ಲು ಮೊಣ್ಣಪ್ಪ ಸ್ವಾಗತಿಸಿದರು. ಪ್ರೇಮಾ ರಾಘವಯ್ಯ ಪ್ರಾರ್ಥಿಸಿದರು. ತಾ. ಪಂ. ಸದಸ್ಯ ರಾಯ್ ತಮ್ಮಯ್ಯ, ಗಾಳಿಬೀಡು ಗ್ರಾ. ಪಂ. ಅಧ್ಯಕ್ಷ ಸುಭಾಷ್ ಸೋಮಯ್ಯ, ಸದಸ್ಯ ಪ್ರದೀಪ್, ಪ್ರಮುಖರಾದ ಲಕ್ಷ್ಮಣ, ಅರವಿಂದ, ಹಿರಿಯರಾದ ಮೊಣ್ಣಪ್ಪ ಗೌಡ, ಕಟ್ಟೆಮನೆ ಸೋನಾಜಿತ್, ವೆಂಕಟರಮಣ ಸೊಸೈಟಿಯ ಮುಖ್ಯ ಕಾರ್ಯನಿರ್ವಗಣಾಧಿಕಾರಿ ಕೆ.ಟಿ. ವಿಶ್ವನಾಥ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ನಿವೃತ್ತ ಮುಖ್ಯೋಪಾಧ್ಯಯ ಬಿ.ಆರ್. ಜೋಯಪ್ಪ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X