ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಕಸಾಪ ಮನವಿ

ಮಂಗಳೂರು, ಜು.24: ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ದ.ಕ.ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ದ.ಕ.ಜಿಲ್ಲಾ ಕಸಾಪ ನಿಯೋಗವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವೆ ಡಾ. ಜಯಮಾಲಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಅವರ ಅಧ್ಯಕ್ಷತೆಯಲ್ಲಿ ಭೇಟಿಯಾದ ನಿಯೋಗದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ಜಯಲಕ್ಷ್ಮಿ ಶೆಟ್ಟಿ, ಜಿಲ್ಲಾ ಕಸಾಪ ಗೌರವ ಕೋಶಾಧಿಕಾರಿ ಪೂರ್ಣಿಮಾ ರಾವ್ ಪೇಜಾವರ, ಪ್ರಭಾಕರ ರಾವ್ ಪೇಜಾವರ, ಜಿ.ಕೆ. ಭಟ್ ಸೇರಾಜೆ, ದಿವಾಣ ಗೋವಿಂದ ಭಟ್ಟ ಮತ್ತಿತರರಿದ್ದರು.
Next Story