ಬೆಂಗಳೂರು: ಬೈಕ್ ಅಪಘಾತ; ಜ್ಯೋತಿಷಿ ಮೃತ್ಯು

ಬೆಂಗಳೂರು, ಜು.24: ಶರವೇಗವಾಗಿ ಸಾಗುತ್ತಿದ್ದ ಬೈಕ್‌ವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಜ್ಯೋತಿಷಿಯೊಬ್ಬರು ಮೃತಪಟ್ಟಿರುವ ಘಟನೆ ಕೆಆರ್ ಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಟಿಸಿ ಪಾಳ್ಯದ ನಿವಾಸಿ ವಿನೋದ್(24) ಮೃತಪಟ್ಟ ಜ್ಯೋತಿಷಿ ಎಂದು ಪೊಲೀಸರು ಗುರುತಿಸಿದ್ದಾರೆ.
ಮಂಗಳವಾರ ಸಂಜೆ 6 ಗಂಟೆ ಸಮಯದಲ್ಲಿ ವಿನೋದ್ ಮನೆಗೆ ವಾಪಸಾಗುತ್ತಿದ್ದಾಗ ಟಿಸಿ ಪಾಳ್ಯ ಮುಖ್ಯರಸ್ತೆಯ ಆನಂದಪುರ ಬಸ್ ನಿಲ್ದಾಣದ ಸಮೀಪ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವಿನೋದ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತ ದೇಹವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿದ್ದು, ಕೆಆರ್ ಪುರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





