ಪ್ರಧಾನಿ ಮೋದಿ, ರಕ್ಷಣಾ ಸಚಿವೆ ನಿರ್ಮಲಾ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಕಾಂಗ್ರೆಸ್

ಹೊಸದಿಲ್ಲಿ, ಜು.24: ಅವಿಶ್ವಾಸ ನಿರ್ಣಯ ಚರ್ಚೆಯ ವೇಳೆ ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಮಂಗಳವಾರ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದೆ.
ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಕೆವಿ ಥೋಮಸ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ರಾಜೀವ್ ಸತವ್ ಹಕ್ಕುಚ್ಯುತಿ ಮಂಡಿಸಿದರು. ರಾಫೆಲ್ ಡೀಲ್ ವಿವಾದಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ಹಾಗು ನಿರ್ಮಲಾ ಸೀತಾರಾಮನ್ ಅವಿಶ್ವಾಸ ನಿರ್ಣಯದ ವೇಳೆ ನೀಡಿದ್ದ ಹೇಳಿಕೆಗಳನ್ನು ಉಲ್ಲೇಖಿಸಿ ಹಕ್ಕುಚ್ಯುತಿ ಮಂಡಿಸಲಾಗಿದೆ.
Next Story





