ಹಿಂ.ವರ್ಗದ ಕಾೂನು ಪದವೀಧರರಿಗೆ ಶಿಷ್ಯವೇತನ
ಉಡುಪಿ, ಜು.24: 2018-19ನೇ ಸಾಲಿಗೆ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.-
ಅರ್ಜಿ ಸಲ್ಲಿಸುವ ಕಾನೂನು ಪದವೀಧರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗಳಿಗೆ ಸೇರಿದವರಾಗಿರಬೇಕು. ಅಭ್ಯರ್ಥಿ ಎರಡು ವರ್ಷದೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಗೊಂಡಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1ರ ಅ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಹಾಗೂ 2ಎ, 3ಎ ಮತ್ತು 3ಬಿಗೆ ಸೇರಿದ ಅ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿಯಲ್ಲಿರಬೇಕು. ಅಭ್ಯರ್ಥಿಗಳು ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೊಂದಾಯಿಸಿ ರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಭವಿ ಹಾಗೂ ನುರಿತ ವಕೀಲರ ಅಧೀನದಲ್ಲಿ ವಕೀಲಿ ವೃತ್ತಿಯಲ್ಲಿ ತರಬೇತಿ ಕೊಡಿಸಿ ನಾಲ್ಕು ವರ್ಷಗಳವರೆಗೆ ತಿಂಗಳಿಗೆ 4000 ರೂ. ಶಿಷ್ಯವೇತನ ನೀಡಲಾಗುವುದು.
ಅರ್ಜಿಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಇಲ್ಲಿಂದ ಪಡೆದು ಭರ್ತಿ ಮಾಡಿ, ಧೃಡೀಕೃತ ದಾಖಲೆ ಪ್ರತಿಗ ಳೊಂದಿಗೆ ಜು.31ರೊಳಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ, ರಜತಾದ್ರಿ, ಉಡುಪಿ ಇಲ್ಲಿಗೆ ಸಲ್ಲಿಸಬೇಕು.
ಅರ್ಜಿಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಇಲ್ಲಿಂದ ಪಡೆದು ದಾಖಲೆ ಪ್ರತಿಗ ಳೊಂದಿಗೆ ಜು.31ರೊಳಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ, ರಜತಾದ್ರಿ, ಉಡುಪಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ, ಮಣಿಪಾಲ, ಉಡುಪಿ (ದೂರವಾಣಿ ಸಂಖ್ಯೆ: 0820-2573881/2574881) ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.







