Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ದಲಿತ ಮಹಿಳೆಯ...

ದಾವಣಗೆರೆ: ದಲಿತ ಮಹಿಳೆಯ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರಿಂದ ವಿರೋಧ

ವಾರ್ತಾಭಾರತಿವಾರ್ತಾಭಾರತಿ24 July 2018 9:00 PM IST
share
ದಾವಣಗೆರೆ: ದಲಿತ ಮಹಿಳೆಯ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರಿಂದ ವಿರೋಧ

ದಾವಣಗೆರೆ,ಜು.24: ದಲಿತ ಮಹಿಳೆಯ ಶವದ ಅಂತ್ಯಸಂಸ್ಕಾರಕ್ಕೆ ಗೋಮಾಳ ಜಮೀನಿನಲ್ಲಿ ಕೆಲ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದ್ದು, ನಂತರ ಪೊಲೀಸರ ಮಧ್ಯಸ್ಥಿಕೆಯಲ್ಲಿ ಶವಸಂಸ್ಕಾರ ನಡೆಸಿದ ಘಟನೆ ನಡೆಯಿತು.

ತಾಲೂಕಿನ ಕುಕ್ಕುವಾಡ ಗ್ರಾಮದ ದಲಿತ ಮಹಿಳೆ ಗೌರಮ್ಮ ಎನ್ನುವವರು ಸೋಮವಾರ ಮೃತಪಟ್ಟಿದ್ದರು. ಮಂಗಳವಾರ ಶವಸಂಸ್ಕಾರಕ್ಕೆ ದಲಿತ ಕುಟುಂಬಗಳು ಗೋಮಾಳಕ್ಕೆ ತೆರಳಿದಾಗ ಅಂತ್ಯಸಂಸ್ಕಾರ ಮಾಡದಂತೆ ಕೆಲ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ಸ್ಥಳಕ್ಕೆ ಹದಡಿ ಪೊಲೀಸರು ಆಗಮಿಸಿದ್ದು, ಈ ವೇಳೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ನಮಗೆ ತಹಸೀಲ್ದಾರ್ ಅವರು ಶವಸಂಸ್ಕಾರಕ್ಕೆ ಅನುಮತಿ ನೀಡಿದ್ದಾರೆ ಎಂದು ದಲಿತ ಕುಟುಂಬದವರು ವಾದ ನಡೆಸಿದ್ದಲ್ಲದೇ, ಶವ ಇಟ್ಟುಕೊಂಡು ಹೋರಾಟಕ್ಕೆ ಮುಂದಾದರು.

ಅಂತ್ಯಕ್ರಿಯೆ ಬೆಳಗ್ಗೆ 11 ಗಂಟೆಗೆ ಆರಂಭವಾಯಿತಾದರೂ ಗೋಮಾಳ ಜಾಗದ ರೈತರು ಕ್ರಿಯೆ ನೆರವೇರಿಸಲು ವಿರೋಧವೊಡ್ಡಿದರು. ಸ್ಥಳದಲ್ಲಿ ಹದಡಿ ಪೊಲೀಸ್ ಸಬ್‍ಇನ್ಸ್ ಪೆಕ್ಟರ್ ರಾಜೇಂದ್ರನಾಯ್ಕ್, ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ದಸಂಸ ಜಿಲ್ಲಾ ಹಾಗೂ ತಾಲೂಕು ಮುಖಂಡರೊಂದಿಗೆ ರೈತರು ವಾಗ್ವಾದಕ್ಕಿಳಿದರು. ಗ್ರಾಮದ ಪ್ರವೇಶವಾದ್ದರಿಂದ ಊರೊಳಗೆ ವಾಸನೆ ಬರುತ್ತದೆ, ಇಲ್ಲಿ ಅಂತ್ಯಕ್ರಿಯೆ ಮಾಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷ ರುದ್ರಗೌಡ, ಮಲ್ಲಿಕಾರ್ಜುನ್ ಮತ್ತಿತರರು ಪಟ್ಟುಹಿಡಿದರು. ಕೊನೆಗೆ ಪೊಲೀಸರು ಸ್ಮಶಾನಕ್ಕಾಗಿ ಕಾಯ್ದಿರಿಸಿದ ಜಾಗವಾದ್ದರಿಂದ ಇಲ್ಲಿ ಸಂಸ್ಕಾರಕ್ಕೆ ಅಡ್ಡಿ ಉಂಟುಮಾಡುವಂತಿಲ್ಲ ಎಂದು, ಶವಸಂಸ್ಕಾರಕ್ಕೆ ಅವಕಾಶ ಮಾಡಿಕೊಟ್ಟರು. 

ಪ್ರಸ್ತುತ ಇರುವ ಗೋಮಾಳದಲ್ಲಿ ಅಕ್ಕಪಕ್ಕದ ಜಮೀನುದಾರರು ಶವ ಹೂಳಲು ವಿರೋಧ ವ್ಯಕ್ತಪಡಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಇಲ್ಲಿ ಇದುವರೆಗೂ ಭೂರಹಿತರಾರೂ ಶವಸಂಸ್ಕಾರ ಮಾಡುತ್ತಿರಲಿಲ್ಲ. ಆದರೆ, ಮಂಗಳವಾರ ಮರಣ ಹೊಂದಿದ್ದ ಕುಕ್ಕುವಾಡ ಗ್ರಾಪಂ ಉಪಾಧ್ಯಕ್ಷೆ ಪ್ರತಿಮಾ ಸುರೇಶ್ ಅವರ ಅತ್ತೆ ಗೌರಮ್ಮನವರ ಶವಸಂಸ್ಕಾರ ಗ್ರಾಮದ ಕಾಯ್ದಿರಿಸಿದ ಜಾಗದಲ್ಲಿಯೇ ಮಾಡಬೇಕೆಂದು ಮೃತರ ಸಂಬಂಧಿಕರು ನಿರ್ಧರಿಸಿದ್ದು, ಅದರಂತೆ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡು ಶವಸಂಸ್ಕಾರ ನೆರವೇರಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X