Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಸಿ ವ್ಯಾಲಿ ಮೂಲಕ ಕೆರೆಗಳಿಗೆ ಆ.1...

ಕೆಸಿ ವ್ಯಾಲಿ ಮೂಲಕ ಕೆರೆಗಳಿಗೆ ಆ.1 ರವರೆಗೆ ನೀರು ಹರಿಸದಂತೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ24 July 2018 10:18 PM IST
share
ಕೆಸಿ ವ್ಯಾಲಿ ಮೂಲಕ ಕೆರೆಗಳಿಗೆ ಆ.1 ರವರೆಗೆ ನೀರು ಹರಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು, ಜು.21: ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 163 ಕೆರೆಗಳಿಗೆ ಹರಿಸದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಚಿಕ್ಕಬಳ್ಳಾಪುರ ತಾಲೂಕಿನ ಪಟ್ರೇನಹಳ್ಳಿಯ ಆರ್.ಆಂಜನೇಯ ರೆಡ್ಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಸಂಸ್ಕರಿಸಿದ ನೀರಿನ ಗುಣಮಟ್ಟ ಖಾತ್ರಿ ಆಗುವತನಕ ಕೆರೆಗಳಿಗೆ ನೀರು ಹರಿಸಬಾರದು ಎಂದು ನ್ಯಾಯಪೀಠ ಮಧ್ಯಂತರ ಆದೇಶ ನೀಡಿದೆ.

ಬೆಳ್ಳಂದೂರು ಕೆರೆಯಿಂದ ಕೋರಮಂಗಲ ಚಲ್ಲಘಟ್ಟ(ಕೆ.ಸಿ ವ್ಯಾಲಿ) ಯೋಜನೆಯ ಮೂಲಕ ಕೋಲಾರದ ಕೆರೆಗಳಿಗೆ ಹರಿಸುತ್ತಿದ್ದ ನೀರಿನಲ್ಲಿ ನೊರೆ ಕಾಣಿಸಿಕೊಂಡಿತ್ತು. ಯೋಜನೆ ಕಾಮಗಾರಿ ಮುಗಿದ ಬಳಿಕ ಕೋಲಾರ ಜಿಲ್ಲೆಗೆ ಪ್ರತಿನಿತ್ಯ 100 ಎಂಎಲ್‌ಡಿ ನೀರು ಹರಿದು ಬರುತ್ತಿತ್ತು. ನೀರಿನ ಪ್ರಮಾಣವನ್ನು 180 ಎಂಎಲ್‌ಡಿಗೆ ಹೆಚ್ಚಿಸಿದ ನಂತರ ನೀರಿನಲ್ಲಿ ನೊರೆ ಕಾಣಿಸಿಕೊಂಡಿತ್ತು. ಇದರಿಂದ ಲಕ್ಷ್ಮೀಸಾಗರ, ಉದ್ದಪ್ಪನಹಳ್ಳಿ, ಜೋಡಿ ಕೃಷ್ಣಾಪುರ, ನರಸಾಪುರ ಹಾಗೂ ದೊಡ್ಡವಲ್ಲಭಿ ಕೆರೆಯ ನೀರು ಕಲುಷಿತಗೊಂಡಿತ್ತು.

ರಾಸಾಯನಿಕ ಕೈಗಾರಿಕೆಗಳು ಹೊರ ಬಿಡುವ ವಿಷಕಾರಿ ನೀರು ಹಾಗೂ ಅಪಾರ್ಟ್‌ಮೆಂಟ್‌ಗಳ ಕೊಳಚೆ ನೀರು ಬೆಂಗಳೂರಿನ ಬೆಳ್ಳಂದೂರು ಕೆರೆ ಸೇರುತ್ತಿದೆ. ಆ ನೀರನ್ನು ಎರಡು ಹಂತದಲ್ಲಿ ಸಂಸ್ಕರಿಸಿ ಜಿಲ್ಲೆಗೆ ಹರಿಸಲಾಗುತ್ತಿದೆ. ಮೂರನೇ ಹಂತದಲ್ಲಿ ಸಂಸ್ಕರಿಸಿದ ನಂತರವಷ್ಟೇ ನೀರು ಬಳಕೆಗೆ ಯೋಗ್ಯವೆಂದು ಭಾರತೀಯ ವಿಜ್ಞಾನ ಸಂಸ್ಥೆ ವರದಿ ನೀಡಿತ್ತು. ಕೆ.ಸಿ ವ್ಯಾಲಿ ಯೋಜನೆ ನೀರನ್ನು 3 ಹಂತದಲ್ಲಿ ಸಂಸ್ಕರಿಸಿ ಜಿಲ್ಲೆಯ ಕೆರೆಗಳಿಗೆ ಹರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳು ನಡೆದಿದ್ದವು.

ಹಿಂದಿನ ಕಾಂಗ್ರೆಸ್ ಸರಕಾರವು 1,280 ಕೋಟಿ ಅಂದಾಜು ವೆಚ್ಚದ ಕೆ.ಸಿ ವ್ಯಾಲಿ ಯೋಜನೆ ಕೈಗೆತ್ತಿಕೊಂಡಿತ್ತು. 2016ರ ಮೇ 30ರಂದು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಹಲವು ಅಡೆತಡೆಗಳ ನಡುವೆ ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಜಿಲ್ಲೆಯ 121 ಕೆರೆಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ 5 ಕೆರೆಗಳನ್ನು ತುಂಬಿಸಿ ಅಂತರ್ಜಲ ವೃದ್ಧಿಸುವುದು ಈ ಯೋಜನೆಯ ಉದ್ದೇಶ. ಜೂನ್ 2ರಿಂದ ಜಿಲ್ಲೆಗೆ ಪ್ರತಿನಿತ್ಯ ಸುಮಾರು 10 ಕೋಟಿ ಲೀಟರ್ ನೀರು ಹರಿದು ಬರುತ್ತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X