ಹನೂರು: ಮಹಿಳಾ ಹಾಲು ಉತ್ಪಾದಕರ ಸಂಘದ ಪದಾಧಿಕಾರಿಗಳ ನೇಮಕ
ಹನೂರು,ಜು.24: ಸಮೀಪದ ಕಂಡ್ಯಾಯನಪಾಳ್ಯ ಗ್ರಾಮದ ಮಹಿಳಾ ಹಾಲು ಉತ್ಪಾದಕರ ಸಂಘಕ್ಕೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಶಾ, ಉಪಾಧ್ಯಕ್ಷರಾಗಿ ರೇಣುಕಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಟ್ಟು 10 ಮಂದಿ ಸದಸ್ಯರಿರುವ ಮಹಿಳಾ ಹಾಲು ಉತ್ಪಾದಕರ ಸಂಘದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಶಾ, ಉಪಾಧ್ಯಕ್ಷೆ ಸ್ಥಾನಕ್ಕೆ ರೇಣುಕಾ ನಾಮಪತ್ರ ಸಲ್ಲಿಸಿದರು. ಬೇರೆ ಯಾರೂ ನಾಮ ಪತ್ರ ಸಲ್ಲಿಸದ ಕಾರಣ ಇವರ ಆಯ್ಕೆಯನ್ನು ಚುನಾವಣಾಧಿಕಾರಿಗಳಾದ ಕೊಳ್ಳೇಗಾಲ ತಾಲೂಕು ಅಕ್ಷರದಾಸೋಹ ಅಧಿಕಾರಿ ದೊರೈಸ್ವಾಮಿ.ಬಿ ಮತ್ತು ಈ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ತನುಜಾ ಘೋಷಿಸಿದರು.
ನೂತನವಾಗಿ ಆಯ್ಕೆಯಾದವರಿಗೆ ಚಾಮುಲ್ ಅಧ್ಯಕ್ಷ ಗುರುಮಲ್ಲಪ್ಪ, ಜಿಪಂ ಸದಸ್ಯೆ ಲೇಖಾ ರವಿಕುಮಾರ್ ಮತ್ತು ತಾಪಂ ಸದಸ್ಯೆ ರುಕ್ಮಣಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಗ್ರಾಮದ ಮುಖಂಡರುಗಳಾದ ಮಾದೇಶ್ ಕಂಡ್ಯಾಯನಪಾಳ್ಯ, ಶಾಲಾ ಮುಖ್ಯ ಶಿಕ್ಷಕಿಯಾದ ತನುಜಾ, ಶಿಕ್ಷಕ ಶಾಂತರಾಜ್ ಸೇರಿದಂತೆ ಸಂಘದ ಸದಸ್ಯರು ಹಾಜರಿದ್ದರು.
Next Story