ಕುಂದಾಪುರ: ಸ್ಕಾರ್ಪಿಯೋ ಢಿಕ್ಕಿ; ಸ್ಕೂಟರ್ ಸವಾರೆ ಮೃತ್ಯು

ಕುಂದಾಪುರ, ಜು. 24: ಸ್ಕಾರ್ಪಿಯೋ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರೆ ದಾರುಣವಾಗಿ ಮೃತಪಟ್ಟ ಘಟನೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ನಡೆದಿದೆ.
ಕುಂದಾಪುರ ತಾಲೂಕಿನ ಕುಂಭಾಶಿ ಗ್ರಾಮದ ಕೋಟೇಶ್ವರ ನಿವಾಸಿ ಸುಜಾತಾ (28) ಮೃತರು ಎಂದು ಗುರುತಿಸಲಾಗಿದೆ.
ಸ್ಕೂಟರ್ ನಲ್ಲಿದ್ದ ನಾಲ್ಕು ವರ್ಷದ ಪುತ್ರ ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ಕುಂದಾಪುರದಿಂದ ಉಡುಪಿಯತ್ತ ಸಾಗುತ್ತಿದ್ದ ಸ್ಕಾರ್ಪಿಯೋ
ಸ್ಕೂಟಿಗೆ ಢಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದ ಸುಜಾತ ಗಂಭೀರವಾಗಿ ಗಾಯಗೊಂಡು ಮೃತಪಟ್ಟರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಕುಂದಾಪುರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story





