Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಮೂಲಸೌಕರ್ಯಕ್ಕಾಗಿ...

ಚಿಕ್ಕಮಗಳೂರು: ಮೂಲಸೌಕರ್ಯಕ್ಕಾಗಿ ಕಲ್ಲೊಡ್ಡಿ ನಿವಾಸಿಗಳಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ24 July 2018 11:46 PM IST
share
ಚಿಕ್ಕಮಗಳೂರು: ಮೂಲಸೌಕರ್ಯಕ್ಕಾಗಿ ಕಲ್ಲೊಡ್ಡಿ ನಿವಾಸಿಗಳಿಂದ ಧರಣಿ

ಚಿಕ್ಕಮಗಳೂರು, ಜು.24: ನಗರದ ಹೊರವಲಯದಲ್ಲಿರುವ ಕಲ್ಲೊಡ್ಡಿ, ಇಂದಿರಾಗಾಂಧಿ ಬಡಾವಣೆಗಳಿಗೆ ಸುಸಜ್ಜಿತ ರಸ್ತೆ, ಸಮರ್ಪಕ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ನಗರಸಭೆ ವಿಫಲವಾಗಿದೆ. ಕೂಡಲೇ ಜಿಲ್ಲಾಡಳಿತ ಮೂಲಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಸ್ಥಳೀಯ ನಿವಾಸಿಗಳು ನಗರಸಭೆ ಕಚೇರಿ ಎದುರು ಮಂಗಳವಾರ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಡಾವಣೆಯಲ್ಲಿರುವ ರಸ್ತೆಗಳು ಮಳೆಗಾಲವಾದರಿಂದ ಕೆಸರಿನಿಂದ ಕೂಡಿದ್ದು, ಸಂಚರಿಸಲು ತೊಂದರೆಯಾಗಿದೆ. ರಸ್ತೆಯನ್ನು ಸರಿಪಡಿಸುವಂತೆ ಹಲವು ಬಾರಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಕಿಡಿಕಾರಿದರು.

ನೂತನವಾಗಿ ನಿರ್ಮಾಣವಾಗುತ್ತಿರುವ ವಾಜಪೇಯಿ ವಸತಿ ಬಡಾವಣೆಯಿಂದ ನೀರು ಗ್ರಾಮಕ್ಕೂ ನುಗ್ಗುತ್ತಿದ್ದು, ನೀರು ಸಮರ್ಪಕವಾಗಿ ಹರಿಯಲು ಚರಂಡಿಗಳಿಲ್ಲದೇ ಓಡಾಡುವ ರಸ್ತೆಗಳು ಕೆಸರು ಗದ್ದೆಗಳಾಗಿ ಮಾರ್ಪಟ್ಟಿವೆ. ಕುಡಿಯುವ ನೀರು ಸಹ ಇಲ್ಲದೇ ಜೀವನ ನರಕಸದೃಶವಾಗಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡರು.

ಸ್ಥಳಕ್ಕೆ ಬಂದ ನಗರಸಭಾ ಸದಸ್ಯ ಟಿ.ರಾಜಶೇಖರ್ ಸೇರಿದಂತೆ ಹಲವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು, ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವುದಾಗಿ ಹೇಳಿದರೂ ಸಹ ತಮ್ಮ ಆಕ್ರೋಶ ಮುಂದುವರಿಸಿದರು.

ಧರಣಿ ನೇತೃತ್ವ ವಹಿಸಿದ್ದ ಸ್ಥಳೀಯ ನಗರಸಭಾ ಸದಸ್ಯೆ ಸುರೇಖಾ ಸಂಪತ್‌ರಾಜ್ ಮಾತನಾಡಿ, ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ನಗರಸಭೆಗೆ ಹಲವು ಬಾರಿ ಮನವಿ ಮಾಡಿಕೊಂಡರೂ ವಿರೋಧ ಪಕ್ಷದ ಸದಸ್ಯರು ಎಂಬ ಕಾರಣಕ್ಕೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸದಸ್ಯ ಟಿ. ರಾಜಶೇಖರ್ ಮತ್ತು ಸುರೇಖಾ ಸಂಪತ್‌ರಾಜ್ ಮತ್ತು ಗ್ರಾಮಸ್ಥರ ವಾಗ್ವಾದ ನಡೆಯಿತು. ನಂತರ ಧರಣಿ ನಿರತರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಸಂದರ್ಭ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿಗಳು, ನಗರಸಭೆ ಸಲ್ಲಿಸಿರುವ 4 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆಗಳಿಗೆ ಜೆಲ್ಲಿ ಬಿಚಾವಣೆ ಯೋಜನೆ ಅವೈಜ್ಞಾನಿಕವೂ ಹಾಗೂ ತಾತ್ಕಾಲಿಕವೂ ಆಗಿದೆ. ತಾತ್ಕಾಲಿಕವಾಗಿ ಜೆಲ್ಲಿ ಬಿಚಾವಣೆ ಮಾಡುವ ಬದಲು ನಗರದಲ್ಲಿ ಜರೂರಾಗಿ ಆಗಬೇಕಿರುವ ರಸ್ತೆಗಳನ್ನು ಟಾರ್ ಅಥವಾ ಕಾಂಕ್ರೀಟ್ ರಸ್ತೆಗಳನ್ನು ಶಾಶ್ವತವಾಗಿ ನಿರ್ಮಿಸಿ ಎಂದು ಹೇಳಿದ್ದೇನೆ. ನಗರಸಭೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಜಿಲ್ಲಾಡಳಿತದ ಮೇಲೆ ಗೂಬೆ ಕೂರಿಸುವುದು ಬೇಡ ಎಂದು ಸ್ಥಳದಲ್ಲಿಯೇ ಇದ್ದ ನಗರಸಭಾ ಸದಸ್ಯರಿಗೆ ಟಾಂಗ್ ನೀಡಿದರು.

ಮಳೆ ಮುಗಿಯುವರೆಗೂ ತಾತ್ಕಾಲಿಕವಾಗಿ ರಸ್ತೆಯಲ್ಲಿರುವ ಕೆಸರನ್ನು ತೆರವುಗೊಳಿಸಿ ನಡೆದಾಡಲು ಅವಕಾಶಮಾಡಿ ಕೊಡಿ. ಮಳೆ ಬಿಡುವು ನೀಡಿದ ನಂತರ ರಸ್ತೆ ನಿರ್ಮಾಣದ ಕಾಮಗಾರಿ ಕೈಗೊಳ್ಳಿ ಎಂದು ಸ್ಥಳೀಯ ಜನಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಇದೇ ವೇಳೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಭರವಸೆ ಮೇರೆಗೆ ಧರಣಿ ನಿರತರು ಧರಣಿ ಹಿಂಪಡೆದರು.

ಧರಣಿಯಲ್ಲಿ ಬಡಾವಣೆ ನಿವಾಸಿಗಳಾದ ಸಿರಾಜ್, ದೀಪಕ್, ರೂಕ್ಸಾನ ಸೇರಿದಂತೆ ನೂರಾರು ನಿವಾಸಿಗಳು ಭಾಗವಹಿಸಿದ್ದರು.

ಸುಮಾರು 4 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಗರದ ವಿವಿಧ ವಾರ್ಡ್‌ಗಳ ರಸ್ತೆಗಳಿಗೆ ಕಲ್ಲು ಬಿಚಾವಣೆ ಮಾಡಲು ಅನುಮೋದನೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಜಿಲ್ಲಾಧಿಕಾರಿಗಳು ತಿರಸ್ಕರಿಸಿದ್ದಾರೆ.

-ಟಿ.ರಾಜಶೇಖರ್, ನಗರಸಭೆ ಸದಸ್ಯ

ನಗರಸಭೆ ಸಲ್ಲಿಸಿರುವ 4 ಕೋಟಿ ರೂ. ವೆಚ್ಚದಲ್ಲಿ ವಿವಿಧ ರಸ್ತೆಗಳಿಗೆ ಜೆಲ್ಲಿ ಬಿಚಾವಣೆ ಯೋಜನೆ ಅವೈಜ್ಞಾನಿಕವೂ ಹಾಗೂ ತಾತ್ಕಾಲಿಕವೂ ಆಗಿದೆ. ತಾತ್ಕಾಲಿಕವಾಗಿ ಜೆಲ್ಲಿ ಬಿಚಾವಣೆ ಮಾಡುವ ಬದಲು ನಗರದಲ್ಲಿ ಜರೂರಾಗಿ ಆಗಬೇಕಿರುವ ರಸ್ತೆಗಳನ್ನು ಟಾರ್ ಅಥವಾ ಕಾಂಕ್ರಿಟ್ ರಸ್ತೆಗಳನ್ನು ಶಾಶ್ವತವಾಗಿ ನಿರ್ಮಿಸಲು ಹೇಳಿದ್ದೇನೆ.
-ಶ್ರೀರಂಗಯ್ಯ, ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X