Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಿರೂರು ಶ್ರೀ ನಿಗೂಢ ಸಾವಿನ ಬಗ್ಗೆ ಮಾತ್ರ...

ಶಿರೂರು ಶ್ರೀ ನಿಗೂಢ ಸಾವಿನ ಬಗ್ಗೆ ಮಾತ್ರ ಧ್ವನಿ ಎತ್ತಿದ್ದೇನೆ: ಕೇಮಾರು ಶ್ರೀ

‘ಸಾಮಾಜಿಕ ಜಾಲತಾಣಗಳ ಮೂಲಕ ಬೆದರಿಕೆ’

ವಾರ್ತಾಭಾರತಿವಾರ್ತಾಭಾರತಿ25 July 2018 8:48 PM IST
share
ಶಿರೂರು ಶ್ರೀ ನಿಗೂಢ ಸಾವಿನ ಬಗ್ಗೆ ಮಾತ್ರ ಧ್ವನಿ ಎತ್ತಿದ್ದೇನೆ: ಕೇಮಾರು ಶ್ರೀ

ಮಂಗಳೂರು, ಜು.25: ಉಡುಪಿ ಅಷ್ಟಮಠದ ಆಂತರಿಕ ವಿಷಯದಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡಿಲ್ಲ, ಮಾಡುವುದೂ ಇಲ್ಲ. ಶಿರೂರು ಶ್ರೀಗಳ ನಿಗೂಢ ಸಾವಿನ ಬಗ್ಗೆ ಮಾತ್ರ ತಾನು ಧ್ವನಿ ಎತ್ತಿದ್ದೇನೆ ಎಂದು ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಕೇಮಾರು ಸ್ವಾಮೀಜಿ, ಉಡುಪಿ ಅಷ್ಟ ಮಠ ಹಾಗೂ ಶೀರೂರು ಶ್ರೀ ಲಕ್ಷ್ಮಿವರ ತೀಥ ಸ್ವಾಮೀಜಿ ಅವರ ವೈಯಕ್ತಿಕ ವಿಷಯ ತನಗೆ ಸಂಬಂಧಿಸಿದ್ದಲ್ಲ. ಶೀರೂರು ಸ್ವಾಮೀಜಿ ಸಾವಿಗೆ ಮುನ್ನ ಅವರ ದೇಹದಲ್ಲಿ ವಿಷ ಸೇರಿಕೊಂಡಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಶ್ರೀಗಳ ಆಹಾರವೇ ವಿಷವಾಗಿತ್ತೇ ಅಥವಾ ಆಹಾರಕ್ಕೆ ವಿಷ ಬೆರೆಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದೆ. ಈ ಬಗ್ಗೆ ಸಮರ್ಪಕ ತನಿಖೆ ನಡೆಸುವುದಾಗಿ ಉಡುಪಿ ಎಸ್ಪಿ ಭರವಸೆ ನೀಡಿದ್ದಾರೆ. ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆ, ಹೋರಾಟ ನಡೆಸುವುದಿಲ್ಲ ಎಂದರು.

ನಾನು ದೇಶದ ಸಂವಿಧಾನದಲ್ಲಿ ನಂಬಿಕೆ ಉಳ್ಳವ. ಶ್ರೀರೂರು ಸ್ವಾಮೀಜಿ ತಪ್ಪು ಮಾಡಿದ್ದರೆ ಅದಕ್ಕೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶವಿತ್ತು. ಅವರನ್ನು ಕೊಲ್ಲುವ ಅಧಿಕಾರ ಯಾರಿಗೂ ಇಲ್ಲ. ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ಪರೀಕ್ಷೆಯ ವರದಿಯಿಂದ ಸಾವು ಹೇಗೆ ಸಂಭವಿಸಿತು ಎನ್ನುವುದು ಸ್ಪಷ್ಟವಾಗಲಿದೆ ಎಂದರು.

ಶೀರೂರು ಸ್ವಾಮೀಜಿ ಅವರ ಆತ್ಮಕಥೆಯನ್ನು ಬೆಂಗಳೂರಿನ ವ್ಯಕ್ತಿಯೊಬ್ಬರು ಬರೆಯುವ ಬಗ್ಗೆ ಮಾಹಿತಿ ಇದೆ. ಅವರು ಯಾರೆಂಬುದನ್ನು ಈ ಹಂತದಲ್ಲಿ ಅವರಲ್ಲಿ ಕೇಳದೆ ಹೇಳಲಾರೆ. ಅವರು ಶ್ರೀಗಳ ಆತ್ಮಕಥೆ ಬರೆದಿದ್ದಾರೋ ಇಲ್ಲವೋ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಕೇಮಾರು ಶ್ರೀ ಹೇಳಿದರು.

‘ಸಾಮಾಜಿಕ ಜಾಲತಾಣಗಳ ಮೂಲಕ ಬೆದರಿಕೆ’

ಶೀರೂರು ಶ್ರೀಗಳ ನಿಧನದ ಬಳಿಕ ಈ ಬಗ್ಗೆ ತನಿಖೆ ಆಗ್ರಹಿಸಿದ ಕಾರಣ ತನಗೆ ಕೆಲ ದಿನಗಳಿಂದ ವಾಟ್ಸ್ಆ್ಯಪ್, ಫೇಸ್‌ಬುಕ್ ಮೂಲಕ ಬೆದರಿಕೆಗಳು ಬರುತ್ತಿವೆ. ಶ್ರೀಗಳ ನಿಧನದ ಬಗ್ಗೆ ವೈದ್ಯರ ಹೇಳಿಕೆ ಹಿನ್ನೆಲೆಯಲ್ಲಿ ಸಂಶಯ ಹುಟ್ಟಿಕೊಂಡಿತ್ತು. ಈ ನಿಟ್ಟಿನಲ್ಲಿ ತನಿಖೆಗೆ ಆಗ್ರಹಿಸಿದ್ದೆ. ಅದನ್ನು ನೆಪವಾಗಿರಿಸಿ ನನಗೆ ಬೆದರಿಕೆ ಒಡ್ಡಲಾಗಿದೆ. ಈ ಬಗ್ಗೆ ಪೊಲೀಸ್ ದೂರು ನೀಡುವ ಬಗ್ಗೆ ಆಲೋಚನೆ ಮಾಡುತ್ತೇನೆ ಎಂದು ಕೇಮಾರು ಶ್ರೀ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X