ಪಿಲಿಕುಳ ನಿಸರ್ಗಧಾಮದಲ್ಲಿ ನೂತನ ಎಟಿಎಂ ಕೇಂದ್ರಕ್ಕೆ ಚಾಲನೆ

ಮಂಗಳೂರು, ಜು.25: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರ ಹಾಗೂ ಸಾರ್ವಜನಿಕರ ಅನೂಕೂಲಕ್ಕಾಗಿ ವಿಜಯಾ ಬ್ಯಾಂಕ್ ವತಿಯಿಂದ ಪಿಲಿಕುಳದ ಮುಖ್ಯ ಪ್ರವೇಶದ್ವಾರದ ಬಳಿ ನಿರ್ಮಿಸಲಾದ ನೂತನ ಎ.ಟಿ.ಎಂ. ಕೆಂದ್ರವನ್ನು ಅಪರ ಜಿಲ್ಲಾಧಿಕಾರಿ ಕುಮಾರ್ ಬುಧವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಈ ಎಟಿಎಂ ಪಿಲಿಕುಳಕ್ಕೆ ಬರುವ ಪ್ರವಾಸಿಗರಿಗೆ ಮತ್ತು ಸ್ಥಳೀಯ ಗ್ರಾಮಸ್ಥರಿಗೆ ಸದುಪಯೋಗಲಿ ಎಂದು ಹಾರೈಸಿದರು.
ಈ ಸಂದರ್ಭ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ವಿ. ಪ್ರಸನ್ನ ಮತ್ತು ವಿಜಯಾ ಬ್ಯಾಂಕ್‌ನ ಕ್ಷೇತ್ರಿಯ ಪ್ರಬಂಧಕ ಎ.ಶ್ರೀಧರ್ ಮೂರ್ತಿ, ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್.ರಂಗರಾಜು ಮತ್ತಿತರರು ಉಪಸ್ಥಿತರಿದ್ದರು.
ವಿಜಯಾ ಬ್ಯಾಂಕ್ ವಾಮಂಜೂರು ಶಾಖೆಯ ಪ್ರಬಂಧಕ ಪ್ರಭಾಕರ್ ಅಹೆರ್ ಕಾರ್ಯಕ್ರಮ ನಿರೂಪಿಸಿದರು.
Next Story





