Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಜನಸ್ನೇಹಿಯಾಗದ ಸುರತ್ಕಲ್ ಅಟಲ್‌ಜೀ...

ಜನಸ್ನೇಹಿಯಾಗದ ಸುರತ್ಕಲ್ ಅಟಲ್‌ಜೀ ಕೇಂದ್ರ

ಸಾರ್ವಜನಿಕರ ಅಳಲಿಗೆ ಸ್ಪಂದಿಸದ ಅಧಿಕಾರಿಗಳು

ವಿಶೇಷ ವರದಿ: ಬಂದೇನವಾಝ್ವಿಶೇಷ ವರದಿ: ಬಂದೇನವಾಝ್26 July 2018 6:15 PM IST
share
ಜನಸ್ನೇಹಿಯಾಗದ ಸುರತ್ಕಲ್ ಅಟಲ್‌ಜೀ ಕೇಂದ್ರ

ಮಂಗಳೂರು, ಜು.26: ಸುರತ್ಕಲ್ ಹೋಬಳಿಯಲ್ಲಿನ ಅಟಲ್‌ಜೀ ಜನಸ್ನೇಹಿ ಕೇಂದ್ರ ಸಾರ್ವಜನಿಕರಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಹಲವು ದಾಖಲಾತಿ ಕಾರ್ಯಗಳಿಗಾಗಿ ಸುತ್ತಲಿನ ಹಳ್ಳಿಗಳ ಜನರು ಕೇಂದ್ರಕ್ಕೆ ಆಗಮಿಸಿ ಸರದಿ ಸಾಲಿನಲ್ಲಿ ನಿಂತರೂ ಕೆಲಸವಾಗದಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.

ಒಮ್ಮೆ ಕಂಪ್ಯೂಟರ್ ಕೈಕೊಟ್ಟರೆ, ಇನ್ನೊಮ್ಮೆ ನೆಟ್‌ವರ್ಕ್ ಇರುವುದಿಲ್ಲ. ಪ್ರಿಂಟರ್ ಕೆಟ್ಟಿದೆ... ಹೀಗೆ ಒಂದಲ್ಲಾ ಒಂದು ಸಮಸ್ಯೆಗಳು ಇದ್ದೇ ಇರುತ್ತವೆ. ದೂರದ ಊರಿನಿಂದ ಬರುವ ಗ್ರಾಮಸ್ಥರು ತಮ್ಮ ಕೆಲಸಗಳಾಗದೇ ಬೇಸತ್ತು ಶಪಿಸುತ್ತ ಮನೆಗೆ ತೆರಳುವುದು ಇಲ್ಲಿ ಸಾಮಾನ್ಯವಾಗಿದೆ. ಒಂದೊಂದು ಪ್ರಮಾಣಪತ್ರಕ್ಕೆ 3-4 ದಿನಗಳ ಕಾಲ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹೋಬಳಿ ಕೇಂದ್ರ ಕಚೇರಿಯಲ್ಲಿ ಒಂದು ಕಂಪ್ಯೂಟರ್ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ನಾಲ್ಕೈದು ಮಂದಿ ಸಿಬ್ಬಂದಿ ಇದ್ದರೂ ಎಲ್ಲ ಕೆಲಸವನ್ನು ಒಬರೇ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಪಹಣಿ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರಹವಾಸಿ ಪತ್ರಗಳನ್ನು ನೀಡಲು ಒಬ್ಬನೇ ಸಿಬ್ಬಂದಿ ಕೆಲಸ ಮಾಡಬೇಕಾದ ಪರಿಸ್ಥಿತಿ ಇದೆ.

ಒಂದು ಪ್ರಮಾಣಪತ್ರಕ್ಕಾಗಿ ಬೆಳಗ್ಗೆಯಿಂದ ಸಂಜೆಯವರೆಗೂ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಕೆಲವೊಮ್ಮೆ 3-4 ದಿನಗಳಾದರೂ ಪ್ರಮಾಣಪತ್ರ ಸಿಗುವುದಿಲ್ಲ. ಪುರುಷರು ಕೆಲಸಕ್ಕಾಗಿ ಹೊರಗಡೆ ತೆರಳಿರುತ್ತಾರೆ. ಮಹಿಳೆಯರು ಮಕ್ಕಳನ್ನು ಎತ್ತಿಕೊಂಡು ಹಲವು ಗಂಟೆಗಳ ಕಾಲ ಸರದಿ ಸಾಲಿನಲ್ಲಿ ನಿಂತು ಪ್ರಮಾಣಪತ್ರ ಪಡೆಯುವ ದುಃಸ್ಥಿತಿ ನಿರ್ಮಾಣವಾಗಿದೆ.

ಸಾರ್ವಜನಿಕರು ಬೆಳಗ್ಗೆ 7ರಿಂದ ಸರದಿ ಸಾಲಿನಲ್ಲಿ ನಿಲ್ಲುತ್ತಾರೆ. ಬೆಳಗ್ಗೆ 10 ಗಂಟೆಗೆ ಬರುವ ಸಿಬ್ಬಂದಿ ಇದರ ಕೆಲಸವನ್ನು ನಿರ್ವಹಿಸಬೇಕಾಗಿದೆ. ಹೀಗಾಗಿ ದಿನಕ್ಕೆ ನಾಲ್ಕೈದು ಮಂದಿಯ ನೋಂದಣಿ ಮಾತ್ರ ಸಾಧ್ಯವಾಗುತ್ತದೆ. ಕಂಪ್ಯೂಟರ್‌ಗಳ ಸಂಖ್ಯೆಯನ್ನು ಹೆಚ್ಚಿಸಿದರೆ ನಾಲ್ಕೈದು ದಿನಗಳ ವರೆಗೆ ಸರದಿಯಲ್ಲಿ ನಿಂತುಕೊಳ್ಳುವುದು ತಪ್ಪಲಿದೆ.

ತಹಶೀಲ್ದಾರ್‌ಗೆ ಸಮಸ್ಯೆಯ ಬಗ್ಗೆ ತಿಳಿಸಿ ಹೆಚ್ಚುವರಿ ಕಂಪ್ಯೂಟರ್‌ಗಳ ಖರೀದಿಗೆ ಸಾರ್ವಜನಿಕರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಸಮಸ್ಯೆಗಳಿಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವುದು ಸಾರ್ವಜನಿಕರ ಆರೋಪ.

ಹೋಬಳಿ ಕೇಂದ್ರದ ನಾಡಕಚೇರಿಯಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕುಳಿತುಕೊಳ್ಳಲು ಕುರ್ಚಿ, ಕುಡಿಯಲು ನೀರಿಲ್ಲ. ಕೇಂದ್ರದಲ್ಲಿ ಮೂಲಸೌಲಭ್ಯದ ಕೊರತೆ ತೀವ್ರವಾಗಿದೆ. ಮಹಿಳೆಯರ ಪಾಡಂತೂ ಹೇಳತೀರದು. ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಲಿ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಇಲ್ಲಿನ ಅಟಲ್‌ಜೀ ಜನಸ್ನೇಹಿ ಕೇಂದ್ರದಲ್ಲಿ ವಿವಿಧ ಯೋಜನೆಗಳ ದಾಖಲಾತಿ ಹಾಗೂ ಅರ್ಜಿಗಳನ್ನು ಕೊಡಲು ಮಹಿಳೆಯರು, ವಿಕಲಚೇತನರು, ವೃದ್ಧರು ಸೇರಿದಂತೆ ಸುತ್ತಮುತ್ತಲಿನ ಹಲವು ಹಳ್ಳಿಗಳ ಜನರು ಪಡಬಾರದ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಜನ ಅನುಭವಿಸುತ್ತಿರುವ ತೊಂದರೆಗೆ ಯಾವ ಅಧಿಕಾರಿಯೂ ಸ್ಪಂದಿಸುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಜೂನ್-ಜುಲೈ ತಿಂಗಳಿನಲ್ಲಿ ಶಾಲಾ ಕಾಲೇಜುಗಳು ಆರಂಭವಾಗಿದ್ದು, ಸದ್ಯ ಶಿಷ್ಯವೇತನ ಮತ್ತಿತರ ಕಾರಣಗಳಿಗಾಗಿ ಜಾತಿ, ಆದಾಯ ಪ್ರಮಾಣಪತ್ರಗಳ ಅಗತ್ಯವಿರುತ್ತದೆ. ಇದಕ್ಕಾಗಿ ನಾಲ್ಕೈದು ದಿನಗಳ ಕಾಲ ಸರದಿ ಸಾಲಿನಲ್ಲಿ ನಿಂತರೂ ಪ್ರಮಾಣಪತ್ರ ಸಿಗುತ್ತಿಲ್ಲ. ಟೋಕನ್ ವ್ಯವಸ್ಥೆಯನ್ನೂ ಮಾಡಿಲ್ಲ. ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸಿ, ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.

ನಾಝಿರ್, ಜೋಕಟ್ಟೆ ನಿವಾಸಿ

ಅಟಲ್‌ಜೀ ಜನಸ್ನೇಹಿ ಕೇಂದ್ರದಲ್ಲಿ ರೇಶನ್ ಕಾರ್ಡ್, ಸ್ಕಾಲರ್‌ಶಿಪ್‌ಗಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಪಡೆಯುವವರ ಸಂಖ್ಯೆ ಕೆಲವು ದಿನಗಳಿಂದ ಹೆಚ್ಚಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಎರಡು ದಿನಗಳ ಹಿಂದೆ ಮತ್ತೊಂದು ಕಂಪ್ಯೂಟರ್ ಅಳವಡಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಸರ್ವರ್ ಸಮಸ್ಯೆ ಉಂಟಾಗಿದೆ. ಕೂಡಲೇ ಸಮಸ್ಯೆ ಬಗೆಹರಿಯಲು ಕ್ರಮ ಕೈಗೊಳ್ಳಲಾಗುವುದು.

 ಗುರುಪ್ರಸಾದ್, ತಹಶೀಲ್ದಾರ್, ಮಂಗಳೂರು

share
ವಿಶೇಷ ವರದಿ: ಬಂದೇನವಾಝ್
ವಿಶೇಷ ವರದಿ: ಬಂದೇನವಾಝ್
Next Story
X