ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಕಡೆಗಣನೆ ಆರೋಪ: ಎಸ್‌ಡಿಪಿಐನಿಂದ ಪ್ರತಿಭಟನೆ

ಮಂಗಳೂರು, ಜು.26: ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಕಡೆಗಣಿಸಿದೆ ಎಂದು ಆರೋಪಿಸಿ ಸಮ್ಮಿಶ್ರ ಸರಕಾರದ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ಸುರತ್ಕಲ್ ಜಂಕ್ಷನ್‌ನಲ್ಲಿ ಗುರುವಾರ ಸಂಜೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯಲ್ಲಿ ಎಸ್‌ಡಿಪಿಐನ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಎಸ್‌ಡಿಪಿಐ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಅಬೂಬಕರ್ ವಾಮಂಜೂರು, ಕಾರ್ಯದರ್ಶಿ ಅಝರ್ ಚೊಕ್ಕಬೆಟ್ಟು, ಸುರತ್ಕಲ್ ವಾರ್ಡ್ ಸಮಿತಿ ಅಧ್ಯಕ್ಷ ಸಲಾಂ ಕಾನ, ಅಬ್ದುಲ್ ಖಾದರ್, ಶಫೀಲ್ ಸುರತ್ಕಲ್ ಮತ್ತಿತರರು ಪಾಲ್ಗೊಂಡಿದ್ದರು.
Next Story





