ಗುಂಡ್ಲುಪೇಟೆ: ವಿದ್ಯುತ್ ಸ್ಪರ್ಶಿಸಿ ರೈತ ಮೃತ್ಯು

ಗುಂಡ್ಲುಪೇಟೆ,ಜು.27: ತಾಲೂಕಿನ ಹಂಗಳ ಗ್ರಾಮದಲ್ಲಿ ತಮ್ಮ ಮೋಟಾರು ಸ್ಟಾರ್ಟ್ ಮಾಡಲು ಹೋಗಿದ್ದ ರೈತ ವಿದ್ಯುತ್ ಸ್ಪರ್ಶಿಕ್ಕೊಳಗಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.
ಗ್ರಾಮದ ಪ್ರಕಾಶ್(45) ಎಂಬುವರು ಜಮೀನಿನಲ್ಲಿ ಬೆಳೆದಿರುವ ಬೆಳೆಗಳಿಗೆ ನೀರು ಹಾಯಿಸಲು ಮೋಟಾರು ಸ್ಟಾರ್ಟರ್ ಬಳಿ ಹೋಗಿದ್ದಾಗ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





