ಬೆಂಗಳೂರು: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರು ಮೃತ್ಯು

ಬೆಂಗಳೂರು, ಜು.27: ಬೈಕ್‌ಗೆ ಕಾರುಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಂಧ್ರ ಪ್ರದೇಶ ಮೂಲಕದ ಶ್ರೀನಿವಾಸಲು ಮತ್ತು ನಗರದ ಕೆಂಪಾಪುರದ ಗಣೇಶ್ ಎಂಬುವರು ಮೃತ ವ್ಯಕ್ತಿಗಳು ಎಂದು ಪೊಲೀಸರು ಗುರುತಿಸಿದ್ದಾರೆ.
ಯಲಹಂಕದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಗುರುವಾರ ತಡರಾತ್ರಿ ಏಕಾಏಕಿ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಇಬ್ಬರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಈ ಸಂಬಂಧ ಕಾರು ಚಾಲಕ ರಾಜೇಶ್ ಎಂಬಾತನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.
Next Story





