ಉಡುಪಿ: ವೈದ್ಯರ ಮುಷ್ಕರ ಯಶಸ್ವಿ

ಉಡುಪಿ, ಜು.28: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕ ಜಾರಿ ಖಂಡಿಸಿ ಭಾರತೀಯ ವೈದ್ಯರ ಸಂಘ(ಐಎಂಎ) ಶನಿವಾರ ಕರೆ ನೀಡಿರುವ ಮುಷ್ಕರಕ್ಕೆ ಉಡುಪಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರತು ಪಡಿಸಿ ಜಿಲ್ಲೆಯ ಸುಮಾರು 25 ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದ ಸೇವೆಯನ್ನು ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಸ್ಥಗಿತಗೊಳಿಸಲಾಗಿತ್ತು. ಈ ಮುಷ್ಕರದಲ್ಲಿ ಜಿಲ್ಲೆಯ ಸುಮಾರು 400ಕ್ಕೂ ಅಧಿಕ ವೈದ್ಯರು ಪಾಲ್ಗೊಂಡಿದ್ದಾರೆ.
ತುರ್ತು ಚಿಕಿತ್ಸೆ ಹಾಗೂ ಒಳರೋಗಿಗಳ ವಿಭಾಗದ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದವು ಎಂದು ಐಎಂಎ ಉಡುಪಿ ಕರಾವಳಿ ಅಧ್ಯಕ್ಷ ಡಾ.ವೈ.ಸುದರ್ಶನ್ ರಾವ್ ತಿಳಿಸಿದ್ದಾರೆ.
Next Story





