Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಡಳಿತ ಸೇವೆಗೆ ಹೆಚ್ಚು ಮಹಿಳೆಯರು ಬರಲಿ:...

ಆಡಳಿತ ಸೇವೆಗೆ ಹೆಚ್ಚು ಮಹಿಳೆಯರು ಬರಲಿ: ಜಿಲ್ಲಾಧಿಕಾರಿ ಪ್ರಿಯಾಂಕ

ವಾರ್ತಾಭಾರತಿವಾರ್ತಾಭಾರತಿ29 July 2018 7:37 PM IST
share
ಆಡಳಿತ ಸೇವೆಗೆ ಹೆಚ್ಚು ಮಹಿಳೆಯರು ಬರಲಿ: ಜಿಲ್ಲಾಧಿಕಾರಿ ಪ್ರಿಯಾಂಕ

ಉಡುಪಿ, ಜು. 29: ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಆಡಳಿತ ಸೇವೆಗೆ ಬರುವಂತಾಗಬೇಕು. ಇದರಿಂದ ಸರಕಾರಿ ಕಾರ್ಯಕ್ರಮಗಳ ಸಮರ್ಪಕ ಅನು ಷ್ಠಾನದ ಮೂಲಕ ಸಮಾಜದ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಉಡುಪಿ ಸಿಂಡಿಕೇಟ್ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಜಿಲ್ಲೆಯ ಪದವಿ/ಸ್ನಾತಕೋತ್ತರ ವಿದ್ಯಾರ್ಥಿ ಗಳಿಗೆ ನಡೆಸಿದ ಭಾರತೀಯ ನಾಗರೀಕ ಸೇವಾ ಪರೀಕ್ಷೆ (ಯುಪಿ ಎಸ್‌ಸಿ) ಹಾಗೂ ಕರ್ನಾಟಕ ಲೋಕ ಸೇವಾ ಪರೀಕ್ಷೆ (ಕೆಪಿಎಸ್‌ಸಿ)ಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡು ತಿದ್ದರು.

ಶ್ರಮಪಟ್ಟ ಅಧ್ಯಯನ ನಡೆಸಿದರೆ ಮಾತ್ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ. ಮಹಿಳೆಯರೇ ತಮಗೆ ವಹಿಸಿದ ಕೆಲಸವನ್ನು ಶಿಸ್ತುಬದ್ದವಾಗಿ ಮಾಡುವ ಕುರಿತಂತೆ ಬಾಲ್ಯದಿಂದಲೇ ತರಬೇತು ಪಡೆದಿರುತ್ತಾರೆ. ಅದ್ದರಿಂದ ಮಹಿಳೆಯರು ಆಡಳಿತ ಸೇವೆಗೆ ಬಂದಲ್ಲಿ ಸಮಾಜದಲ್ಲಿ ಹೆಚ್ಚಿನ ಉತ್ತಮ ಅಭಿವೃದ್ದಿ ಕೆಲಸಗಳನ್ನು ಮಾಡಲು ಸಾದ್ಯವಾಗುತ್ತದೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಸರಕಾರಿ ಕಚೇರಿಗಳಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಇಲ್ಲಿಗೆ ಹೊರ ಜಿಲ್ಲೆಯಿಂದ ನೇಮಕಗೊಂಡು ಬರುವ ಸಿಬ್ಬಂದಿಗಳು ಕೆಲವೇ ಸಮಯದಲ್ಲಿ ಮತ್ತೆ ತಮ್ಮ ಜಿಲ್ಲೆಗಳಿಗೆ ವರ್ಗ ಮಾಡಿಸಿಕೊಂಡು ಹೋಗುತ್ತಾರೆ. ಇದರಿಂದ ಜಿಲ್ಲೆಯಲ್ಲಿ ಹಲವು ಹುದ್ದೆಗಳು ಖಾಲಿಯಾಗಿವೆ. ಜಿಲ್ಲೆಯ ಸರಕಾರಿ ಹುದ್ದೆಗಳಿಗೆ ಉಡುಪಿ ಜಿಲ್ಲೆಯವರೇ ಅಧಿಕಾರಿಗಳಾಗಿ ಆಯ್ಕೆ ಯಾಗಿ ಬರಲಿ ಎಂಬ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಗ್ರಂಥಾಲಯದಲ್ಲಿ ಅಧ್ಯಯನಕ್ಕೆ ಬೇಕಾದ ಪುಸ್ತಕಗಳು ಲಭ್ಯವಿದ್ದು, ಇನ್ನೂ ಹೆಚ್ಚಿನ ಪುಸ್ತಕಗಳು ಬೇಕಾದ್ದಲ್ಲಿ ಒದಗಿಸಲಾಗುವುದು. ಪ್ರಚಲಿತ ವಿದ್ಯಾ ಮಾನಗಳನ್ನು ಅರಿತುಕೊಂಡು, ದಿನಪತ್ರಿಕೆಗಳನ್ನು ಓದುವುದರ ಜೊತೆಗೆ ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕೆಂದು ಅವರು ಸಲಹೆ ನೀಡಿದರು.

ಶಿಬಿರಾರ್ಥಿಗಳಾದ ಅಕ್ಷತಾ, ರಾಘವೇಂದ್ರ, ನಮಿತ, ಸೌಂದರ್ಯ ಶಿಬಿರದ ಅನುಭವ ಹಂಚಿಕೊಂಡರು. ಸಿಂಡಿಕೇಟ್ ಬ್ಯಾಂಕ್‌ನ ಪ್ರಾದೇಶಿಕ ಪ್ರಬಂಧಕ ಎಸ್.ಇ.ನಟರಾಜ್, ಲೀಡ್ ಬ್ಯಾಂಕ್ ಮೆನೇಜರ್ ರುದ್ರೇಶ್, ತರಬೇತಿ ಶಿಬಿರದ ನೋಡಲ್ ಅಧಿಕಾರಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ದೇವರಾಜ್, ಉಪನ್ಯಾಸಕ ಪ್ರೊ.ಸುರೇಂದ್ರನಾಥ ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ. ಸ್ವಾಗತಿಸಿದರು. ಶಕುಂತಳಾ ಕುಂದರ್ ವಂದಿಸಿದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನಿಸಿದಾಗ 380ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಅದರಲ್ಲಿ 133 ಪ್ರತಿಭಾವಂತರನ್ನು ಆಯ್ಕೆ ಮಾಡಿ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗಿತ್ತು. ಅದರಲ್ಲಿ ಆಯ್ಕೆಗೊಂಡ 50 ಮಂದಿಗೆ ಸೆಪ್ಟಂಬರ್ 2017 ರಿಂದ ಮೇ 2018ರ ವರೆಗೆ ಪ್ರತಿ ಶನಿವಾರ ಮತ್ತು ರವಿವಾರ ಸಂಪನ್ಮೂಲ ವ್ಯಕ್ತಿಗಳಿಂದ ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಕುರಿತು ಸಿಂಡಿಕೇಟ್ ಬ್ಯಾಂಕಿನ ಪ್ರಾದೇಶಿಕ ಕಚೇರಿಯ ಭಾಂಗಣದಲ್ಲಿ ತರಬೇತಿ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X