ಜು.30: ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಡಿಸಿ-ಸಿಇಓಗಳ ಸಭೆ

ಬೆಂಗಳೂರು, ಜು. 29: ಮಳೆ, ಅತಿವೃಷ್ಟಿಯಿಂದ ಕೊಡಗು, ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿನ ಹಾನಿ ಹಾಗೂ ಜಿಲ್ಲೆಗಳಲ್ಲಿ ಸಮಸ್ಯೆಗಳ ಇತ್ಯರ್ಥ್ಯಕ್ಕೆ ನಾಳೆ (ಜು.30) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಯಲಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ 10ಗಂಟೆಯಿಂದ ಸಭೆ ಡಿಸಿ ಮತ್ತು ಸಿಇಓಗಳ ಆರಂಭವಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಮಳೆ-ಅತಿವೃಷ್ಟಿಯಿಂದ ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿನ ರಸ್ತೆ ಹಾನಿ ಹಿನ್ನೆಲೆಯಲ್ಲಿ ಸಂಪರ್ಕ ರಸ್ತೆ ಪುನರ್ ನಿರ್ಮಾಣಕ್ಕೆ ಕ್ರಮ ಹಾಗೂ ಜಿಲ್ಲಾ ಮಟ್ಟದಲ್ಲಿ ಸಮಸ್ಯೆಗಳನ್ನು ಜಿಲ್ಲೆಗಳಲ್ಲೆ ಪರಿಹರಿಸಲು ಅಧಿಕಾರಿಗಳಿಗೆ, ಕುಮಾರಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡುವ ಸಾಧ್ಯತೆಗಳಿವೆ ಎಂದು ಗೊತ್ತಾಗಿದೆ.





