Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕೇವಲ 4...

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕೇವಲ 4 ಶೇ. ಮನೆಗಳ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ30 July 2018 8:13 PM IST
share
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕೇವಲ 4 ಶೇ. ಮನೆಗಳ ನಿರ್ಮಾಣ

ಹೊಸದಿಲ್ಲಿ, ಜು.30: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 2018ರ ಸಾಲಿಗೆ ಒಂಭತ್ತು ರಾಜ್ಯಗಳಿಗಾಗಿ ಮಂಜೂರಾಗಿರುವ 20 ಲಕ್ಷಕ್ಕೂ ಅಧಿಕ ಮನೆಗಳ ಪೈಕಿ ಕೇವಲ ಶೇ.4.05ರಷ್ಟು ಮನೆಗಳು ಈವರೆಗೆ ನಿರ್ಮಾಣಗೊಂಡಿವೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಂಕಿಅಂಶಗಳು ಬೆಟ್ಟುಮಾಡಿವೆ.

ಛತ್ತೀಸ್‌ಗಡ, ಹರ್ಯಾಣ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ,ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಮಂಜೂರಾಗಿರುವ ಒಟ್ಟು 20,23,884 ಮನೆಗಳ ಪೈಕಿ ಕೇವಲ 82,143 ಮನೆಗಳು ಪೂರ್ಣಗೊಂಡಿವೆ. ಹರ್ಯಾಣ, ಉ.ಪ್ರದೇಶ ಮತ್ತು ಛತ್ತೀಸ್‌ಗಡ ಅತ್ಯಂತ ಕಳಪೆ ಸಾಧನೆ ಪ್ರದರ್ಶಿಸಿವೆ. ಹರ್ಯಾಣಕ್ಕೆ 10 ಮನೆಗಳ ಸಾಧಾರಣ ಗುರಿಯನ್ನು ನೀಡಲಾಗಿತ್ತಾದರೂ ಅದು ಒಂದೇ ಒಂದು ಮನೆಯನ್ನು ನಿರ್ಮಿಸಿಲ್ಲ. ಉತ್ತರ ಪ್ರದೇಶ 89,426 ಮನೆಗಳನ್ನು ನಿರ್ಮಿಸಬೇಕಾಗಿತ್ತಾದರೂ ಅದೂ ಶೂನ್ಯ ಸಾಧನೆಯನ್ನು ಮಾಡಿದೆ. ಛತ್ತೀಸ್‌ಗಡವು ಮಂಜೂರಾಗಿದ್ದ 2,53,549 ಮನೆಗಳ ಪೈಕಿ ಕೇವಲ 146(ಶೇ.0.05) ಮನೆಗಳನ್ನು ನಿರ್ಮಿಸಿ ತೃಪ್ತಿ ಪಟ್ಟುಕೊಂಡಿದೆ.

ಇತರ ರಾಜ್ಯಗಳೂ ಹೇಳಿಕೊಳ್ಳುವಂತಹ ಸಾಧನೆಯನ್ನು ಮಾಡಿಲ್ಲ. ಮಧ್ಯಪ್ರದೇಶ ಮತ್ತು ಒಡಿಶಾ ಅನುಕ್ರಮವಾಗಿ ಶೇ.9.7 ಮತ್ತು ಶೇ.9.08 ಮನೆಗಳನ್ನು ನಿರ್ಮಿಸಿದ್ದು,ಇದೇ ಅತ್ಯುತ್ತಮ ಸಾಧನೆಯಾಗಿದೆ.

ಮನೆಗಳ ನಿರ್ಮಾಣ ಕಾಮಗಾರಿಯು ವಿವಿಧ ಕಾರಣಗಳಿಂದ ನಿಧಾನ ಗತಿಯಲ್ಲಿ ಸಾಗುತ್ತಿದೆ ಎಂದು ಹೇಳಿದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು, ರಾಜ್ಯ ಸರಕಾರಗಳ ಅಸಹಕಾರ ಮತ್ತು ಉದಾಸೀನ ಧೋರಣೆ ಯೋಜನೆಯು ಹಿಂದೆ ಬಿದ್ದಿರುವುದಕ್ಕೆ ಪ್ರಮುಖ ಕಾರಣಗಳಲ್ಲೊಂದಾಗಿದೆ. ಸಚಿವಾಲಯವು ಯೋಜನೆಯ ಸ್ಥಿತಿಗತಿಯನ್ನು ಶೀಘ್ರವೇ ಪುನರ್‌ಪರಿಶೀಲಿಸಿ ಸರಿಪಡಿಸಲು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಮೂಲಸೌಕರ್ಯ ಮತ್ತು ಕಚ್ಚಾವಸ್ತುಗಳ ಅಲಭ್ಯತೆಯಂತಹ ಇತರ ಕಾರಣಗಳಿಂದಲೂ ಯೋಜನೆಯು ನಿಧಾನವಾಗಿದೆ ಎಂದರು. ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಮಾನದಂಡಗಳು ಈಡೇರುವಂತೆ ನೋಡಿಕೊಳ್ಳುವುದು ರಾಜ್ಯಗಳ ಕರ್ತವ್ಯವಾಗಿತ್ತು ಎಂದರು.

ಯೋಜನೆಯ ಕಳಪೆ ನಿರ್ವಹಣೆಗೆ ಸ್ಥಳೀಯ ಅಂಶಗಳು ಪ್ರಮುಖ ಕಾರಣಗಳಾಗಿವೆ ಎನ್ನುವುದು ಗ್ರಾಮೀಣ ಕ್ಷೇತ್ರದಲ್ಲಿಯ ತಜ್ಞರ ಅಭಿಪ್ರಾಯವಾಗಿದೆ.

ಉದಾಹರಣೆಗೆ ಛತ್ತೀಸ್‌ಗಡ,ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ಚುನಾವಣೆಗಳು ಸನ್ನಿಹಿತವಾಗಿವೆ. ಮುಂದಿನ ವೌಲ್ಯಮಾಪನದಲ್ಲಿ ಸಂಖ್ಯೆ ಏರುವುದನ್ನು ನಾವು ಕಾಣಲಿದ್ದೇವೆ. ಇದು ಚುನಾವಣೆಗೆ ಮುನ್ನ ಅಭಿವೃದ್ಧಿಯನ್ನು ತೋರಿಸಲು ಎಲ್ಲ ಪಕ್ಷಗಳ ತಂತ್ರವಾಗಿದೆ ಎಂದು ಹೈದರಾಬಾದ್‌ನ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರೊ.ಎಚ್.ಕೆ.ಸೋಲಂಕಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X