Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಟ್ಟಡ ನಿರ್ಮಾಣ ಸಂದರ್ಭ ಪುರಸಭೆಯ...

ಕಟ್ಟಡ ನಿರ್ಮಾಣ ಸಂದರ್ಭ ಪುರಸಭೆಯ ನಿಯಮಗಳನ್ನು ಪಾಲಿಸಿ: ರಾಯಪ್ಪ

ವಾರ್ತಾಭಾರತಿವಾರ್ತಾಭಾರತಿ30 July 2018 8:51 PM IST
share
ಕಟ್ಟಡ ನಿರ್ಮಾಣ ಸಂದರ್ಭ ಪುರಸಭೆಯ ನಿಯಮಗಳನ್ನು ಪಾಲಿಸಿ: ರಾಯಪ್ಪ

ಕಾಪು, ಜು. 30 : ಕಾಪು ಪುರಸಭಾ ವ್ಯಾಪ್ತಿಯಲ್ಲಿರುವ ಕೆಲವೊಂದು ಕಟ್ಟಡ ನಿರ್ಮಾಣ ಸಂದರ್ಭಗಳಲ್ಲಿ ಪುರಸಭೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸ ಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಹೇಳಿದರು.

ಪುರಸಭಾ ಸಭಾಂಗಣದಲ್ಲಿ ಸೋಮವಾರ ನಡೆದ ಕಾಪು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಕೆಲವೊಂದು ಕಟ್ಟಡಗಳು ನಿಯಮ ಮೀರಿ ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡ ನಿರ್ಮಾಣ ಸಂದರ್ಭಗಳಲ್ಲಿ ತ್ಯಾಜ್ಯ ನೀರನ್ನು ಹೊರಗೆ ಬಿಡದೆ ಸಂಸ್ಕರಣಾ ಘಟಕ ನಿರ್ಮಾಣ ಮಾಡಬೇಕು. ಕಟ್ಟಡ ನಿರ್ಮಾಣದ ವೇಳೆ ನಿಯಮಗಳನ್ನು ಪಾಲಿಸುವ ಮೂಲಕ ಎಲ್ಲರೂ ಸಹಕಾರ ನೀಡಬೇಕು ಹೇಳಿದರು.

ಕೈಪುಂಜಾಲು ಬಳಿ ಎಡಿಬಿ ಬ್ರೇಕ್ ವಾಟರ್ ಕಾಮಗಾರಿಯಿಂದ ಈ ಬಾರಿ ಕಡಲು ಕೊರೆತ ಉಂಟಾಗಿದೆ. ಈ ಭಾಗದಲ್ಲಿ ಸಂಪೂರ್ಣ ತಡೆಗೋಡೆ ನಿರ್ಮಾಣ ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಬೇಕು. ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ಗೆ ಈ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸದಸ್ಯ ಕಿರಣ್ ಆಳ್ವ ಆಗ್ರಹಿಸಿದರು. ಇದಕ್ಕುತ್ತರಿಸಿದ ಮುಖ್ಯಾಧಿಕಾರಿ, ಕಡಲು ಕೊರೆತ ತಡೆಗೋಡೆ ನಿರ್ಮಾಣ ಬಂದರು ಇಲಾಖೆ ಜವಾಬ್ದಾರಿ ಎಂದರು.

ಕಾಪು ಪುರಸಭೆಯ 6 ವಾರ್ಡ್‌ಗಳು ಕರಾವಳಿ ನಿಯಂತ್ರಣ ವಲಯದಡಿ ಬರುವುದರಿಂದ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಮಾಡಲು ತೊಡ ಕಾಗುತ್ತಿದೆ. ಕಳೆದ ವರ್ಷ ನನ್ನ ವಾರ್ಡ್‌ಗೆ ಯಾವುದೇ ಅನುದಾನ ಲಭ್ಯವಾಗಿಲ್ಲ ಎಂದು ಆಳ್ವ ದೂರಿದರು. 

ಆಗ್ರಹ: ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೆರೆ ಹಾವಳಿಯಿಂದ ನೂರಾರು ಎಕರೆ ಭತ್ತದ ಬೆಳೆ ಹಾನಿಯಾಗಿದೆ. ಸರಕಾರದ ಬೆಳೆ ವಿಮೆ ಮತ್ತಿತರ ಯೋಜನೆಗಳ ಬಗ್ಗೆ ಜನರಿಗೆ ಇನ್ನೂ ಮಾಹಿತಿ ಇಲ್ಲ. ಕೃಷಿ ಭೂಮಿ, ಹಡಿಲು ಭೂಮಿ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ಈ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಲಿಖಿತ ಮಾಹಿತಿ ಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಅರುಣ್ ಶೆಟ್ಟಿ ಪಾದೂರು ಆಗ್ರಹಿಸಿದರು.

ಇಲಾಖೆಗಳ ಸಭೆ: ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮಳೆಹಾನಿಯಿಂದ ಸಂಭವಿಸಿದ ಹಾನಿ ಬಗ್ಗೆ ಸಂಬಂಧಿಸಿದ ಇಲಾಖೆಗಳನ್ನು ಕರೆದು ದಿನಾಂಕ ಗೊತ್ತುಪಡಿಸಿ ಸಭೆ ನಡೆಸಲಾಗುವುದು. ಸಭೆಯಲ್ಲಿ ಕಂದಾಯ, ಕೃಷಿ, ಮೆಸ್ಕಾಂ ಮತ್ತಿತರ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಮಗ್ರ ವರದಿ ಪಡೆದು ಅರ್ಹರಿಗೆ ಪರಿಹಾರಧನ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಬೀದಿ ನಾಯಿಗಳ ಹಾವಳಿ: ಬೀದಿ ನಾಯಿಗಳ ಹಾವಳಿ ಬಗ್ಗೆ ಕಳೆದ ಒಂದು ವರ್ಷದ ಹಿಂದೆ ಕೌನ್ಸಿಲ್ ಗಮನಕ್ಕೆ ತರಲಾಗಿದೆ. ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಬೀದಿ ನಾಯಿಗಳ ಸಂಖ್ಯೆ ಕಳೆದ ಬಾರಿಗಿಂತ ಶೇ.30ರಷ್ಷು ಹೆಚ್ಚಳವಾಗಿದೆ ಎಂದು ಸದಸ್ಯ ಲಕ್ಷ್ಮೀಶ ತಂತ್ರಿ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ರಾಯಪ್ಪ, ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕತ್ಸೆಗೆ 5 ಲಕ್ಷ ರೂಪಾಯಿ ತೆಗೆದಿರಿಸಲಾಗಿದೆ. ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ರೂ 15 ಲಕ್ಷ ಅನುದಾನ ಸರಕಾರದಿಂದ ಲಭ್ಯವಾಗಲಿದ್ದು, ಸೂಕ್ತ ಜಮೀನಿನ್ನು ಗುರುತಿಸಿ ನೀಡಿ ಎಂದು ಸಲಹೆ ನೀಡಿದರು. ಗ್ರಾಮ ಪಂಚಾಯ್ತಿ ಅವಧಿಯಲ್ಲಿ ನಿರ್ಮಾಣವಾದ ಕಟ್ಟಡದ ಬಗ್ಗೆ ಬ್ಯಾಂಕ್ ಸಾಲಕ್ಕೆ ಸಮಸ್ಯೆಯಾಗುತ್ತಿರುವ ಬಗ್ಗೆ ಅಮೀರ್ ಅವರು ಪ್ರಸ್ತಾವಿಸಿದರು.

ಪುರಸಭೆ ಅಧ್ಯಕ್ಷೆ ಮಾಲಿನಿ, ಉಪಾಧ್ಯಕ್ಷ ಕೆ.ಎಚ್.ಉಸ್ಮಾನ್, ಸ್ಥಾಯೀ ಸಮಿತಿ ಅಧ್ಯಕ್ಷೆ ಶಾಂತಲತಾ ಶೆಟ್ಟಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X