Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಮ್ ನಲ್ಲಿ 40 ಲಕ್ಷ ಜನರು ಅತಂತ್ರ:...

ಅಸ್ಸಾಮ್ ನಲ್ಲಿ 40 ಲಕ್ಷ ಜನರು ಅತಂತ್ರ: ಸರ್ವಪಕ್ಷ ಸಭೆಗೆ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 July 2018 10:21 PM IST
share
ಅಸ್ಸಾಮ್ ನಲ್ಲಿ 40 ಲಕ್ಷ ಜನರು ಅತಂತ್ರ: ಸರ್ವಪಕ್ಷ ಸಭೆಗೆ ಕಾಂಗ್ರೆಸ್ ಆಗ್ರಹ

ಹೊಸದಿಲ್ಲಿ, ಜು.30: ಅಸ್ಸಾಮಿಗಾಗಿ ಎನ್‌ಆರ್‌ಸಿಯ ಅಂತಿಮ ಕರಡು ಪಟ್ಟಿಯಿಂದ ಸುಮಾರು 40 ಲಕ್ಷ ಜನರು ಹೊರಗುಳಿದಿರುವ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್, ಈ ಬಗ್ಗೆ ಸರ್ವಪಕ್ಷ ಸಭೆಯೊಂದನ್ನು ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದೆ.

ವಾಸ್ತವದಲ್ಲಿ ಪಟ್ಟಿಯಿಂದ ಹೊರಗಿರುವವರಲ್ಲಿ ಹೆಚ್ಚಿನವರು ಪೌರತ್ವ ರುಜುವಾತಿಗಾಗಿ ನಿಗದಿಗೊಳಿಸಲಾಗಿದ್ದ 16 ದಾಖಲೆಗಳ ಪೈಕಿ ಒಂದಕ್ಕಿಂತ ಹೆಚ್ಚು ದಾಖಲೆಗಳನ್ನು ಹೊಂದಿದ್ದರು. ಸಮಸ್ಯೆಯನ್ನು ಬಗೆಹರಿಸಲು ತಾನು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಸರಕಾರವು ಪ್ರತಿಪಕ್ಷಗಳಿಗೆ ಮಾಹಿತಿ ನೀಡಬೇಕು ಎಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿಯ ಹಿರಿಯ ವಕ್ತಾರ ಆನಂದ ಶರ್ಮಾ ಅವರು ಹೇಳಿದರು.

ಗೃಹಸಚಿವ ರಾಜ್ ನಾಥ್ ಸಿಂಗ್ ಅವರು ಸೋಮವಾರ ಲೋಕಸಭೆಯಲ್ಲಿ ಈ ವಿಷಯದ ಕುರಿತು ನೀಡಿದ ಹೇಳಿಕೆಯು ತೃಪ್ತಿಕರವಾಗಿರಲಿಲ್ಲ ಎಂದ ಶರ್ಮಾ,ಇದು ರಾಜಕೀಯ ವಿಷಯವಲ್ಲ,ಮಾನವೀಯ ವಿಷಯವಾಗಿದೆ ಎಂದರು.

ಅಂತಿಮ ಕರಡಿನಲ್ಲಿ ಹೆಸರುಗಳಿಲ್ಲದವರನ್ನು ಸ್ಥಾನಬದ್ಧತೆ ಕೇಂದ್ರಗಳಲ್ಲಿ ಇರಿಸಲಾಗುವುದಿಲ್ಲ. ಜನರು ಯಾವುದೇ ಪ್ರಚೋದಕ ಹೇಳಿಕೆಗಳನ್ನು ನೀಡಬಾರದು ಎಂದು ನಾನು ಕೇಳಿಕೊಳ್ಳುತ್ತಿದ್ದೇನೆ.

-ಸರ್ಬಾನಂದ ಸೊನೊವಾಲ್,ಅಸ್ಸಾಂ ಮುಖ್ಯಮಂತ್ರಿ

ದೇಶದ ನಾಗರಿಕರು,ಅವರ ಮನೆಗಳು ಮತ್ತು ಆಸ್ತಿಗಳನ್ನು ಲೆಕ್ಕ ಹಾಕಲು ಎನ್‌ಆರ್‌ಸಿಯನ್ನು ಮೊದಲ ಬಾರಿಗೆ 1951ರಲ್ಲಿ ನಡೆಸಲಾಗಿತ್ತು. ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಆರು ವರ್ಷಗಳ ಪ್ರತಿಭಟನೆಯ ಬಳಿಕ 1985ರಲ್ಲಿ ಸಹಿ ಹಾಕಲಾಗಿದ್ದ ಅಸ್ಸಾಂ ಒಪ್ಪಂದದಂತೆ ಅಕ್ರಮ ವಲಸಿಗರನ್ನು ಗುರುತಿಸಲು ಎನ್‌ಆರ್‌ಸಿಯನ್ನು ಪರಿಷ್ಕರಿಸಲಾಗಿದೆ. ಮೊದಲ ಪರಿಷ್ಕೃತ ಕರಡನ್ನು 2017, ಡಿ.31-2018, ಜ.1ರ ರಾತ್ರಿ ಪ್ರಕಟಿಸಲಾಗಿದ್ದು,ಅದು 1.9 ಕೋಟಿ ಹೆಸರುಗಳನ್ನು ಒಳಗೊಂಡಿತ್ತು.

ಎನ್‌ಆರ್‌ಸಿ ಅರ್ಜಿ ಪ್ರಕ್ರಿಯೆಯನ್ನು ಮೇ 2015ರಲ್ಲಿ ಆರಂಭಿಸಲಾಗಿದ್ದು, ಅಸ್ಸಾಮಿನಾದ್ಯಂತ 68.27 ಲಕ್ಷ ಕುಟುಂಬಗಳಿಂದ 6.5 ಕೋಟಿ ದಾಖಲೆಗಳನ್ನು ಸ್ವೀಕರಿಸಲಾಗಿತ್ತು. ಎನ್‌ಆರ್‌ಸಿ ಪ್ರಕ್ರಿಯೆಗಾಗಿ 2013,ಸೆಪ್ಟೆಂಬರ್‌ನಿಂದ ಒಟ್ಟು 1,220 ಕೋ.ರೂ.ಗಳನ್ನು ವ್ಯಯಿಸಲಾಗಿದೆ.

ಎನ್‌ಆರ್‌ಸಿ ಕರಡು ಪಟ್ಟಿ ಸಂಪೂರ್ಣವಾಗಿ ನಿಷ್ಪಕ್ಷಪಾತವಾಗಿದೆ. ಪಟ್ಟಿಯಲ್ಲಿ ಹೆಸರುಗಳಿಲ್ಲದವರಿಗೆ ತಮ್ಮ ಭಾರತೀಯ ಪೌರತ್ವವನ್ನು ರುಜುವಾತುಗೊಳಿಸಲು ಅವಕಾಶ ನೀಡಲಾಗುವುದು. ಯಾರದೇ ವಿರುದ್ಧ ಬಲವಂತದ ಕ್ರಮವನ್ನು ಕೈಗೊಳ್ಳಲಾಗುವುದಿಲ್ಲ. ಹೀಗಾಗಿ ಅವರು ಆತಂಕ ಪಟ್ಟುಕೊಳ್ಳಬೇಕಿಲ್ಲ. ಅಂತಿಮ ಪಟ್ಟಿಯಲ್ಲಿ ಹೆಸರುಗಳಿಲ್ಲದವರೂ ವಿದೇಶಿಯರ ನ್ಯಾಯಾಧಿಕರಣಗಳನ್ನು ಸಂಪರ್ಕಿಸಬಹುದು.

*ರಾಜನಾಥ್ ಸಿಂಗ್,ಕೇಂದ್ರ ಗೃಹಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X