Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಸರು ದುರ್ಬಳಕೆ: ಆಡಳಿತಾಧಿಕಾರಿಯನ್ನು...

ಹೆಸರು ದುರ್ಬಳಕೆ: ಆಡಳಿತಾಧಿಕಾರಿಯನ್ನು ತರಾಟೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ

ಅಕ್ಷರ ಭಾರತಿ ವಿದ್ಯಾಲಯದಲ್ಲಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ30 July 2018 10:44 PM IST
share
ಹೆಸರು ದುರ್ಬಳಕೆ: ಆಡಳಿತಾಧಿಕಾರಿಯನ್ನು ತರಾಟೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ

ಬಂಟ್ವಾಳ, ಜು. 30: ಬಂಟ್ವಾಳ ತಾಲೂಕು ಚೆನ್ನೈತ್ತೋಡಿ ಗ್ರಾಪಂ ವ್ಯಾಪ್ತಿಯ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಜು. 28ರಂದು ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣದ ಕುರಿತು ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿ ಅವರು ಶಾಲೆಗೆ ಸೋಮವಾರ ಭೇಟಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಹೆತ್ತವರು, ಶಿಕ್ಷಣ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಶಾಲಾ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಠಿಯಿಂದ ಶಾಲೆಗಳು ಅಗತ್ಯ ಎಚ್ಚರಿಕೆಗಳನ್ನು ಅಳವಡಿಸಿಕೊಳ್ಳಬೇಕು. ಶಾಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು. ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳದಿದ್ದಲ್ಲಿ ಅಂತಹ ಶಾಲೆಯ ಮೇಲೆ ಇಲಾಖಾ ಕ್ರಮಕೈಗೊಳ್ಳಲು ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಸೂಚಿಸಿದರು.

ಘಟನೆಯ ಸಂಪೂರ್ಣ ಮಾಹಿತಿಯನ್ನು ಈಗಾಗಲೇ ಪಡೆದುಕೊಂಡಿದ್ದು, ವಿದ್ಯಾರ್ಥಿಯ ಆರೋಗ್ಯ ವಿಚಾರಣೆ ನಡೆಸಲಾಗಿದೆ. ಸದ್ಯ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾನೆ ಎಂದ ಅವರು ಅಗತ್ಯವಿದ್ದಲ್ಲಿ ವಿದ್ಯಾರ್ಥಿಯ ಚಿಕಿತ್ಸೆಯ ಖರ್ಚು ವೆಚ್ಚ ಭರಿಸಲಾಗುವುದು ಎಂದು ವಿದ್ಯಾರ್ಥಿಯ ಹೆತ್ತವರಲ್ಲಿ ತಿಳಿಸಿದರು.

ವಿದ್ಯಾರ್ಥಿಗಳ ನಡುವೆ ಘರ್ಷಣೆಯಾಗದಂತೆ ವಿದ್ಯಾರ್ಥಿಗಳನ್ನು ಸಮಾಲೋಚಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಶಿಕ್ಷಕರಿಗೆ ಹಾಗೂ ಹೆತ್ತವರಿಗೆ ಸೂಚಿಸಿದ ಅವರು ಶಾಲೆಯಲ್ಲಿ ಮಕ್ಕಳ ಸುರಕ್ಷ ಸಮಿತಿ ರಚಿಸಿ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಜಿಪಂ ಸದಸ್ಯ ಎಂ. ತುಂಗಪ್ಪ ಬಂಗೇರ, ಪುಂಜಾಲಕಟ್ಟೆ ಠಾಣಾಧಿಕಾರಿ ಸತೀಶ್ ಬಲ್ಲಾಳ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಎನ್., ಜನತಾ ಬಜಾರ್ ನಿರ್ದೇಶಕ ಪುರುಷೋತ್ತಮ ಶೆಟ್ಟಿ ವಾಮದಪದವು, ಹೆತ್ತವರಾದ ಲಿಂಗಪ್ಪ ಪೂಜಾರಿ, ಯೋಗೀಶ್ ಆಚಾರ್ಯ, ರಾಜೇಂದ್ರ ಸಾಲ್ಯಾನ್, ಶಾಲಾ ಸಂಚಾಲಕ ಮೋಹನ್ ರೈ, ಟ್ರಸ್ಟ್ ಕಾರ್ಯದರ್ಶಿ ಭಾರತಿ ಎಸ್.ರೈ., ಶಿಕ್ಷಕ ವೃಂದ, ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಜು.28ರಂದು ಮಧ್ಯಾಹ್ನ ಶಾಲೆ ಬಿಡುವ ಹೊತ್ತಿಗೆ ಒಂದೆ ತರಗತಿಗೆ ಸೇರಿದ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ವಿದ್ಯಾರ್ಥಿಯೊಬ್ಬನಿಗೆ ಹಲ್ಲೆಯಾಗಿತ್ತು. ಗಂಭೀರ ಗಾಯಗೊಂಡ ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಹೆತ್ತವರೊಂದಿಗೆ ಸಮಾಲೋಚಿಸಿ ಮಾತುಕತೆಯಲ್ಲಿ ಪರಿಹರಿಸಲಾಗಿದೆ ಎಂದು ತಿಳಿದು ಬಂದಿದೆ.

ಶಾಸಕರ ಹೆಸರು ದುರ್ಬಳಕೆ

ಘಟನೆ ನಡೆದ ಬಳಿಕ ಶಾಲಾ ಆಡಳಿತಾಧಿಕಾರಿ ಆಸ್ಪತ್ರೆಯಲ್ಲಿ ಹಾಗೂ ಪೊಲೀಸರಲ್ಲಿ ಪ್ರಕರಣದ ಬಗ್ಗೆ ಕೇಸು ದಾಖಲಿಸ ಬಾರದೆಂದು ಶಾಸಕರ ಹೆಸರು ಉಲ್ಲೇಖಿಸಿದ್ದು, ಈ ಬಗ್ಗೆ ಮಾಹಿತಿ ಪಡೆದ ಶಾಸಕರು, ಆಡಳಿತಾಧಿಕಾರಿಯನ್ನು ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ತನ್ನ ಹೆಸರಿನ ದುರ್ಬಳಕೆ ಬಗ್ಗೆ ಎಚ್ಚರಿಕೆ ನೀಡಿದರು. ಘಟನೆ ನಡೆದ ಬಳಿಕ ಶಿಕ್ಷಣ, ಪೊಲೀಸ್ ಇಲಾಖೆ ಮತ್ತು ತನಗೆ ಮಾಹಿತಿ ನೀಡದಿರುವ ಬಗ್ಗೆ ಶಾಲಾ ಆಡಳಿತವನ್ನು ತರಾಟೆಗೆ ತೆಗೆದು ಕೊಂಡ ಪ್ರಸಂಗವೂ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X