ಮಡಿಕೇರಿ: ಕಾಡಾನೆ ದಾಳಿಗೆ ಗಿರಿಜನ ಕಾರ್ಮಿಕ ಬಲಿ
ಮಡಿಕೇರಿ, ಜು.30 : ಕಾಡಾನೆ ದಾಳಿಗೆ ಗಿರಿಜನ ಕಾರ್ಮಿಕ ಬಲಿಯಾಗಿರುವ ಘಟನೆ ನಾಗರಹೊಳೆ ರಕ್ಷಿತಾರಣ್ಯದ ಹುಲಿ ಸಂರಕ್ಷಿತ ವಲಯದಲ್ಲಿ ನಡೆದಿದೆ. ಗೋಣಿಗದ್ದೆ ಹಾಡಿಯ ತಿಮ್ಮಯ್ಯ (30) ಮೃತ ಕಾರ್ಮಿಕ.
ವಿವಾರ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿದೆ. ದಾಳಿಯಿಂದ ತಿಮ್ಮಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸೋಮವಾರ ಬೆಳಗ್ಗೆ ಪ್ರಕರಣ ಬೆಳೆಕಿಗೆ ಬಂದಿದೆ.
ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಪೌಲ್ ಅಂತೋಣಿ, ಆರ್‌ಎಫ್‌ಒ ಅರವಿಂದ್ ಭೇಟಿ ನೀಡಿ ಪರಿಶೀಲನೆ ನಡೆಸಿ ದರು. ಕುಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕುಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನಡೆಸಿದರು.
Next Story