Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಕಲಚೇತನರಿಗೂ ಸಮಾನ ಅವಕಾಶ ಕಲ್ಪಿಸುವಂತೆ...

ವಿಕಲಚೇತನರಿಗೂ ಸಮಾನ ಅವಕಾಶ ಕಲ್ಪಿಸುವಂತೆ ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ31 July 2018 6:40 PM IST
share
ವಿಕಲಚೇತನರಿಗೂ ಸಮಾನ ಅವಕಾಶ ಕಲ್ಪಿಸುವಂತೆ ಸಿಎಂ ಸೂಚನೆ

ಬೆಂಗಳೂರು, ಜು.31: ಮಾನವೀಯತೆಯ ದೃಷ್ಟಿಯಿಂದ ವಿದ್ಯಾವಂತ ವಿಕಲಚೇತನರಿಗೆ ಜಿಲ್ಲಾ ಮಟ್ಟದಲ್ಲಿ ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಂದುವರೆದ ಸಭೆಯಲ್ಲಿ ಅವರು ಮಾತನಾಡಿದರು.

ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ ಸ್ವೀಕರಿಸುವ ದೂರುಗಳನ್ನು ಜಿಲ್ಲಾಧಿಕಾರಿಗಳಿಗೆ ರವಾನಿಸಿದ ಸಂದರ್ಭದಲ್ಲಿ ಹಿಂಬರಹ ನೀಡಿದರೆ ಮಾತ್ರ ಪ್ರಕರಣ ಮುಕ್ತಾಯವಾಗಿದೆ ಎಂದು ಪರಿಗಣಿಸಲಾಗುವುದು. ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಿ. ಮತ್ತೊಬ್ಬ ಅಧಿಕಾರಿಗೆ ಅರ್ಜಿಯನ್ನು ವರ್ಗಾಯಿಸಿ ವಿಳಂಬ ಮಾಡುವುದು ಸರಿಯಲ್ಲ. ಜನತಾ ದರ್ಶನದ ಅರ್ಜಿಗಳನ್ನು ನಿರ್ಲಕ್ಷ ಮಾಡಬೇಡಿ ಎಂದು ಸೂಚಿಸಿದ ಅವರು, ತಿಂಗಳಿಗೊಮ್ಮೆ ಜನ ಸ್ಪಂದನ ಕಾರ್ಯಕ್ರಮ ಏರ್ಪಡಿಸುವಂತೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯಡಿ ವಿದ್ಯಾರ್ಥಿ ನಿಲಯ ಮುಂತಾದ ಕಟ್ಟಡಗಳನ್ನು ಕಟ್ಟಲು ತೋರುವ ಆಸಕ್ತಿ ನಿರ್ವಹಣೆಗೆ ತೋರಬೇಕು. ವಿದ್ಯಾರ್ಥಿಗಳಿಗೆ ಪೂರೈಸುವ ಎಲ್ಲ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆಯನ್ನು ಶುಚಿಯಾಗಿ ತಯಾರಿಸುವಂತೆ ನಿಗಾವಹಿಸಿ, ಶೌಚಾಲಯಗಳ ಸ್ವಚ್ಛತೆಯನ್ನು ಕಾಪಾಡಿ ಎಂದು ಮುಖ್ಯಮಂತ್ರಿ ಸೂಚಿಸಿದರು.

ತಿಂಗಳಿಗೊಮ್ಮೆಯಾದರೂ ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡುವಂತೆ ತಿಳಿಸಿದ ಅವರು, ಸಮರ್ಪಕವಾಗಿ ಕಾರ್ಯನಿರ್ವಹಿಸದ ವಾರ್ಡನ್‌ಗಳನ್ನು ಅಮಾನತುಗೊಳಿಸಿ ಹಾಗೂ ಸಿಬ್ಬಂದಿ ನೇಮಕಕ್ಕೆ ಪ್ರಥಮ ಆದ್ಯತೆ ನೀಡಿ. ವಿದ್ಯಾರ್ಥಿ ನಿಲಯಗಳಿಗೆ ವಾರ್ಡನ್‌ಗಳನ್ನು ನೇಮಕ ಮಾಡುವ ಪ್ರಕ್ರಿಯೆಗಳಲ್ಲಿ ಆ ಕೆಲಸದ ಬಗ್ಗೆ ಇರುವ ಆಸಕ್ತಿಯನ್ನೂ ಪರಿಶೀಲಿಸುವಂತೆ ಸಲಹೆ ನೀಡಿದರು.

ಮಾದರಿ ಸಾರ್ವಜನಿಕ ವಿದ್ಯಾರ್ಥಿ ನಿಲಯ ಪರಿಕಲ್ಪನೆ
ಸಭೆಯಲ್ಲಿ ಭಾಗವಹಿಸಿದ್ದ ಕೃಷಿ ಸಚಿವ ಶಿವಶಂಕರ ರೆಡ್ಡಿ, ಎಲ್ಲ ಸಮುದಾಯಗಳಿಗೂ ಪ್ರವೇಶಾವಕಾಶವಿರುವ ಒಂದು ಸಾಮಾನ್ಯ ವಿದ್ಯಾರ್ಥಿ ನಿಲಯ ಪರಿಕಲ್ಪನೆ ಇಂದಿನ ದಿನಗಳಲ್ಲಿ ಪ್ರಸ್ತುತ. ಇದರಿಂದ ಬಾಲ್ಯದಿಂದಲೇ ತಾವು ನಿರ್ದಿಷ್ಟ ಸಮುದಾಯಕ್ಕೆ ಸೇರಿದವರು ಎಂಬ ಸಂಕುಚಿತ ಭಾವನೆ ಮಕ್ಕಳಲ್ಲಿ ಮೂಡುವುದನ್ನು ತಪ್ಪಿಸಿದಂತಾಗುತ್ತದೆ ಎಂದರು. ಅವರ ಸಲಹೆಯನ್ನು ಸಭೆಯಲ್ಲಿದ್ದ ಬಹುತೇಕ ಸಚಿವರು ಸ್ವಾಗತಿಸಿದರು. ಇದೊಂದು ಸ್ವಾಗತಾರ್ಹ ಸಲಹೆ ಎಂದ ಮುಖ್ಯಮಂತ್ರಿ, ಎಲ್ಲ 30 ಜಿಲ್ಲೆಗಳಲ್ಲಿ ಇದನ್ನು ಪ್ರಾಯೋಗಿಕವಾಗಿ ಕೈಗೊಳ್ಳಲು ಮುಂದಿನ 15 ದಿನಗಳಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಲು ಸೂಚಿಸಿದರು. ಗುಂಪು ವಿದ್ಯಾರ್ಥಿ ನಿಲಯಗಳ ಪರಿಕಲ್ಪನೆಯಡಿ ಈಗಾಗಲೇ ಹಲವು ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡಿದ್ದು, ಪ್ರಾಯೋಗಿಕವಾಗಿ ಮಾದರಿ ಸಾರ್ವಜನಿಕ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಅಧಿಕಾರಿಗಳು ಸಹಮತ ವ್ಯಕ್ತಪಡಿಸಿದರು.
  
ನಿಗದಿತ ಸಮಯದಲ್ಲಿ ನಗರ ಮತ್ತು ಗ್ರಾಮೀಣ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ಮುಖ್ಯಮಂತ್ರಿ, ಅಧಿಕಾರಿಗಳಿಗೆ ಸೂಚಿಸಿದರು. ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಕುರಿತಂತೆ ಚರ್ಚಿಸಿದ ಅವರು, ಆ ಭಾಗದಲ್ಲಿ ಅನೇಕ ಹುದ್ದೆಗಳು ಭರ್ತಿಯಾಗದೆ ಉಳಿದಿದ್ದು, ಗಮನಕ್ಕೆ ಬಂದಿದೆ. ಇನ್ನಿತರ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರತ್ಯೇಕ ಸಭೆಗಳನ್ನು ಕರೆಯಲಾಗುವುದು ಎಂದರು.

ಸಭೆಯಲ್ಲಿ ಸಚಿವರಾದ ಎಚ್.ಡಿ.ರೇವಣ್ಣ, ಆರ್.ವಿ.ದೇಶಪಾಂಡೆ, ಡಿ.ಸಿ.ತಮ್ಮಣ್ಣ, ಡಾ.ಜಯಮಾಲಾ, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ವೆಂಕಟರಾವ್ ನಾಡಗೌಡ, ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ‘ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆ’ಯಡಿಯಲ್ಲಿ (ಅಲ್ಪಸಂಖ್ಯಾತರ ಕಾಲನಿ ಅಭಿವೃದ್ಧಿ) ಕಲಬುರಗಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಕಡಿಮೆ ಸಾಧನೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಕೇಳಿದಾಗ, ಅನುಷ್ಠಾನ ಮಾಡುವ ಅಧಿಕಾರಿಗಳ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಿದ್ದಲ್ಲಿ ಪ್ರಗತಿ ಸಾಧಿಸಬಹುದೆಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು. ಖಾಲಿ ಇರುವ ಪ್ರಮುಖ ಹುದ್ದೆಗಳ ಹಾಗೂ ಇನ್ನಿತರ ಮಾಹಿತಿಯ ಪಟ್ಟಿಯನ್ನು ಮುಖ್ಯಕಾರ್ಯದರ್ಶಿಗಳಿಗೆ ಇ-ಮೇಲ್ ಮುಖಾಂತರ ಎರಡು ದಿನಗಳೊಳಗೆ ಕಳುಹಿಸಿ.
-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X