ಬಿಜೆಪಿ ಯುವ ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ: ಬಂಧನ
ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ನಿರ್ಲಕ್ಷ ಆರೋಪ
ಹುಬ್ಬಳ್ಳಿ, ಜು.31: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯ ನಿರ್ಲಕ್ಷ ಧೋರಣೆ ಹಾಗೂ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ಕುಮಾರಸ್ವಾಮಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಭೈರಿದೇವರ ಕೊಪ್ಪದ ಮಾಯಕಾರ ಕಾಲನಿಯಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ನಿವಾಸಕ್ಕೆ ಮುತ್ತಿಗೆ ಹಾಕಲು ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಾಕಾರರನ್ನು ನವನಗರದ ಕರ್ನಾಟಕ ವೃತ್ತದಲ್ಲಿಯೆ ಬಂಧಿಸಲಾಯಿತು.
ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಯ ನಿರ್ಲಕ್ಷ ಮಾಡಿದ್ದು, ರಾಜ್ಯವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಕೂಡಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉತ್ತರ ಕರ್ನಾಟಕದ ಜನತೆಯ ಕ್ಷಮೆ ಕೇಳಬೇಕು. ಹಾಗೂ ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Next Story





