Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮರಾಜನಗರ ಜಿಲ್ಲಾ ಸಹಕಾರ ಒಕ್ಕೂಟದ...

ಚಾಮರಾಜನಗರ ಜಿಲ್ಲಾ ಸಹಕಾರ ಒಕ್ಕೂಟದ ಚುನಾವಣೆ; ಬಿಜೆಪಿ ಬೆಂಬಲಿತ ಶಿವಕುಮಾರ್ ಗೆಲುವು

ವಾರ್ತಾಭಾರತಿವಾರ್ತಾಭಾರತಿ31 July 2018 8:01 PM IST
share

ಚಾಮರಾಜನಗರ, ಜು.31: ಜಿಲ್ಲಾ ಸಹಕಾರ ಒಕ್ಕೂಟದ 2018-2023 ರ ಅವಧಿಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ 11 ಮಂದಿ ಅವಿರೋಧ ಆಯ್ಕೆಯಾಗಿದ್ದರೆ, ಎರಡು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರ ಅಭ್ಯರ್ಥಿ ತಮ್ಮಡಹಳ್ಳೀ ಶಿವಕುಮಾರ್ ಚಾ.ನಗರ ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಆಯ್ಕೆಯಾದರು. 

ನಗರದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಮಂಗಳವಾರ 2 ಕ್ಷೇತ್ರಗಳಿಗೆ ಮತದಾನ ನಡೆಯಿತು. ಚಾ.ನಗರ ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಶಿವಕುಮಾರ್ 15 ಮತಗಳನ್ನು ಪಡೆದು ಜಯಗಳಿಸಿದರೆ, ಎ.ಎಂ. ಮಣಿ 7 ಮತಗಳು ಹಾಗು ಮಾದೇಶ್ ಒಂದು ಮತ ಪಡೆದು ಸೋಲು ಅನುಭವಿಸಿದರು. 

ಯಳಂದೂರು ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಪ್ರಭುಸ್ವಾಮಿ 8 ಮತಗಳನ್ನು ಪಡೆದು ಆಯ್ಕೆಯಾದರೆ,  ಇವರ ವಿರುದ್ದ ಸ್ಪರ್ಧೆ ಮಾಡಿದ್ದ ಎ.ಎಸ್. ದೊರೆಸ್ವಾಮಿ 2 ಮತ ಪಡೆದು ಸೋಲು ಕಂಡರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಪುರಂದರ್, ಸಹಾಯಕ ಚುನಾವಣಾಧಿಕಾರಿ ಪ್ರಕಾಶ್ ರಾವ್, ಒಕ್ಕೂಟದ  ಕಾರ್ಯನಿರ್ವಾಹಕ ಅಧಿಕಾರಿ ಮನುಜ ಕಾರ್ಯನಿರ್ವಹಿಸಿದರು. 

11 ಮಂದಿ ಅವಿರೋಧ ಆಯ್ಕೆ: ಇನ್ನುಳಿದಂತೆ ಜಿಲ್ಲಾ ಸಹಕಾರ ಒಕ್ಕೂಟದ ಒಟ್ಟು 13 ನಿರ್ದೇಶಕರ  ಸ್ಥಾನಗಳ ಪೈಕಿ 11 ಮಂದಿ ವಿವಿಧ ಕ್ಷೇತ್ರಗಳಿಂದ ಅವಿರೋಧವಾಗಿ ಆಯ್ಕೆಯಾಗಿದ್ದರು. ಟಿಎಪಿಸಿಎಂಸ್ ಕ್ಷೇತ್ರದಿಂದ ಒಕ್ಕೂಟದ ಮಾಜಿ ಅಧ್ಯಕ್ಷ ಮಡಿವಾಳಪ್ಪ, ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರದಿಂದ ಲ್ಯಾಂಪ್ ಸೊಸೈಟಿಯ ಮುದ್ದಯ್ಯ, ಇತರೇ ಸಹಕಾರ ಸಂಘಗಳ ಕ್ಷೇತ್ರದಿಂದ ಎಂ.ಎಂ. ನಾಗರಾಜು, ಚಾಮರಾಜನಗರ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಹರದನಹಳ್ಳಿ ಸುಂದರರಾಜ್, ಗುಂಡ್ಲುಪೇಟೆ ತಾಲೂಕು ಡೇರಿಗಳ ಕ್ಷೇತ್ರದಿಂದ ಗಂಗಾಧರಪ್ಪ, ಕೊಳ್ಳೇಗಾಲ  ಡೇರಿ ಕ್ಷೇತ್ರದಿಂದ ಮಹದೇವಸ್ವಾಮಿ, ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ  ಮಮತ, ಕೋಳ್ಳೇಗಾಲ-ಯಳಂದೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ರತ್ನಮ್ಮ ಹಾಗೂ ಗುಂಡ್ಲುಪೇಟೆ ತಾಲೂಕು ಪಿಎಸಿಸಿ  ಸಂಘಗಳ ಕ್ಷೇತ್ರದಿಂದ  ರಾಜಶೇಖರಪ್ಪ, ಕೊಳ್ಳೇಗಾಲ ಪಿಎಸಿಸಿ ಸಂಘಗಳ ಕ್ಷೇತ್ರದಿಂದ ಮಹದೇವ ಪ್ರಸಾದ್, ಯಳಂದೂರು ಪಿಎಸಿನಿಂದ ರವಿ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. 

ವಿಜಯೋತ್ಸವ: ಚಾ.ನಗರ ತಾಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಿಜೆಪಿ ಬೆಂಬಲಿತರಾಗಿ ಸ್ಪರ್ಧೆ ಮಾಡಿದ್ದ ಉಡಿಗಾಲ ಪಿಎಸಿಸಿ ಬ್ಯಾಂಕ್‍ನ ಅಧ್ಯಕ್ಷ ತಮ್ಮಡಹಳ್ಳಿ ಶಿವಕುಮಾರ್ ಜಯಗಳಿಸುತ್ತಿದ್ದಂತೆ ಅವರ ಬೆಂಬಲಿಗರು ಶಿವಕುಮಾರ್ ಗೆ ಹೂವಿನ ಹಾರ ಹಾಕಿ ಅಭಿನಂದಿಸಿದರು. 
ಈ ಸಂದರ್ಭ ಮಾತನಾಡಿದ ಶಿವಕುಮಾರ್, ಕಳೆದ 20 ವರ್ಷಗಳಿಂದ ಉಡಿಗಾಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿದ್ದು, ಸಹಕಾರ ಒಕ್ಕೂಟದಲ್ಲಿ ಉತ್ತಮ ಸೇವೆ ಸಲ್ಲಿಸಬೇಕು ಎಂಬ ಉದ್ದೇಶದಿಂದ ಸ್ಪರ್ಧೆ ಮಾಡಿದ್ದೆ, ನನ್ನ ಗೆಲುವಿಗೆ ಪ್ರತ್ಯಕ್ಷ ಹಾಗು ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು. 

ಈ ಸಂದರ್ಭದಲ್ಲಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಉಡಿಗಾಲ ಪಾಪಣ್ಣ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸುಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್, ಆರ್. ಪುಟ್ಟಮಲ್ಲಪ್ಪ, ವೃಷಬೇಂದ್ರಪ್ಪ, ನೂರೊಂದುಶೆಟ್ಟಿ, ಪುಟ್ಟಣ್ಣ, ಪುಟ್ಟರಸು, ಆರ್. ಪುಟ್ಟಮಲ್ಲಪ್ಪ,ಎ.ಎಸ್.ಪಾಲರಾಜು, ಮಹದೇವಪ್ಪ, ಎಂ.ಪಿ. ತಮ್ಮಣ್ಣ, ಆರ್.ವಿ. ಮಹದೇವಸ್ವಾಮಿ, ದೊರೆಸ್ವಾಮಿ, ಶ್ರೀಕಂಠಸ್ವಾಮಿ, ಜಿ. ರೇವಣ್ಣ,ಕೋಟಂಬಳ್ಳಿ ವೀರಭದ್ರಸ್ವಾಮಿ, ಎನ್.ಆರ್. ಪುರುಷೋತ್ತಮ್, ಪ್ರಶಾಂತ್, ರಾಮಸಮುದ್ರ ಪುಟ್ಟಣ್ಣ  ಮೊದಲಾದವರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X