Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾರಣಾಸಿಯ ಈ ವಿಶಿಷ್ಟ ಮಂದಿರದಲ್ಲಿದೆ...

ವಾರಣಾಸಿಯ ಈ ವಿಶಿಷ್ಟ ಮಂದಿರದಲ್ಲಿದೆ ಅವಿಭಜಿತ ಭಾರತದ ಅಮೃತಶಿಲೆಯ ನಕ್ಷೆ

ವಾರ್ತಾಭಾರತಿವಾರ್ತಾಭಾರತಿ31 July 2018 8:16 PM IST
share
ವಾರಣಾಸಿಯ ಈ ವಿಶಿಷ್ಟ ಮಂದಿರದಲ್ಲಿದೆ ಅವಿಭಜಿತ ಭಾರತದ ಅಮೃತಶಿಲೆಯ ನಕ್ಷೆ

ವಾರಣಾಸಿ(ಉ.ಪ್ರ),ಜು.31: ವಿಶ್ವಾದ್ಯಂತ ಯಾತ್ರಿಕರನ್ನು ಸೆಳೆಯುತ್ತಿರುವ ಪ್ರಾಚೀನ ನಗರಿ ವಾರಣಾಸಿಯಲ್ಲಿ ವಿಶಿಷ್ಟವಾದ ‘ಭಾರತ ಮಾತಾ ಮಂದಿರ’ ವಿದ್ದು,ಅಲ್ಲಿರುವ ಅವಿಭಜಿತ ಭಾರತದ ಅಮೃತಶಿಲೆಯ ನಕ್ಷೆ ಆಕರ್ಷಣೆಯ ಕೇಂದ್ರವಾಗಿದೆ.

ಕೆಲವೊಮ್ಮೆ ಯಾತ್ರಿಕರು ಈ ಮಂದಿರದ ಭೇಟಿಯಿಂದ ವಂಚಿತರಾಗುತ್ತಾರಾದರೂ ಇದು ನಗರಕ್ಕೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುವ ವಿದೇಶಿ ಪ್ರವಾಸಿಗಳ ನೆಚ್ಚಿನ ತಾಣವಾಗಿದೆ.

ಮಹಾತ್ಮಾ ಗಾಂಧಿ ಕಾಶಿ ವಿದ್ಯಾಪೀಠದ ಆವರಣದಲ್ಲಿರುವ ಈ ಮಂದಿರವನ್ನು 1918 ಮತ್ತು 1924ರ ನಡುವೆ ಬಾಬು ಶಿವಪ್ರಸಾದ ಗುಪ್ತಾ ಅವರು ನಿರ್ಮಿಸಿದ್ದು, 11936,ಅ.25ರಂದು ಮಹಾತ್ಮಾ ಗಾಂಧಿಯವರು ಉದ್ಘಾಟಿಸಿದ್ದರು.

ಕಟ್ಟಡದ ಮಧ್ಯಭಾಗದಲ್ಲಿ ಅಮೃತಶಿಲೆಯ ಮೇಲಿರುವ ಅವಿಭಜಿತ ಭಾರತದ ನಕ್ಷೆಯು ಅಫಘಾನಿಸ್ತಾನ,ಬಲೂಚಿಸ್ತಾನ,ಪಾಕಿಸ್ತಾನ,ಬಾಂಗ್ಲಾದೇಶ,ಬರ್ಮಾ (ಈಗಿನ ಮ್ಯಾನ್ಮಾರ್) ಮತ್ತು ಸಿಲೋನ್(ಈಗಿನ ಶ್ರೀಲಂಕಾ)ಗಳನ್ನು ಒಳಗೊಂಡಿದೆ.

450 ಪರ್ವತಶ್ರೇಣಿಗಳು ಮತ್ತು ಶಿಖರಗಳು,ಬಯಲು ಪ್ರದೇಶಗಳು,ಜಲ ಮೂಲಗಳು, ನದಿಗಳು,ಮಹಾಸಾಗರಗಳು ಮತ್ತು ಪ್ರಸ್ತಭೂಮಿಗಳು ಮತ್ತು ಇತರ ಭೌಗೋಳಿಕ ಗುರುತುಗಳು,ಅವುಗಳ ಅಳತೆ ಮತ್ತು ಆಳಗಳನ್ನು ವಿವರವಾಗಿ ದಾಖಲಿಸಿರುವುದು ಈ ನಕ್ಷೆಯಲ್ಲಿನ ಆಸಕ್ತಿಕರ ಅಂಶವಾಗಿದೆ.

ಗಣರಾಜ್ಯ ದಿನ ಮತ್ತು ಸ್ವಾತಂತ್ರ್ಯ ದಿನಗಳಂದು ನಕ್ಷೆಯಲ್ಲಿನ ಜಲಮೂಲಗಳನ್ನು ನೀರಿನಿಂದ ತುಂಬಲಾಗುತ್ತದೆ ಮತ್ತು ಭೂಪ್ರದೇಶಗಳನ್ನು ಹೂವುಗಳಿಂದ ಅಲಂಕರಿಸಲಾಗುತ್ತದೆ ಎಂದು ಮಂದಿರದ ಮೇಲ್ವಿಚಾರಕ ರಾಜು ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

ಮಂದಿರವು ದುಗಾಪ್ರಸಾದ ಖತ್ರಿಯವರ ಮಾರ್ಗದರ್ಶನದಲ್ಲಿ 55 ಕಾರ್ಮಿಕರ ಶ್ರಮದಿಂದ ನಿರ್ಮಾಣಗೊಂಡಿದ್ದು,ಕಟ್ಟಡದ ಒಂದು ಮೂಲೆಯಲ್ಲಿರುವ ಫಲಕದಲ್ಲಿ ಅವರೆಲ್ಲರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ನಕ್ಷೆಯಲ್ಲಿನ ಒಂದು ಇಂಚು 6.40 ಮೈಲು ಭೂಪ್ರದೇಶವನ್ನು ಸೂಚಿಸುತ್ತದೆ ಮತ್ತು ತಳಅಂತಸ್ತಿನಲ್ಲಿ ಅಳವಡಿಸಲಾಗಿರುವ ಕಿಟಕಿಯ ಮೂಲಕ ವಿವಿಧ ಶಿಖರಗಳ ಎತ್ತರಗಳ ನಡುವಿನ ವ್ಯತ್ಯಾಸಗಳನ್ನು ಸ್ಪಷ್ಟವಾಗಿ ನೋಡಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X