ಮಂಡ್ಯ: ಕಾರಿಗೆ ಟ್ಯಾಂಕರ್ ಢಿಕ್ಕಿ; ತಂದೆ-ಮಗನಿಗೆ ಗಾಯ

ಮಂಡ್ಯ, ಜು.31: ರಸ್ತೆ ಅಪಘಾತದಲ್ಲಿ ತಂದೆ ಮಗು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಪಿಇಎಸ್ ಕಾಲೇಜು ಎದುರು ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಡೀಸಲ್ ಟ್ಯಾಂಕರ್ ಢಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ ತಂದೆ, ಮಗು ತೀವ್ರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳ ಮೂಲದ ತಂದೆ ಮಗುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ನಗರದ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವಹಿಸಿದ್ದಾರೆ.
ಘಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಯಿತು. ಕ್ರೇನ್ ಸಹಾಯದಿಂದ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಲಾಯಿತು.
Next Story





