ತಂಬಾಕು ಮಾರಾಟ: ಕುಂದಾಪುರದ ವಿವಿಧೆಡೆ ತನಿಖಾ ದಳದಿಂದ ದಾಳಿ
ಉಡುಪಿ, ಜು.31: ಉಡುಪಿ ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ವಡೇರಹೋಬಳಿ, ಬಿಸಿ ರೋಡ್, ರಾಷ್ಟ್ರೀಯ ಹೆದ್ದಾರಿ-66 ನಗರ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ 33 ಪ್ರಕರಣ ದಾಖಲಿಸಿ, 4100 ರೂ ದಂಡ ಸೂಲಿ ಮಾಡಲಾಗಿದೆ.
ದಾಳಿಯಲ್ಲಿ ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಕೃಷ್ಣಪ್ಪ, ಹಿರಿಯ ಆರೋಗ್ಯ ಸಹಾಯಕ ಸದಾನಂದ್ ಹೆಬ್ಬಾರ್, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ದತ್ತಾತ್ರೇಯ, ಕುಂದಾಪುರ ಪುರಸಬೆಯ ಶರತ್, ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ಎನ್‌ಟಿಸಿಪಿ ಸಮಾಜ ಕಾರ್ಯಕರ್ತೆ ಶೈಲಾ ಎಸ್.ಎಂ., ಪೋಲೀಸ್ ಆರಕ್ಷಕ ಸುಧಾಕರ್ ಉಪಸ್ಥಿತರಿದ್ದರು.
Next Story





