ಶಿವಮೊಗ್ಗ: ಅಪ್ರಾಪ್ತೆ ಆತ್ಮಹತ್ಯೆಗೆ ಶರಣು

ಶಿವಮೊಗ್ಗ, ಜು. 31: ಆಪ್ರಾಪ್ತ ವಯಸ್ಸಿನ ಯುವತಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಗಾಂಧಿನಗರ ಬಡಾವಣೆಯಲ್ಲಿ ನಡೆದಿದೆ.
ಅನುಷಾ (16) ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಾರಣಗಳ ಹಿನ್ನೆಲೆಯಲ್ಲಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story





