Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ನಾಟಕದ ಏಕೀಕರಣಕ್ಕೆ ಧಕ್ಕೆ ಬಂದರೆ...

ಕರ್ನಾಟಕದ ಏಕೀಕರಣಕ್ಕೆ ಧಕ್ಕೆ ಬಂದರೆ ಸಿಎಂ, ಕಾಂಗ್ರೆಸ್ ಹೊಣೆ: ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ31 July 2018 10:33 PM IST
share
ಕರ್ನಾಟಕದ ಏಕೀಕರಣಕ್ಕೆ ಧಕ್ಕೆ ಬಂದರೆ ಸಿಎಂ, ಕಾಂಗ್ರೆಸ್ ಹೊಣೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಜು.31: ಬಜೆಟ್‌ನಲ್ಲಿ ಕೆಲವೇ ಜಿಲ್ಲೆಗಳಿಗೆ ಆದ್ಯತೆ ನೀಡಿ, ಅನ್ಯಾಯಕ್ಕೊಳಗಾದ ಜಿಲ್ಲೆಗಳಲ್ಲಿ ಪ್ರತ್ಯೇಕತೆ ಕೂಗು ಏಳುವಂತೆ ಮಾಡಿದ್ದಲ್ಲದೇ, ಬಳಿಕ ಹೊಣೆಗೇಡಿ ಮಾತಿನಿಂದ ಕೂಗು ಬಲಗೊಳ್ಳುವಂತೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇರ ಹೊಣೆಗಾರರಾಗಿದ್ದಾರೆ ಎಂದು ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

ನಗರದ ತಮ್ಮ ಕಚೇರಿಯಲ್ಲಿ ಇಂದು ಕರೆದ ಸುದ್ದಿಗೋಷ್ಠಿ ಮಾತನಾಡಿದ ಅವರು, ಕರ್ನಾಟಕದ ಏಕೀಕರಣಕ್ಕೇನಾದರೂ ಧಕ್ಕೆ ಉಂಟಾದರೆ ಅದರ ಸಂಪೂರ್ಣ ಹೊಣೆಗಾರಿಕೆ ಯನ್ನು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷ ಹೊತ್ತುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಕೂಡಲೇ ಉತ್ತರ ಕರ್ನಾಟಕದ ಶಾಸಕರು ಹಾಗೂ ಮಠಾಧೀಶ ರೊಂದಿಗೆ ಮಾತುಕತೆ ನಡೆಸುವ ಮೂಲಕ ಮಾಡಿರುವ ತಪ್ಪು, ತಾರತಮ್ಯ ಸರಿಪಡಿಸುವ ವಿಶ್ವಾಸ ತುಂಬಬೇಕೇ ಹೊರತು, ಪಲಾಯನ ಮಾಡುವುದಲ್ಲ ಎಂದು ಮುಖ್ಯಮಂತ್ರಿಗಳನ್ನು ಚುಚ್ಚಿದರು.

ಕಳೆದ ಬಜೆಟ್ ಭಾಷಣದ ವೇಳೆಯೇ ತಾನು ಈ ಬಗ್ಗೆ ಸರಕಾರಕ್ಕೆ ಎಚ್ಚರಿಸಿದ್ದೆ. ಮಾಡಿರುವ ತಪ್ಪನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಿದ್ದರೆ. ಬಜೆಟ್ ನಲ್ಲಿ ಸಮಾನತೆ ಬದಲು ಕೆಲ ಜಿಲ್ಲೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿರುವುದೇ ಪ್ರತ್ಯೇಕತೆ ಕೂಗಿಗೆ ಕಾರಣವಾಗಿದೆ. ನಮ್ಮ ಹಿರಿಯರ ಹೋರಾಟದಿಂದ ಏಕೀಕರಣಗೊಂಡ ಕರ್ನಾಟಕವನ್ನು ಅದೇ ರೀತಿ ಮುಂದುವರಿಸುವಿರಾ ಅಥವಾ ಇಲ್ಲಾ ಛಿದ್ರ ಕರ್ನಾಟಕ ಬಯಸುವಿರಾ ಎಂದವರು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

ಚುನಾವಣೆ ಮುಂದೂಡಿಕೆಗೆ ಸಂಚು: ರಾಜ್ಯದಲ್ಲಿ ಶೀಘ್ರವೇ ನಡೆಯ ಬೇಕಿರುವ ಪೌರಾಡಳಿತ ಚುನಾವಣೆಯನ್ನು ಮುಂದೂಡಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪ್ರಯತ್ನಿಸು ತ್ತಿದೆ. ಇದಕ್ಕಾಗಿ ಪೌರಾಡಳಿತದಲ್ಲಿ ತಮ್ಮ ಸರಕಾರ ಜಾರಿಗೆ ತಂದ ಮಹಿಳೆಯರಿಗೆ ಶೇ.50 ಮೀಸಲಾತಿಯನ್ನು ಬದಲಿಸುವ ಹುನ್ನಾರ ನಡೆಯುತ್ತಿದೆ ಎಂದವರು ಆರೋಪಿಸಿದರು.

ಲೋಕಸಭೆ ಚುನಾವಣೆ ನಂತರ ಪೌರಾಡಳಿತ ಚುನಾವಣೆ ನಡೆಸಲು ಈ ಕುತಂತ್ರ ಮಾಡಲಾಗುತ್ತಿದೆ. ಆದುದರಿಂದ ತಕ್ಷಣವೇ ಮೀಸಲಾತಿ ಪಟ್ಟಿಯನ್ನು ನಡೆಸಿ, ಪೌರಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಸಲು ದಿನವನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಬೇಕು ಎಂದರು.

ಸದನ ಸಮಿತಿ ರಚಿಸಿ:  ಕೇಂದ್ರದ ಅನುದಾನದಿಂದ ರಾಜ್ಯದಲ್ಲಿ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ 18,000 ಘಟಕಗಳಲ್ಲಿ ಅರ್ಧದಷ್ಟು ಸಹ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಹೆಚ್ಚಿನ ಘಟಕಗಳಲ್ಲಿ ಒಂದು ಲೋಟ ನೀರು ಸಹ ಬಂದಿಲ್ಲ. ಘಟಕಗಳ ಸ್ಥಾಪನೆಯಲ್ಲೂ ಭಾರೀ ಭ್ರಷ್ಟಾಚಾರ ನಡೆದಿದೆ.ಆದುದರಿಂದ ಇದರ ತನಿಖೆಗೆ ಸದನ ಸಮಿತಿಯನ್ನು ರಚಿಸಬೇಕು ಎಂದು ಕೋಟ ಸರಕಾರವನ್ನು ಆಗ್ರಹಿಸಿದರು.

ರಾಜ್ಯದಲ್ಲಿ ಸರಕಾರ ಆಡಳಿತ ನಡೆಸುತ್ತಿಲ್ಲ. ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಾ ಗಲು, ಪ್ರಗತಿ ಪರಿಶೀಲನೆ ನಡೆಸಲು ಇನ್ನೂ ಉಸ್ತುವಾರಿ ಸಚಿವರನ್ನು ನಿಯುಕ್ತಿ ಗೊಳಿಸಿಲ್ಲ. ಇದರಿಂದ ಆಡಳಿತ ವೈಫಲ್ಯ ಉಂಟಾಗಿದೆ. ಆ.15ರಂದು ಸ್ವಾತಂತ್ರ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣದ ಸಮಯಕ್ಕಾದರೂ ಸರಕಾರ ಜಿಲ್ಲಾ ಉಸ್ತುವಾರಿಗಳನ್ನು ನಿಯುಕ್ತಿಗೊಳಿಸಲಿ ಎಂದವರು ಮನವಿ ಮಾಡಿದರು.

ಪ್ರತ್ಯೇಕತೆಗೆ ಬೆಂಬಲವಿಲ್ಲ: ಕರಾವಳಿಯಲ್ಲಿ ತುಳುನಾಡು ಸೇರಿದಂತೆ ಪ್ರತ್ಯೇಕತೆಯ ಕೂಗಿಗೆ ಬಿಜೆಪಿಯ ಬೆಂಬಲವಿಲ್ಲ. ಆದರೆ ಬಜೆಟ್‌ನಲ್ಲಿ ಅನ್ಯಾಯಕ್ಕೊಳಗಾದ ಜಿಲ್ಲೆಗಳ ಜನರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಆಲಿಸಿ ಕ್ರಮಕೈಗೊಳ್ಳಬೇಕು ಎಂದು ಕೋಟ ಒತ್ತಾಯಿಸಿದರು.

ಶಾಸನದ ಬದಲು ಶಾಸ್ತ್ರ ರಾಜ್ಯದಲ್ಲಿ ಈಗ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಶಾಸನದ ಆಧಾರದಲ್ಲಿ ನಡೆಯದೇ ಶಾಸ್ತ್ರದ ಆಧಾರದಲ್ಲಿ ನಡೆಯು ತ್ತಿದೆ. ಹೀಗಾಗಿ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕಕ್ಕೆ ಇನ್ನೂ ಗಳಿಗೆ ಕೂಡಿ ಬಂದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಲೇವಡಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X