Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಜ್ ಯಾತ್ರಿಗಳ ಆರ್ಥಿಕ ಹೊರೆ ಇಳಿಕೆ...

ಹಜ್ ಯಾತ್ರಿಗಳ ಆರ್ಥಿಕ ಹೊರೆ ಇಳಿಕೆ ಬಗ್ಗೆ ಕೇಂದ್ರ ಸರಕಾರದೊಂದಿಗೆ ಚರ್ಚೆ: ಸಚಿವ ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ31 July 2018 10:40 PM IST
share
ಹಜ್ ಯಾತ್ರಿಗಳ ಆರ್ಥಿಕ ಹೊರೆ ಇಳಿಕೆ ಬಗ್ಗೆ ಕೇಂದ್ರ ಸರಕಾರದೊಂದಿಗೆ ಚರ್ಚೆ: ಸಚಿವ ಝಮೀರ್ ಅಹ್ಮದ್

ಬೆಂಗಳೂರು, ಜು.31: ಹಜ್ ಯಾತ್ರಿಗಳಿಂದ ತಲಾ 2.26 ಲಕ್ಷ ರೂ.ಗಳನ್ನು ಸಂಗ್ರಹಿಸುತ್ತಿರುವುದು ಅವೈಜ್ಞಾನಿಕವಾಗಿದೆ. ಈ ಸಂಬಂಧ ಕೇಂದ್ರ ಸರಕಾರದ ಜೊತೆ ಚರ್ಚೆ ನಡೆಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಮಂಗಳವಾರ ಹೆಗಡೆ ನಗರ ಸಮೀಪವಿರುವ ರಾಜ್ಯ ಹಜ್ ಭವನದಲ್ಲಿ ಆಯೋಜಿಸಲಾಗಿದ್ದ 2018ನೇ ಸಾಲಿನ ಹಜ್ ಯಾತ್ರಿಕರ ವಿಮಾನಯಾನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. 2.26 ಲಕ್ಷ ರೂ.ತುಂಬಾನೆ ದುಬಾರಿಯಾಗಿದೆ. ಯಾತ್ರೆಯನ್ನು 1.36 ರಿಂದ  1.40 ಲಕ್ಷ ರೂ.ವೆಚ್ಚದಲ್ಲಿ ನಿರ್ವಹಿಸಬಹುದಾಗಿದೆ. ಕೇಂದ್ರ ನಮ್ಮ ಕೋಟಾವನ್ನು ನಿಗದಿ ಮಾಡಿ ನೀಡಿದರೆ ಸಾಕು. ನಾವೇ ಎಲ್ಲಾ ವ್ಯವಸ್ಥೆ ಕಲ್ಪಿಸಿದರೆ ಈಗಿರುವ ವೆಚ್ಚದಲ್ಲಿ ತಲಾ 1 ಲಕ್ಷ ರೂ.ಗಳು ಯಾತ್ರಿಗಳಿಗೆ ಉಳಿತಾಯವಾಗುತ್ತದೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರದ ಮೇಲೆ ಈ ಸಂಬಂಧ ರಾಷ್ಟ್ರೀಯ ನಾಯಕರು ಒತ್ತಡ ಹೇರಬೇಕಿದೆ. ಈ ಹಜ್ ಯಾತ್ರೆಯ ಪ್ರಕ್ರಿಯೆ ಮುಕ್ತಾಯ ಗೊಂಡ ಬಳಿಕ ಕೇಂದ್ರ ಸರಕಾರದ ಸಂಬಂಧಪಟ್ಟ ಸಚಿವರೊಂದಿಗೆ ನಮ್ಮ ರಾಜ್ಯದ ನಿಯೋಗ ಭೇಟಿ ಮಾಡಿ ಚರ್ಚಿಸೋಣ ಎಂದು ಅವರು ತಿಳಿಸಿದರು.

ರಾಜ್ಯ ಹಜ್ ಸಮಿತಿಗೆ 18,427 ಅರ್ಜಿಗಳು ಸಲ್ಲಿಕೆಯಾಗಿದ್ದವು. 6624 ಮಂದಿಯ ಪೈಕಿ 686 ಮಂದಿಯನ್ನು ಮೀಸಲು ಕೋಟಾದಲ್ಲಿ ಹಾಗೂ 5938 ಮಂದಿಯನ್ನು ಖುರ್ರಾ(ಲಾಟರಿ) ಮೂಲಕ ಆಯ್ಕೆ ಮಾಡಲಾಯಿತು. ಮುಂದಿನ ವರ್ಷ ಹೆಚ್ಚುವರಿಯಾಗಿ 2ರಿಂದ ಮೂರು ಸಾವಿರ ಕೋಟಾ ಹೆಚ್ಚಿಸಲು ಪ್ರಯತ್ನಿಸುವುದಾಗಿ ಎಂದು ಅವರು ತಿಳಿಸಿದರು.

ದೇಶದ ಪರಿಸ್ಥಿತಿ ಹದಗೆಟ್ಟಿದೆ. ಮುಸ್ಲಿಮರನ್ನು ಗುರಿಯಾಗಿಸಿ ಹಲ್ಲೆಗಳು, ದೌರ್ಜನ್ಯಗಳು ನಡೆಯುತ್ತಿವೆ. ದೇಶಕ್ಕಾಗಿ ನಾವು ತ್ಯಾಗ, ಬಲಿದಾನ ನೀಡಿದ್ದೇವೆ. ನಮ್ಮ ದೇಶಭಕ್ತಿಯನ್ನು ಸಾಬೀತು ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಹಜ್ ಕ್ಯಾಂಪ್ ನಲ್ಲಿ ಸಾವಿರಾರು ಸ್ವಯಂ ಸೇವಕರು ತಮ್ಮ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಯಾತ್ರಿಗಳಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಪರಿಶ್ರಮದಿಂದ ಈ ಕ್ಯಾಂಪ್ ಯಶಸ್ವಿಯಾಗಿದೆ ಎಂದು ಝಮೀರ್ ಅಹ್ಮದ್ ಮೆಚ್ಚುಗೆ ವ್ಯಕ್ತಪಡಿಸಿದರು. ಆದುದರಿಂದ, ನಮ್ಮ ರಾಜ್ಯದಿಂದ ಯಾತ್ರೆಗೆ ತೆರಳುತ್ತಿರುವ ಯಾತ್ರಿಗಳು ದೇಶದಲ್ಲಿ ಹಿಂದೂ, ಮುಸ್ಲಿಂ, ಸಿಖ್ಖರು, ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳು ಪರಸ್ಪರ ಸಹೋದರರಂತೆ ಬಾಳುವಂತೆ ಪ್ರಾರ್ಥನೆ ಮಾಡಿ ಎಂದು ಅವರು ಮನವಿ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯದಲ್ಲಿ ಅಲ್ಪಸಂಖ್ಯಾತರು ನಮ್ಮ ಪಕ್ಷದ ಜೊತೆ ನಿಂತು ಶಕ್ತಿ ನೀಡಿದ್ದಾರೆ. ಅವರ ಸಹಕಾರವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಿಮ್ಮ ಜೊತೆ ನಾವು ಸದಕಾಲ ಇರುತ್ತೇವೆ. ಹಿಂದುಳಿದಿರುವ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಸಮುದಾಯಗಳನ್ನು ಮುಂದೆ ತರುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸೋಣ ಎಂದರು.

ಹಜ್ ಯಾತ್ರೆ ಕೈಗೊಳ್ಳಬೇಕೆಂಬುದು ಪ್ರತಿಯೊಬ್ಬ ಮುಸ್ಲಿಮರ ಕನಸು. ಆದರೆ, ಆರ್ಥಿಕ ಹಾಗೂ ಇನ್ನಿತರ ಕಾರಣಗಳಿಂದ ಹೋಗಲು ಸಾಧ್ಯವಾಗುವುದಿಲ್ಲ. ಇದೊಂದು ಪವಿತ್ರವಾದ ಯಾತ್ರೆ. ನಿಮ್ಮೆಲ್ಲರ ಯಾತ್ರೆ  ಶುಭವಾಗಲಿ ಎಂದು ಅವರು ಹಾರಿಸಿದರು.

ಮೌಲಾನ ಸೈಯದ್ ಮುಹಮ್ಮದ್ ತನ್ವೀರ್ ಹಾಶ್ಮಿ ಮಾತನಾಡಿ, ರಾಜ್ಯದಿಂದ ಹಜ್ ಯಾತ್ರೆಗೆ ಹೋಗುತ್ತಿರುವವರು ಟಿಪ್ಪು ಸುಲ್ತಾನ್, ಬಸವಣ್ಣನ ಕರ್ನಾಟಕ್ಕಾಗಿ ಪ್ರಾರ್ಥಿಸಿ. ದೇಶ ಮತ್ತು ರಾಜ್ಯ ಇಂದು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಕೋಮುವಾದಿ ಶಕ್ತಿಗಳು ತಮ್ಮ ಅಟ್ಟಹಾಸ ಮೆರೆಯುತ್ತಿವೆ ಎಂದರು. ಸಂವಿಧಾನ ಬದಲಿಸುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ದೇಶದ ಎಲ್ಲ ಜಾತ್ಯಾತೀತ ಭಾರತೀಯರು ಒಂದಾಗಿ ದ್ವೇಷದ ವಾತಾವರಣ ನಿರ್ಮಾಣ ಮಾಡುತ್ತಿರುವ ದುಷ್ಟ ಶಕ್ತಿಗಳನ್ನು ಸೋಲಿಸಬೇಕು ಎಂದು ಅವರು ಕರೆ ನೀಡಿದರು. 

ದೇಶದ ಸಂವಿಧಾನದ ಘನತೆ ಹಾಗೂ ತ್ರಿವರ್ಣ ಧ್ವಜದ ಪಾವಿತ್ರ್ಯತೆ ಉಳಿಸಬೇಕಿದೆ. ಜಾತ್ಯತೀತ ಶಕ್ತಿಗಳು ಒಂದಾದರೆ, ಸಂವಿಧಾನ ವಿರೋಧಿ, ದುಷ್ಟ ಸರಕಾರದ ಅಂತ್ಯ ವಾಗಲಿದೆ ಎಂದು ಅವರು ಹೇಳಿದರು.

ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ ಮಾತನಾಡಿ, ಅಸ್ಸಾಂ ನಲ್ಲಿ ಲಕ್ಷಾಂತರ ಮುಸ್ಲಿಮರನ್ನು ಹೊರಗೆ ಹಾಕುವ ಪ್ರಯತ್ನ ನಡೆಯುತ್ತಿದೆ. ಕೇಂದ್ರ ಸರಕಾರಕ್ಕೆ ಮಾನವೀಯ ಗುಣ ಹಾಗೂ ಒಳ್ಳೆಯ ಬುದ್ಧಿ ನೀಡಲಿ ಎಂದು ಯಾತ್ರಿಗಳು ಪ್ರಾರ್ಥನೆ ಸಲ್ಲಿಸಿ ಎಂದರು.

ಸ್ವಾಗತ ಭಾಷಣ ಮಾಡಿದ ರಾಜ್ಯ ಹಜ್ ಸಮಿತಿ ಅಧ್ಯಕ್ಷ ಆರ್.ರೋಷನ್ ಬೇಗ್, ಆಗಸ್ಟ್ 1 ರಿಂದ 15 ರವರೆಗೆ 19 ವಿಮಾನಗಳ ಮೂಲಕ ಬೆಂಗಳೂರು ವಿಮಾನ ನಿಲ್ದಾಣದಿಂದ ಒಟ್ಟು 5700 ಯಾತ್ರಿಗಳು ಹಜ್ ಯಾತ್ರೆಗೆ ತೆರಳುತ್ತಿದ್ದಾರೆ. ಈ ಪೈಕಿ ಆಂಧ್ರಪ್ರದೇಶದ ಅನಂತಪುರ ಹಾಗೂ ಚಿತ್ತೂರು ಜಿಲ್ಲೆಯ ಯಾತ್ರಿಗಳು ಸೇರಿದ್ದಾರೆ ಎಂದರು. ಇದಲ್ಲದೆ, ಮಂಗಳೂರು, ಹೈದರಾಬಾದ್ ಹಾಗೂ ಗೋವಾ ವಿಮಾನನಿಲ್ದಾಣದ ಮೂಲಕವು ನಮ್ಮ ರಾಜ್ಯದ ಯಾತ್ರಿಗಳು ತೆರಳಿದ್ದಾರೆ. ಒಟ್ಟಾರೆ ನಮ್ಮ ರಾಜ್ಯದ 6624 ಯಾತ್ರಿಗಳು ಈ ವರ್ಷ ಪವಿತ್ರ ಹಜ್ ಯಾತ್ರೆ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು.

1996ರಲ್ಲಿ ಬೆಂಗಳೂರು ವಿಮಾನ ನಿಲ್ದಾಣ ದಿಂದ ಯಾತ್ರಿಗಳು ನೇರವಾಗಿ ಯಾತ್ರೆಗೆ ಹೋಗುವ ಕಾರ್ಯಕ್ರಮ ಆರಂಭವಾಯಿತು. ಇಂದಿಗೆ 22 ವರ್ಷಗಳು ಪೂರ್ಣಗೊಂಡಿವೆ ಎಂದು ಅವರು ಹೇಳಿದರು.

ಸಮಾರಂಭದ ಸಾನಿಧ್ಯವನ್ನು ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ, ಮೌಲಾನ ಲುತ್ಫುಲ್ಲಾ ರಶಾದಿ, ಮೌಲಾನ ಮುಹಮ್ಮದ್ ಮಕ್ಸೂದ್ ಇಮ್ರಾನ್, ಮೌಲಾನ ಝೈನುಲ್ ಆಬೀದಿನ್ ರಶಾದಿ, ಮೌಲಾನ ಸೈಯದ್ ಮುಹಮ್ಮದ್ ತನ್ವೀರ್ ಹಾಶ್ಮಿ ವಹಿಸಿದ್ದರು.

ಸಚಿವರಾದ ಯು.ಟಿ.ಖಾದರ್, ಕೃಷ್ಣ ಬೈರೇಗೌಡ, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಸೀರ್ ಹುಸೇನ್,‌ ಕೇಂದ್ರದ ಮಾಜಿ ಸಚಿವರಾದ ಸಿ.ಕೆ.ಜಾಫರ್ ಶರೀಫ್, ಡಾ.ಕೆ.ರಹ್ಮಾನ್ ಖಾನ್, ಎಐಸಿಸಿ ಕಾರ್ಯದರ್ಶಿ ಸಲೀಂ ಅಹ್ಮದ್, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್ ಅಹ್ಮದ್, ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ, ರಹೀಮ್ ಖಾನ್, ಭೈರತಿ ಸುರೇಶ್, ವಿಧಾನಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

18 ಚಕ್ರಗಳ ಮಲ್ಟಿ ಆಕ್ಸೆಲ್ ವಾಹನ ಹಾಗೂ ಏರ್ ಕ್ರಾಫ್ಟ್ ಉಡಾವಣೆ ಮಾಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿರುವ ಮೈಸೂರು ಮೂಲದ 7 ವರ್ಷದ ಬಾಲಕಿ ರಿಫಾ ತಸ್ಕೀನ್ ರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಆಕೆಯ ಶಿಕ್ಷಣಕ್ಕಾಗಿ ಸಚಿವ ಝಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ಒಂದು ಲಕ್ಷರೂ.ಗಳ‌ ಚೆಕ್ ವಿತರಿಸಿದರು. ಅಲ್ಲದೇ, ತಮ್ಮ ವೈಯಕ್ತಿಕ ಖರ್ಚಿನಿಂದ ಹಜ್ ಯಾತ್ರೆಗೆ ಕಳುಹಿಸುತ್ತಿರುವ 49 ಮಂದಿ ಇಮಾಮ್ ಹಾಗೂ ಮುಅಝ್ಝಿನ್ ಗಳಿಗೆ ಇದೇ ಸಂದರ್ಭ ಶುಭಕೋರಿದರು.

ಹಜ್ ಯಾತ್ರಿಗಳ ವಿಮಾನಯಾನ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಬೇಕಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೈರು ಹಾಜರಿ ಎದ್ದು ಕಾಣುತ್ತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X