ಗುಂಡ್ಲುಪೇಟೆ: ವರ್ಗಾವಣೆಗೊಂಡ ಅಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ

ಗುಂಡ್ಲುಪೇಟೆ,ಜು.31: ತಾಲೂಕಿನ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಸಮಾಜಕಲ್ಯಾಣ ಇಲಾಖೆಯಿಂದ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.
ಸಮಾಜ ಕಲ್ಯಾಣ ಇಲಾಖೆಯ ಚಾ.ನಗರ ಜಿಲ್ಲಾ ಉಪನಿದೇರ್ಶಕ ಸತೀಶ್, ತಾಲೂಕು ಸಹಾಯಕ ನಿರ್ದೇಶಕಿ ಎಚ್.ಎಸ್.ಬಿಂದ್ಯಾ, ಹಾಗೂ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಕೆ.ಸಿ.ಸತೀಶ್ ರವರು ವರ್ಗಾವಣೆಯಾದ ಹಿನ್ನಲೆಯಲ್ಲಿ ಅವರಿಗೆ ಇಲಾಖೆ ವತಿಯಿಂದ ಬೀಳ್ಕೊಡುಗೆ ಏರ್ಪಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಬಿಂದ್ಯಾ, ನಾವು ಯಾವುದೇ ಕೆಲಸವನ್ನು ಸಿಬ್ಬಂದಿಗಳೊಂದಿಗೆ ಪ್ರೀತಿ ಹಾಗೂ ವಿಶ್ವಾಸದಿಂದ ಮಾಡಿದಾಗ ಯಶಸ್ಸು ದೊರಕುತ್ತದೆ. ತಾಲೂಕು ಪಂಚಾಯತ್ ಇಒ ಆಗಿ ಅಧಿಕಾರ ವಹಿಸಿಕೊಂಡಾಗ ಭಾರೀ ಸವಾಲಿನ ನಡುವೆಯೂ ಶೌಚಾಲಯ ನಿರ್ಮಾಣದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಯಿತು ಎಂದರು.
ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಚಂದ್ರಕುಮಾರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ, ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿವರ್ಗ, ಪಿಡಿಓಗಳು ಮತ್ತಿತರರು ಇದ್ದರು.





