ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಕೊಲೆ
ಬೆಂಗಳೂರು, ಆ.1: ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ದುರ್ಘಟನೆ ಇಲ್ಲಿನ ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಾಲ್ಮೀಕಿ ನಗರ ನಿವಾಸಿ ಸಯ್ಯದ್ ಅಮೀನ್(22) ಕೊಲೆಯಾದ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.
ಮೃತ ಅಮಿನ್ ನಗರದ ಬಂಬೂಬಜಾರ್ನ ಹಾರ್ಡ್ವೇರ್ ಮಳಿಗೆಯಲ್ಲಿ ಕೆಲಸ ಮಾಡಿಕೊಂಡಿದ್ದ. ಮಂಗಳವಾರ ರಾತ್ರಿ ಅಂಗಡಿಯಿಂದ ಹೊರಬಂದಾಗ ನಾಲ್ಕೈದು ಮಂದಿಯ ತಂಡ ಈತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದು, ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲಿಸರು ಶಂಕಿಸಿದ್ದಾರೆ. ಕಲಾಸಿಪಾಳ್ಯ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Next Story