Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ಕೆಂದ್ರ ವಿ.ವಿ ಸೆಂಟ್ರಲ್...

ಬೆಂಗಳೂರು ಕೆಂದ್ರ ವಿ.ವಿ ಸೆಂಟ್ರಲ್ ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ಬೀಗ

ವಾರ್ತಾಭಾರತಿವಾರ್ತಾಭಾರತಿ1 Aug 2018 8:27 PM IST
share

ಬೆಂಗಳೂರು, ಆ.1: ಬೆಂಗಳೂರು ಕೆಂದ್ರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಬೀಗ ಹಾಕಲು ವಿಶ್ವವಿದ್ಯಾಲಯ ನಿರ್ಧರಿಸಿದೆ.

ವಿಶ್ವವಿದ್ಯಾಲಯದ ಈ ನಿರ್ಧಾರದಿಂದಾಗಿ ಪದವೀಧರರಾಗಿ ಹೊರಬಂದಿರುವ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಗಳಿಸುವ ಆಕಾಂಕ್ಷೆ ಹೊಂದಿರುವ ವಿದ್ಯಾರ್ಥಿಗಳಿಗೆ ತೀವ್ರ ಬೇಸರವನ್ನುಂಟು ಮಾಡಿದೆ.

ವಿಭಾಗದಲ್ಲಿ ಅಗತ್ಯ ಬೋಧಕ ಸಿಬ್ಬಂದಿ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದ ಮುಚ್ಚಲಾಗುತ್ತಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಕಾರಣ ನೀಡುತ್ತಿದೆ. ಈ ವರ್ಷ ಸ್ನಾತಕೋತ್ತರ ಅಧ್ಯಯನಕ್ಕೆ ಅರ್ಜಿಗಳನ್ನು ಆಹ್ವಾನಿಸದೆ, ಕೋರ್ಸ್ ರದ್ದು ಮಾಡಿ ಇತ್ತೀಚಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಪದವಿ ಮುಗಿಸಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡಬೇಕೆಂದು ಬಯಸುವ ಬೆಂಗಳೂರು ಉತ್ತರ ಭಾಗದಲ್ಲಿ ನೆಲೆಸಿರುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಲಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಬೇಕಾದರೆ ಜ್ಞಾನಭಾರತಿ ಕ್ಯಾಂಪಸ್ ಅಥವಾ ಕೋಲಾರದ ಸ್ನಾತಕೋತ್ತರ ಕೇಂದ್ರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ಹೋಗಬೇಕಾಗುತ್ತದೆ. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಜ್ಞಾನಭಾರತಿ ಬಹಳಷ್ಟು ದೂರವಾಗುತ್ತದೆ. ಅದರ ನಡುವೆ 6 ಗಂಟೆಗಳ ಕಾಲ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ವಿಶ್ವವಿದ್ಯಾಲಯದ ತೀರ್ಮಾನಕ್ಕೆ ಹಿರಿಯ ಪ್ರಾಧ್ಯಾಪಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ವರ್ಷ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ಪಡೆಯುತ್ತಿರುವವರಿಗೆ ತರಗತಿಗಳು ನಡೆಯುತ್ತಿದ್ದು ಇವರ ತಂಡ ಕೊನೆಯದಾಗಲಿದೆ. ಸೌಲಭ್ಯಗಳ ಕೊರತೆಯಿದೆ ಎಂದು ಹೇಳುವ ವಿವಿ, ಪತ್ರಿಕೋದ್ಯಮ ತರಗತಿಗಳನ್ನು ನಡೆಸಲು ಹೆಚ್ಚಿನ ಮೂಲಭೂತ ಸೌಕರ್ಯಗಳು ಅಗತ್ಯವಿಲ್ಲ. ಪ್ರಯೋಗಾಲಯ, ಸ್ಟುಡಿಯೊಗಳ ಅಗತ್ಯವಿಲ್ಲ. ದೃಶ್ಯ ಮಾಧ್ಯಮಗಳಿಗೆ ಮಾತ್ರ ಬೇಕಾಗಬಹುದು. ಬೇರೆ ಕೋರ್ಸ್‌ಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಇಲ್ಲಿಯೂ ಮಾಡಬಹುದು. ಅತಿಥಿ ಉಪನ್ಯಾಸಕರನ್ನೂ ನೇಮಕ ಮಾಡಬಹುದು ಎಂದು ಮತ್ತೊಬ್ಬ ಹಿರಿಯ ಉಪನ್ಯಾಸಕರು ಅಭಿಪ್ರಾಯಿಸಿದ್ದಾರೆ.
ಈ ಸಂಬಂಧ ಕೇಂದ್ರ ವಿಶ್ವವಿದ್ಯಾಲಯದ ಅಧಿಕಾರಿಗಳು ಇದು ತಾತ್ಕಾಲಿಕ ಕ್ರಮ ಅಷ್ಟೇ. ಕೋರ್ಸ್ ಅನ್ನು ಶಾಶ್ವತವಾಗಿ ಮುಚ್ಚುವುದಿಲ್ಲ. ಸಿಬ್ಬಂದಿ ಕೊರತೆಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಾತ್ರ ಪ್ರವೇಶಾತಿ ನೀಡಿಲ್ಲ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X