ಆ.2 ರಂದು ಗೆಜೆಟ್ ಅಧಿಸೂಚನೆ ಪ್ರಕಟ: ಹೈಕೋರ್ಟ್‌ಗೆ ಮಾಹಿತಿ ನೀಡಿದ ಸರಕಾರ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೀಸಲು ಪಟ್ಟಿ ವಿಚಾರ
ಬೆಂಗಳೂರು, ಆ.1: ರಾಜ್ಯದ 215ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೀಸಲು ಪಟ್ಟಿ ಅಂತಿಮಗೊಂಡಿದ್ದು, ಸಂಪೂರ್ಣ ಪಟ್ಟಿಯ ಗೆಜೆಟ್ ಅಧಿಸೂಚನೆ ಗುರುವಾರ (ಆ.2) ಪ್ರಕಟವಾಗಲಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮೀಸಲು ಪಟ್ಟಿ ಪ್ರಕಟಿಸಿಲ್ಲ ಎಂದು ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಆರ್.ದೇವದಾಸ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಉದಯ ಹೊಳ್ಳ, ಇನ್ನು ಏಳು ಸಂಸ್ಥೆಗಳ ಮೀಸಲು ಪಟ್ಟಿ ಪ್ರಕಟಣೆಗೆ ಬಾಕಿ ಇದೆ. ಬುಧವಾರ (ಆ.1) ಸಂಜೆಯೊಳಗೆ ಇವುಗಳ ಗೆಜೆಟ್ ಅಧಿಸೂಚನೆ ಹೊರಡಿಸಲಾಗುವುದು. ಗುರುವಾರ (ಆ.2) ಇದನ್ನು ಚುನಾವಣಾ ಆಯೋಗಕ್ಕೆ ನೀಡಲಾಗುವುದು ಎಂದು ತಿಳಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಶುಕ್ರವಾರಕ್ಕೆ(ಆ.3) ಮುಂದೂಡಿದೆ.
Next Story





