ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಎರಡು ವರ್ಷ ಜೈಲು
ಮೈಸೂರು,ಆ.1: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಫೋಕ್ಸೋ ವಿಶೇಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶಿಸಿದೆ.
ಕುವೆಂಪುನಗರ ನಿವಾಸಿ ರಾಮ್ ಪ್ರಸಾದ್(58)ಶಿಕ್ಷೆಗೊಳಗಾದ ವ್ಯಕ್ತಿ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕುರಿತು ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ.ದಂಡ ವಿಧಿಸಿ ತೀರ್ಪಿತ್ತಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಬಿ.ಸಿ.ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.
Next Story