Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮರಾಠಾ ಮೀಸಲಾತಿ: ಮುಂಬೈನಲ್ಲಿ ಜೈಲ್ ಭರೋ...

ಮರಾಠಾ ಮೀಸಲಾತಿ: ಮುಂಬೈನಲ್ಲಿ ಜೈಲ್ ಭರೋ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Aug 2018 11:55 PM IST
share

ಮುಂಬೈ, ಆ.1: ಮರಾಠಾ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.50 ಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸುವಂತೆ ಬೇಡಿಕೆಯೊಂದಿಗೆ ಮರಾಠಾ ಕಾರ್ಯಕರ್ತರು ಬುಧವಾರ ಇಲ್ಲಿ ಜೈಲ್ ಭರೋ ಪ್ರತಿಭಟನೆಯನ್ನು ನಡೆಸಿದರು.

ಮೀಸಲಾತಿ ಪರ ಗುಂಪುಗಳು ಮರಾಠಾ ಕ್ರಾಂತಿ ಮೋರ್ಚಾದ ನೇತೃತ್ವದಲ್ಲಿ ದಕ್ಷಿಣ ಮುಂಬೈನ ಆಝಾದ್ ಮೈದಾನದಲ್ಲಿ ಜೈಲ್ ಭರೋ ಪ್ರತಿಭಟನೆಯನ್ನು ನಡೆಸಿದವು. ರಾಜ್ಯದ ಕೆಲವು ಭಾಗಗಳಲ್ಲಿಯೂ ಇಂತಹುದೇ ಪ್ರತಿಭಟನೆಗಳು ನಡೆದಿವೆ.

ಪ್ರತಿಭಟನೆಯಿಂದ ಮಹಾನಗರದಲ್ಲಿ ರೈಲು ಮತ್ತು ರಸ್ತೆ ಸಂಚಾರಕ್ಕೆ ಯಾವುದೇ ವ್ಯತ್ಯಯವುಂಟಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದರು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ರಲ್ಲಿ ಮತ್ತು ಮರಾಠಾ ಸಮುದಾಯಕ್ಕೆ ಮೀಸಲಾತಿಯನ್ನು ಒದಗಿಸುವ ಅವರ ಪೊಳ್ಳು ಭರವಸೆಗಳಲ್ಲಿ ನಾವು ವಿಶ್ವಾಸವನ್ನು ಕಳೆದುಕೊಂಡಿದ್ದೇವೆ ಎಂದು ಆಝಾದ್ ಮೈದಾನದಲ್ಲಿ ಪ್ರತಿಭಟನಾಕಾರರೋರ್ವರು ಹೇಳಿದರು.

ರಾಜ್ಯದ 12 ಕೋಟಿ ಜನಸಂಖ್ಯೆಯಲ್ಲಿ ಮರಾಠಾ ಸಮುದಾಯದ ಪಾಲು ಶೇ.30ರಷ್ಟಿದೆ. ಕಳೆದ 10 ದಿನಗಳಿಂದ ಪ್ರತಿಭಟನೆಗಳು ಹಿಂಸೆಗೆ ತಿರುಗಿವೆ. ಈವರೆಗೆ ಆರು ಪ್ರತಿಭಟನಾಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮರಾಠಾ ಯುವಜನತೆಗೆ ಫಡ್ನವೀಸ್ ಕೊಡುಗೆ

ಹಿಂದುಳಿದ ಸಮುದಾಯಗಳಿಗೆ ಆರ್ಥಿಕ ನೆರವನ್ನು ನೀಡುವ ಯೋಜನೆಯಡಿ ಮರಾಠಾ ಸಮುದಾಯದ ಯುವಜನತೆ ಪಡೆಯುವ ಸಾಲಗಳಿಗೆ ಮಹಾರಾಷ್ಟ್ರ ಸರಕಾರವು ಜಾಮೀನುದಾರನಾಗುವ ಕೊಡುಗೆಯನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಮುದಾಯದ ಮುಂದಿರಿಸಿದ್ದಾರೆ.

ಕಂದಾಯ ಸಚಿವ ಚಂದ್ರಕಾಂತ್ ಪಾಟೀಲ್ ನೇತೃತ್ವದಲ್ಲಿ ಮಂಗಳವಾರ ನಡೆದ ಸಂಪುಟ ಉಪಸಮಿತಿಯ ಸಭೆಯು ಈ ನಿರ್ಧಾರವನ್ನು ಕೈಗೊಂಡಿದೆ. ಮರಾಠಾ ಸಮುದಾಯದ ಏಳಿಗೆಗಾಗಿ ಕ್ರಮಗಳನ್ನು ಕೈಗೊಳ್ಳಲು ಈ ಸಮಿತಿಯನ್ನು ರಚಿಸಲಾಗಿತ್ತು. ಬ್ಯಾಂಕುಗಳು ಮರಾಠಾ ಸಮುದಾಯದ ಜನರಿಗೆ ಸಾಲಗಳನ್ನು ಮಂಜೂರು ಮಾಡುತ್ತಿಲ್ಲ ಮತ್ತು ಭದ್ರತೆಯನ್ನು ಕೇಳುತ್ತಿವೆ ಎಂಬ ದೂರುಗಳು ಸಮಿತಿಗೆ ಬಂದಿದ್ದವು.

ಸಮುದಾಯದದ ಎಂ.ಫಿಲ್ ಮತ್ತು ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗಳನ್ನು ನೀಡಲು ಮತ್ತು 608 ವೃತ್ತಿಪರ ಕೋರ್ಸ್‌ಗಳಿಗಾಗಿ ವಾರ್ಷಿಕ ಎಂಟು ಲ.ರೂ.ಕೌಟುಂಬಿಕ ಆದಾಯ ಮೀರದ ವಿದ್ಯಾರ್ಥಿಗಳ ಅರ್ಧದಷ್ಟು ಶಿಕ್ಷಣ ಶುಲ್ಕವನ್ನೂ ಭರಿಸಲೂ ಸರಕಾರವು ನಿರ್ಧರಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಿದ್ಧತೆ ನಡೆಸುವ ಮರಾಠಾ ಸಮುದಾಯದ ವಿದ್ಯಾರ್ಥಿಗಳಿಗೆ ನೆರವಾಗಲು ಪುಣೆಯಲ್ಲಿ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಮತ್ತು ಇತರ ಸಂಸ್ಥೆಗಳಲ್ಲಿ ಮಾರ್ಗದರ್ಶನ ಮತ್ತು ತರಬೇತಿ ಪಡೆಯಬಯಸುವ ವಿದ್ಯಾರ್ಥಿಗಳ ಶುಲ್ಕವನ್ನು ಭರಿಸುವ ಕೊಡುಗೆಯನ್ನೂ ಸರಕಾರವು ಮುಂದಿರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X