Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆ.4ರಿಂದ ಲಾಲ್ ಭಾಗ್‌ನಲ್ಲಿ ಫಲಪುಷ್ಪ...

ಆ.4ರಿಂದ ಲಾಲ್ ಭಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ2 Aug 2018 8:42 PM IST
share
ಆ.4ರಿಂದ ಲಾಲ್ ಭಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ

ಬೆಂಗಳೂರು, ಆ.2: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಲಾಲ್ಬಾಗ್‌ನಲ್ಲಿ ಆ.4ರಿಂದ ಆ.15ರವರೆಗೂ ಫಲಪುಷ್ಪಪ್ರದರ್ಶನ ಏರ್ಪಡಿಸಲಾಗಿದ್ದು, ದೇಶವನ್ನು ರಕ್ಷಿಸುತ್ತಿರುವ ಯೋಧರು, ಭಾರತದ ರಕ್ಷಣಾ ಪಡೆಗೆ ಈ ಬಾರಿ ವಿಶೇಷ ನಮನ ಸಲ್ಲಿಸಲಾಗುತ್ತಿದೆ.

ಈ ಕುರಿತು ಗುರುವಾರ ನಗರದ ಲಾಲ್‌ಬಾಗ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾಹಿತಿ ನೀಡಿದ ತೋಟಗಾರಿಕೆ ಇಲಾಖೆ ನಿರ್ದೇಶಕ ವೈ.ಎಸ್.ಪಾಟೀಲ್, ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದವರು ಹಾಗೂ ದೇಶವನ್ನು ರಕ್ಷಿಸುತ್ತಿರುವ ಯೋಧರು, ಭಾರತದ ರಕ್ಷಣಾ ಪಡೆಗೆ ಈ ಬಾರಿ ವಿಶೇಷ ನಮನ ಸಲ್ಲಿಸಲಾಗುತ್ತಿದೆ. ಇದು 208ನೆ ಫಲಪುಷ್ಪ ಪ್ರದರ್ಶನವಾಗಿದ್ದು, 1912ರಿಂದಲೂ ಲಾಲ್ಬಾಗ್‌ನಲ್ಲಿ ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಉದ್ಘಾಟನೆ: ಆ.4 ರ ಬೆಳಗ್ಗೆ 10 ಗಂಟೆಗೆ ಲಾಲ್ಬಾಗ್‌ನ ಗಾಜಿನ ಮನೆಯಲ್ಲಿ ಫಲಪುಷ್ಪಪ್ರದರ್ಶನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ಉದ್ಘಾಟಿಸಲಿದ್ದು, ಇಕೆಬನಾ ಪ್ರದರ್ಶನದ ದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ವಿಶೇಷತೆ: ಒಂದು ಕೇಂದ್ರ ಮಾಡಲಾಗಿದ್ದು, ಅದರಲ್ಲಿ 17 ಥೀಮ್ ಗಳಿವೆ, 2ನೇ ಭಾಗದಲ್ಲಿ ಏಳು ವಿಶೇಷ ಪ್ರದರ್ಶನವಿರುತ್ತದೆ. ತದನಂತರ ಇಲಾಖೆ ವತಿಯಿಂದ ಆರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಅದೇ ರೀತಿ, ವಾಯುಸೇನೆ, ಭೂ ಸೇನೆ, ನೌಕಾಸೇನೆಯನ್ನು ಗುಲಾಬಿ ಹೂವುಗಳಿಂದ ಸಿದ್ಧಪಡಿಸಲಾಗಿದೆ. ಸೇನೆಗೆ ಯುವ ಜನತೆ ಹೆಚ್ಚು ಸೇರಬೇಕೆಂಬ ಉದ್ದೇಶದಿಂದ ಈ ಬಾರಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ.

ಸಿಯಾಚಿನ್ ಪ್ರದೇಶದಲ್ಲಿ -30 ಡಿಗ್ರಿ ಸೆಲ್ಸಿಯಸ್‌ನಲ್ಲಿ ನಮ್ಮ ಯೋಧರು ಹೇಗೆ ಕಾರ್ಯ ನಿರ್ವಹಿಸುತ್ತಾರೆ ಎಂಬ ಬಗ್ಗೆ ಹೂಗಳಿಂದಲೇ ಚಿತ್ರಿಸಿರುವುದು ಈ ಬಾರಿಯ ವಿಶೇಷವಾಗಿದೆ. ಪ್ರದರ್ಶನದ 15 ದಿನಗಳಲ್ಲಿ ಮೂರರಿಂದ ನಾಲ್ಕು ಬಾರಿ ಪುಷ್ಪಗಳನ್ನು ಬದಲಾಯಿಸಲಾಗುತ್ತದೆ. ಈ ಬದಲಾವಣೆಗೆ ಒಂದು ಸಲಕ್ಕೆ 40 ಸಾವಿರ ರೂ. ವೆಚ್ಚವಾಗುತ್ತದೆ. 1.20 ಲಕ್ಷ ಹೂಗಳನ್ನು ಈ ರೀತಿ ಬದಲಾವಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
 
ವಿಜ್ಞಾನ: ಈ ಬಾರಿ ಪ್ರದರ್ಶನದಲ್ಲಿ ವಿಜ್ಞಾನಕ್ಕೆ ಆದ್ಯತೆ ನೀಡಲಾಗಿದ್ದು, ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ದೊರೆಯಲಿದೆ. ಉಪಗ್ರಹ ಉಡಾವಣೆ ಪಿಎಸ್‌ಎಲ್ವಿ, ಜಿಎಸ್‌ಎಲ್ವಿಗಳನ್ನು ಹೂಗಳಿಂದ ರಚಿಸಲಾಗಿದೆ. ಕನ್ನಡ ಚಿತ್ರರಂಗದ 85ರ ಸವಿ ನೆನಪನ್ನು 15 ಸಾವಿರ ಗುಲಾಬಿ ಹೂಗಳನ್ನು ಬಳಸಿ ಸಿದ್ಧಪಡಿಸಲಾಗಿದೆ.

ಪೊಲೀಸ್ ಭದ್ರತೆ: ಲಾಲ್ಬಾಗ್ ಒಳ-ಹೊರ ಆವರಣದಲ್ಲಿ ಮತ್ತು ಎಲ್ಲ ಪ್ರವೇಶ ದ್ವಾರಗಳಲ್ಲಿ ಸೂಕ್ತ ರೀತಿಯಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 3 ಎಸಿಪಿ, 6 ಎಸ್ಸೈ, 150 ಪೊಲೀಸ್ ಸಿಬ್ಬಂದಿ, 2 ಕೆಎಸ್‌ಆರ್‌ಪಿ ವಾಹನ ಸೇರಿದಂತೆ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಾಲಾ ಮಕ್ಕಳಿಗೆ ಪ್ರವೇಶ ಉಚಿತ
ಶಾಲಾ ಮಕ್ಕಳಿಗೆ 8 ದಿನ ಉಚಿತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಅದೇ ರೀತಿ, 4 ದಿನ ರಜೆ ಇದ್ದು, ಈ ವೇಳೆ ಶುಲ್ಕ ನಿಗದಿಪಡಿಸಲಾಗಿದೆ.

ಪಾರ್ಕ್‌ಗೂ ಬಂತು ಜಿಎಸ್‌ಟಿ!
ಈ ಬಾರಿ ಲಾಲ್‌ಬಾಗ್ ಪಾರ್ಕ್‌ನಲ್ಲಿ ಏರ್ಪಡಿಸಿರುವ ಫಲಪುಪ್ಪ ಪ್ರದರ್ಶನ ಪ್ರವೇಶ ದರದಲ್ಲಿ ಜಿಎಸ್‌ಟಿ ಸೇರ್ಪಡೆ ಮಾಡಲಾಗಿದೆ. ಕಳೆದ ಸಾಲಿನಲ್ಲಿ 60 ರೂಪಾಯಿ ಇದ್ದ ಪ್ರವೇಶ ಶುಲ್ಕವನ್ನು ಈ ಬಾರಿ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X