Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಎಸ್‌ಎಫ್‌ಸಿಗೆ 25.55 ಕೋಟಿ ರೂ....

ಕೆಎಸ್‌ಎಫ್‌ಸಿಗೆ 25.55 ಕೋಟಿ ರೂ. ನಿವ್ವಳ ಲಾಭ

ವಾರ್ತಾಭಾರತಿವಾರ್ತಾಭಾರತಿ2 Aug 2018 8:57 PM IST
share

ಮಂಗಳೂರು, ಆ.2: ಕಳೆದ ವರ್ಷದಲ್ಲಿ ಜಾರಿಗೊಂಡ ಸರಕು ಸೇವಾ ತೆರಿಗೆ ಹಾಗೂ ಅನಾಣ್ಯೀಕರಣಗಳ ಪರಿಣಾಮಗಳ ನಡುವೆಯೂ ರಾಜ್ಯ ಹಣಕಾಸು ಸಂಸ್ಥೆಯು ಧನಾತ್ಮಕ ಬೆಳವಣಿಗೆಯನ್ನು ದಾಖಲಿಸಿದೆ. ಸಂಸ್ಥೆಯು ತನ್ನ ಹಣಕಾಸಿನ ಸ್ಥಿತಿಗತಿಗಳನ್ನು ಕ್ರೋಡೀಕರಿಸಿ ಮಾ.2018ರ ಅಂತ್ಯದವರೆಗೆ ಒಟ್ಟು 25.55 ಕೋಟಿ ರೂ. ನಿವ್ವಳ ಲಾಭವನ್ನು ದಾಖಲಿಸಿದೆ.

ಸಂಸ್ಥೆಯು ಮಂಜೂರಾತಿಯಲ್ಲಿ ಅಲ್ಪ ಪ್ರಮಾಣದ ಸುಧಾರಣೆಯನ್ನು ಸಾಧಿಸಿದ್ದರೂ ರಾಜ್ಯ ಸರಕಾರದ ನೆರವಿನಿಂದಾಗಿ, 842.13 ಕೋಟಿ ರೂ. ಮಂಜೂರಾತಿ, 561.21 ಕೋಟಿ ರೂ. ವಿತರಣೆ ಹಾಗೂ 781.91 ಕೋಟಿ ರೂ. ವಸೂಲಾತಿಯನ್ನು ಮಾಡಿದೆ.

ಸಂಸ್ಥೆಯ ವತಿಯಿಂದ ಮಹಿಳಾ ಉದ್ದಿಮೆದಾರರಿಗೆ 200 ಕೋಟಿ ರೂ. ಹಣಕಾಸಿನ ನೆರವನ್ನು ನೀಡಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉದ್ದಿಮೆದಾರರಿಗೆ 269 ಕೋಟಿ ರೂ. ಹಾಗೂ ಮೊದಲ ಪೀಳಿಗೆ ಉದ್ದಿಮೆದಾರರಿಗೆ 77.95 ಕೋಟಿ ರೂ. ಹಣಕಾಸಿನ ನೆರವನ್ನು ನೀಡಿದೆ.

2018-19ನೇ ಸಾಲಿನ ಮುನ್ನೋಟ: ಪ್ರಸಕ್ತ ವರ್ಷದಲ್ಲಿ ಸಂಸ್ಥೆಯು ತನ್ನ ಕಾರ್ಯಾಚರಣೆಯ ಮಂಜೂರಾತಿಯಲ್ಲಿ ಅಲ್ಪ ಪ್ರಮಾಣದ ಸುಧಾರಣೆಯನ್ನು ಕಂಡಿದೆ. ಆದಾಗ್ಯೂ, ಮುಂಬರುವ ವರ್ಷಗಳಲ್ಲೂ, ರಾಜ್ಯದ ಪೂರಕ ಆರ್ಥಿಕತೆಯ ಹಿನ್ನೆಲೆಯಲ್ಲಿ ಹಾಗೂ ಮೊದಲ ಪೀಳಿಗೆ ಉದ್ದಿಮೆದಾರರು, ಮಹಿಳಾ ಉದ್ದಿಮೆದಾರರು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಉದ್ದಿಮೆದಾರರಿಗೆ ಹಾಲಿ ಕರ್ನಾಟಕ ಸರಕಾರದ ಬಡ್ಡಿ ಸಹಾಯಧನ ಯೋಜನೆಗಳಲ್ಲಿ, ಸಾಲದ ಮಿತಿ ಮತ್ತು ಸಾಲ ಮರುಪಾವತಿ ಅವಧಿಯಲ್ಲಿ ವಿಸ್ತರಣೆಯನ್ನು ಮಾಡಿರುವುದರಿಂದ, ಸಂಸ್ಥೆಯು ಧನಾತ್ಮಕ ಬೆಳವಣಿಗೆಯನ್ನು ತೋರುವ ಭರವಸೆಯನ್ನು ಹೊಂದಿದೆ.

ಹಾಲಿ ಉದ್ದಿಮೆದಾರರಿಗೆ ವಿಶೇಷ ಬಡ್ಡಿ ಯೋಜನೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಗ್ರಾಹಕರನ್ನು ಆಕರ್ಷಿಸುವ ನಿರೀಕ್ಷೆಯಿದೆ. ಪ್ರಸಕ್ತ ಸಾಲಿನಲ್ಲಿ ‘ಪೂರಕ ಭದ್ರತಾ ಖಾತರಿ ಯೋಜನೆ’ ಹಾಗೂ ಜವಳಿ ಉದ್ದಿಮೆಗಳನ್ನು ಸ್ಥಾಪಿಸಲು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಉದ್ದಿಮೆದಾರರಿಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿರುವುದು ಸಹ ಸಂಸ್ಥೆಯು ತನ್ನ ಕಾರ್ಯಾಚರಣೆಯಲ್ಲಿ ಮಹತ್ವದ ತಿರುವನ್ನು ಪಡೆಯುವಲ್ಲಿ ಸಹಕಾರಿಯಾಗಲಿದೆ.
ಸಂಸ್ಥೆಯು ಸದರಿ ಸಾಲಿನಲ್ಲಿ ತನ್ನ ವಜ್ರೋತ್ಸವವನ್ನು ಮೈಲಿಗಲ್ಲಾಗಿ ಗುರುತಿಸಲು, ಎಲ್ಲ ಕ್ಷೇತ್ರಗಳಲ್ಲೂ ಅದ್ಭುತ ಬೆಳವಣಿಗೆಯನ್ನು ಸಾಧಿಸುವ ಭರವಸೆಯನ್ನು ಹೊಂದಿದೆ. 2018-19ನ್ನು ‘ವಿತರಣೆಯ ವರ್ಷ’ ಎಂದು ಘೋಷಿಸುವುದರೊಂದಿಗೆ ಬದ್ಧತೆಯ ನೆರವೇರಿಕೆಯಲ್ಲಿ ಬೆಳವಣಿಗೆಯನ್ನು ಕಾಣುವ ಗುರಿಯನ್ನು ಹೊಂದಿದೆ. ಅಲ್ಲದೆ, ಪ್ರಸ್ತುತ ವರ್ಷವನ್ನು ‘ವಸೂಲಾಗದ ಸಾಲಗಳ ವಿಶ್ಲೇಷಣಾ ವರ್ಷ’ ಎಂದು ಸಹ ಘೋಷಿಸಿ ಸಂಸ್ಥೆಯ ಉತ್ತಮವಲ್ಲದ ಸಾಲಗಳ ಪೋರ್ಟ್‌ಫೊಲಿಯೊ (ಅಧಿಕಾರ ಕ್ಷೇತ್ರ)ವನ್ನು ಶುದ್ಧೀಕರಿಸುವ ಕಾರ್ಯಕ್ಕೆ ಪ್ರಚೋದನೆಯನ್ನು ನೀಡಲಾಗಿದೆ.

2018-19ನೇ ಸಾಲಿನ ರಾಜ್ಯ ಸರಕಾರದ ಆಯವ್ಯಯದಲ್ಲಿ ಪ್ರಕಟಿಸಿರುವಂತೆ ಕೆಎಸ್‌ಎಫ್‌ಸಿ ಮುಖಾಂತರ ಸಾಲ ಪಡೆಯುವ ಅತಿಸಣ್ಣ ಮತ್ತು ಸಣ್ಣ ಪ್ರಮಾಣದ ತಯಾರಿಕಾ ಕೈಗಾರಿಕಾ ಘಟಕಗಳ ಉದ್ದಿಮೆದಾರರಿಗೆ ಸಾಲದ ಮೊದಲ ಕಂತನ್ನು ಬಿಡುಗಡೆ ಮಾಡಿದ ದಿನಾಂಕದಿಂದ 5(ಐದು) ವರ್ಷಗಳ ಅವಧಿಗೆ ಶೇ.10ರಷ್ಟು ಬಡ್ಡಿ ಸಹಾಯಧನದ ಸೌಲಭ್ಯ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X