ಮಾಲೂರು ವಿದ್ಯಾರ್ಥಿನಿಯ ಕೊಲೆ ಪ್ರಕರಣ: ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ
ಬೆಂಗಳೂರು, ಆ. 2: ಮಾಲೂರಿನಲ್ಲಿ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಐಎಂಎಸ್‌ಎಸ್ ಮತ್ತು ಎಐಡಿವೈಓ ಸಂಘಟನೆಗಳು ಆಗ್ರಹಿಸಿವೆ.
ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 15 ವರ್ಷದ ಬಾಲಕಿಯ ಶವ ಕಂಡು ಬಂದಿದ್ದು, ಆಕೆಯ ಮೇಲೆ ಅತ್ಯಾವಾರವೆಸಗಿ ಕೊಲೆ ಮಾಡಿರಬಹುದೆಂಬ ಸಂಶಯ ವ್ಯಕ್ತವಾಗಿದೆ. ಇತ್ತೀಚೆಗೆ ಚಿಕ್ಕ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು ಜನರಲ್ಲಿ ಆತಂಕ ಉಂಟುಮಾಡುತ್ತಿದೆ.
ಅಶ್ಲೀಲ ವೆಬ್‌ಸೈಟ್‌ಗಳು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸದಿರುವುದು ಇಂತಹ ಪ್ರಕರಣಗಳು ಹೆಚ್ಚುತ್ತಲೇ ಇವೆ. ಜನಪ್ರತಿನಿಧಿಗಳ ಮೇಲೂ ಅತ್ಯಾಚಾರ ಪ್ರಕರಣಗಳು ಇರುವುದು ವಿಷಾದನೀಯ. ಆದುದರಿಂದ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಹೇಮಾವತಿ ಮತ್ತು ಜಯಣ್ಣ ಆಗ್ರಹಿಸಿದ್ದಾರೆ.
Next Story